Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ (ನವೆಂಬರ್ 11-17) ಏಳು ದಿನಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರದಲ್ಲಿ ನಿಮ್ಮ ಜನ್ಮ ದಿನಾಂಕದ ಪ್ರಕಾರ ಭವಿಷ್ಯ ಹೇಳಲಾಗಿದ್ದು ಈ ವಾರದ ಭವಿಷ್ಯ ಹೇಗಿದೆ ಎಂದು ನೋಡೋಣ:
ಸಂಖ್ಯೆ 1(ಹುಟ್ಟಿದ ದಿನಾಂಕ 1,1ಒ, 19, 28)
ಈ ವಾರ ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವೃತ್ತಿ ಜೀವನದ ಬಗ್ಗೆ ನೋಡುವುದಾದರೆ ಕೆಲಸ ಕಾರ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಲು ಸಾಧ್ಯವಾಗುವುದು, ವ್ಯಾಪಾರಿಗಳಿಗೆ ಈ ದಿನ ತುಂಬಾನೇ ಅನುಕೂಲಕರವಾಗಿರಲಿದೆ. ವ್ಯಾಪಾರಿಗಳಿಗೆ ಈ ವಾರ ಲಾಭದಾಯಕವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಅನುಕೂಲಕರವಾಗಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ನೀವು ಸಂಬಂಧದ ಕಡೆಗೆ ಗಮನಹರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ತಾಳ್ಮೆಯಿಂದ ಪರಿಸ್ಥಿತಿ ಬಗೆಹರಿಸಬೇಕು, ವಿದ್ಯಾರ್ಥಿಗಳಿಗೂ ಈ ಅವಧಿ ಸವಾಲಿನಿಂದ ಕೂಡಿರಲಿದೆ, ಕೆಲಸದಲ್ಲಿಯೂ ತುಂಬಾನೇ ಜಾಗ್ರತೆವಹಿಸಬೇಕು, ವ್ಯಾಪಾರಿಗು ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ.ಆರೋಗ್ಯ ಸಮಸ್ಯೆಗಳಿರಬಹುದು, ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೂ ಧನ ಲಾಭವಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿಯ ಸಂಬಂಧ ಮತ್ತಷ್ಟು ಬಲವಾಗಲಿದೆ.ನಿಮ್ಮ ನಡುವೆ ಏನಾದರೂ ಚಿಕ್ಕ ಮುನಿಸು ಇದ್ದರೆ ಎಲ್ಲವೂ ಮಂಜಿನಂತೆ ಕರಗಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ಈ ವಾರ ಕೆಲಸದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ, ವ್ಯವಹಾರದಲ್ಲಿ ಲಾಭ ಸಿಗಲಿದೆ, ನಿಮ್ಮ ಕೆಲಸದ ಕೌಶಲ್ಯದಿಂದ ಗುರುತಿಸಿಕೊಳ್ಳುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಬಲವಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ.
ಸಂಖ್ಯೆ 5(ಹುಟ್ಟಿದ ದಿನಾಂಕ 5, 14, 23)
ಕೆಲಸದಲ್ಲಿನ ನಿರ್ಲಕ್ಷ್ಯಯಿಂದಾಗಿ ಸಮಸ್ಯೆ ಉಂಟಾಗುವುದು, ನಷ್ಟ ಕೂಡ ಉಂಟಾಗುವುದು ಹಾಗಾಗಿ ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯ ಸಮಸ್ಯೆಗಳಿರಬಹುದು, ಸೂಕ್ತ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಿರಿ. ವೈವಾಹಿಕ ಜೀವನ ಚೆನ್ನಾಗಿರಲಿದ, ನಿಮ್ಮಿಬ್ಬರ ನಡುವೆ ಉತ್ತಮ ಬಾಂಧವ್ಯ ಇರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಕೆಲಸದಲ್ಲಿ ಹೆಚ್ಚಿನ ಒತ್ತಡವಿರಲಿದೆ, ನೀವು ಮೇಲಾಧಿಕಾರಿಗಳ ಜೊತೆ ಮಾತನಾಡುವಾಗ ತಾಳ್ಮೆಯಿಂದ ನಡೆದುಕೊಳ್ಳುವಂತೆ ಸಲಹೆ ನೀಡಲಾಗುವುದು. ನೀವು ಕೆಲಸದಲ್ಲಿ ನಿಮ್ಮಲ್ಲಿನ ಕೌಶಲ್ಯದಿಂದ ಗುರುತಿಸಿಕೊಳ್ಳಬೇಕಾಗಿದೆ. ವ್ಯಾಪಾರಿಗಳಿಗೆ ತಮ್ಮ ವ್ಯವಹಾರದಲ್ಲಿ ತಂತ್ರಗಾರಿಕೆ ಮಾಡುವಂತೆ ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಗಳಿರಬಹುದು. ವೈವಾಹಿಕ ಬದುಕಿನಲ್ಲಿಯೂ ಭಿನ್ನಾಭಿಪ್ರಾಯ, ಅಭದ್ರತೆ ಕಾಡಬಹುದು.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯಗಿರಬಹುದು, ಆದರೆ ಅದನ್ನು ಸರಿಪಡಿಸಲು ಪ್ರಯತ್ನಿಸಬೇಕು, ಕೋಪದಿಂದ ವರ್ತಿಸಬೇಡಿ, ಸಂಗಾತಿಯೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಲು ಪ್ರಯತ್ನಿಸಿ, ವೃತ್ತಿ ಬದುಕಿನಲ್ಲಿಯೂ ಕೆಲ ಸಮಸ್ಯೆಗಳು ಬರಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಜಾಗ್ರತೆವಹಿಸಬೇಕು. ಆರೋಗ್ಯದಲ್ಲಿ ಏರಿತವಿರಬಹುದು, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಸಂಗಾತಿ ನಿಮ್ಮ ಮೇಲೆ ಕೋಪಗೊಳ್ಳಬಹುದು, ಆದರೆ ನೀವು ಜಾಗ್ರತೆಯಿಂದಿರಬೇಕು, ವೃತ್ತಿ ಬದುಕಿನಲ್ಲಿ ಕಾರ್ಯನಿರತವಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ಸವಾಲಿನಿಂದ ಕೂಡಿರಲಿದೆ. ಆರೋಗ್ಯ ವಿಷಯಗಳಲ್ಲಿ ನಿರ್ಲಕ್ಷ್ಯ ಬೇಡ.
ಸಂಖ್ಯೆ 9(ಹುಟ್ಟಿದ ದಿನಾಂಕ 9, 18, 27)
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ. ಆರೋಗ್ಯ ಕೂಡ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











