Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ 1-9 ಜನ್ಮ ಸಂಖ್ಯೆಯ ಭವಿಷ್ಯ ಹೇಳಲಾಗಿದೆ. ನೀವು ಜನಿಸಿರುವ ಜನ್ಮ ದಿನಾಂಕದ ಪ್ರಕಾರ ಈ ಭವಿಷ್ಯ ಹೇಳಲಾಗಿದೆ
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಕಠಿಣ ಪರಿಶ್ರಮವು ಫಲ ಸಿಗಲಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ವಾರ ನೀವು ಅತ್ಯುತ್ತಮ ಫಲ ನೀಡಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಸಿಗಲಿದೆ. ಸಹಣಕಾಸಿನ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ. ವಿಶೇಷವಾಗಿ ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವಾಗ ಹೆಚ್ಚು ಜಾಗರೂಕರಾಗಿರಿ.ಈ ಅವಧಿಯಲ್ಲಿ ನೀವು ಆರೋಗ್ಯದ ಬಗ್ಗೆ ಗಮನಹರಿಸಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ವಾರ ನಿಮಗೆ ಶುಭವಾಗಿದೆ, ಕುಟುಂಬದಲ್ಲಿ ಶುಭ ಇರಲಿದೆ, ಪ್ರತಿಯೊಂದು ಕ್ಷೇತ್ರದಲ್ಲೂ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ವಾರ ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತಾರೆ. ವಾರದ ಮಧ್ಯದಲ್ಲಿ ನೀವು ಕೆಲಸದ ನಿಮಿತ್ತ ಪ್ರಯಾಣಿಸಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಶುಭಕರವಾಗಿರುತ್ತದೆ. ಪ್ರೇಮಿಗಳಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ, ನೀವು ನಿಮ್ಮ ಪ್ರೀತಿಯನ್ನು ಮನೆಯಲ್ಲಿ ಹೇಳಿ ಮನೆಯವರ ಒಪ್ಪಿಗೆ ಪಡೆಯಬಹುದು, ವೈವಾಹಿಕ ಜೀವನ ತುಂಬಾನೇ ಚೆನ್ನಾಗಿರಲಿದೆ. ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಆರೋಗ್ಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ವಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಈ ವಾರವು ಏರಿಳಿತಗಳಿಂದ ಕೂಡಿರಲಿದೆ. ಈ ಅವಧಿಯಲ್ಲಿ ಖರ್ಚುಗಳು ಹೆಚ್ಚಾಗಬಹುದು. ಹಣದ ಕೊರತೆಯಿಂದ ನಿಮ್ಮ ಕೆಲಸಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಇನ್ನು ವೃತ್ತಿ ಜೀವನದ ಬಗ್ಗೆ ಹೇಳುವುದಾದರೆ ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಅವಧಿ ಅನುಕೂಲಕರವಲ್ಲ. ವೈವಾಹಿಕ ಜೀವನದಲ್ಲಿ ಸಂಬಂಧ ಚೆನ್ನಾಗಿರಲಿದೆ, ನಿಮ್ಮ ನಡುವೆ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಯಲಿದೆ. ಕೆಲಸದ ಆಯಾಸ ಮತ್ತು ಒತ್ತಡದಿಂದಾಗಿ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಹಳೆಯ ಕಾಯಿಲೆ ಮರುಕಳಿಸಬಹುದು, ಈ ಬಗ್ಗೆ ಜಾಗ್ರತೆವಹಿಸಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ಆರ್ಥಿಕವಾಗಿ ನಿಮಗೆ ಉತ್ತಮವಿದೆ, ನಿಮ್ಮ ಆದಾಯ ಹೆಚ್ಚಾಗುವ ಬಲವಾದ ಸಾಧ್ಯತೆಯಿದೆ. ಇನ್ನು ನಿಮಗೆ ಬರಬೇಕಾಗಿದ್ದ ಹಣ ಕೂಡ ನಿಮ್ಮ ಕೈ ಸೇರಲಿದೆ. ನಿಮ್ಮ ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ಪ್ರಕರಣವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ದೊಡ್ಡ ಚಿಂತೆ ದೂರವಾಗುತ್ತದೆ. ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲಕರವಾಗಿರುತ್ತದೆ. ನೀವು ಹೊಸ ಕೋರ್ಸ್ ಇತ್ಯಾದಿಗಳನ್ನು ಮಾಡಲು ಬಯಸಿದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಪ್ರೇಮ ಜೀವನದಲ್ಲಿ ಕೆಲವು ಸಮಸ್ಯೆಗಳಿರುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುವುದು. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಇದು ನಿಮ್ಮ ವೈಯಕ್ತಿಕ ಅಥವಾ ವೃತ್ತಿಪರ ಜೀವನವಾಗಿರಲಿ ಈ ವಾರ ನಿಮಗೆ ಮಿಶ್ರಫಲ. ಕೆಲವು ಸಂದರ್ಭಗಳಲ್ಲಿ ನೀವು ನಿರೀಕ್ಷಿಸಿದಂತೆ ಫಲಿತಾಂಶ ಸಿಗಲಿದೆ, ಇನ್ನು ಕೆಲವೊಮ್ಮೆ ನೀವು ನಿರೀಕ್ಷೆ ಮಾಡದಂತೆ ಪ್ರತಿಫಲ ಸಿಗದೆ ನಿರಾಸೆ ಉಂಟಾಗುವುದು. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ, ನಿಮ್ಮ ಕೌಶಲ್ಯಕ್ಕೆ ಉತ್ತಮ ಫಲ ಸಿಗಲಿದೆ. ಆದರೆ ಅಹಂ, ಕೋಪ ನಕಾರಾತ್ಮಕ ಯೋಚನೆಗಳನ್ನು ದೂರವಿಟ್ಟರೆ ಒಳ್ಳೆಯದು. ವ್ಯಾಪಾರಿಗಳು ಅದ್ಭುತ ಯಶಸ್ಸು ಸಿಗಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಭಿನ್ನಾಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ನೀವು ಕೋಪ ಮತ್ತು ಆತುರದಲ್ಲಿ ಯಾವುದೇ ಹೆಜ್ಜೆ ಇಡದಿದ್ದರೆ ಉತ್ತಮ. ಆರೋಗ್ಯದ ಕಡೆಗೆ ಗಮನಹರಿಸಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ವಾರ ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ನೀವು ಉದ್ಯೋಗಿಯಾಗಿದ್ದರೆ ಬಡ್ತಿ ಸಿಗಲಿದೆ, ದೊಡ್ಡ ಪ್ರಾಜೆಕ್ಟ್‌ನಲ್ಲಿ ಭಾಗಿಯಾಗುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಉತ್ತಮ ಕಾರ್ಯಕ್ಷಮತೆಯ ಆಧಾರದ ಮೇಲೆ ನಿಮಗಾಗಿ ವಿಶಿಷ್ಟವಾದ ಗುರುತನ್ನು ರಚಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರಿಗಲೂ ದೊಡ್ಡ ಚೌಕಾಶಿ ಮಾಡಲು ಅವಕಾಶವನ್ನು ಪಡೆಯುತ್ತಾರೆ. ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಇರಲಿದೆ, ಹಣಕಾಸಿನ ಸ್ಥಿತಿ ಬಲಗೊಳ್ಳುತ್ತದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಒಳ್ಳೆಯದು. ನೀವು ಹೊಸ ಆಸ್ತಿಯನ್ನು ಖರೀದಿಸಲು ಬಯಸಿದರೆ ಈ ಸಮಯವು ಸೂಕ್ತವಾಗಿರುತ್ತದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ, ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ಗುರಿಯನ್ನು ಸಾಧಿಸಲು ನೀವು ಹೆಚ್ಚು ಶ್ರಮಿಸಬೇಕು, ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ವ್ಯವಹಾರದಲ್ಲಿ ಹೊಸ ಒಪ್ಪಂದವನ್ನು ಅಂತಿಮಗೊಳಿಸಬಹುದು. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ವೈವಾಹಿಕ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿನ ಸಮಸ್ಯೆ ನಿಮ್ಮ ಸಂಗಾತಿಯ ಸಹಕಾರದಿಂದ ಬಗೆಹರಿಸಲು ಸಾಧ್ಯವಾಗುವುದು. ನೀವು ಮಕ್ಕಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಈ ಅವಧಿಯಲ್ಲಿ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ತಯಾರಿ ನಡೆಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಸ್ಥರು, ಉದ್ಯಮಿಗಳು ಆರ್ಥಿಕ ಲಾಭ ಪಡೆಯಬಹುದು. ಉದ್ಯಮಿಗಳು ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಡುವ ಪ್ರಯಾಣದಿಂದ ಲಾಭ ಗಳಿಸುತ್ತೀರಿ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ನೀವು ವಿವಾಹಿತರಾಗಿದ್ದರೆ ವೈವಾಹಿಕ ಜೀವನದ ಕಡೆಗೆ ಗಮನಹರಿಸಬೇಕು, ವಾರದ ಮಧ್ಯದಲ್ಲಿ ಮನೆಯ ವಾತಾವರಣವು ತುಂಬಾ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ, ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸಬಹುದು. ವಿದ್ಯಾರ್ಥಿಗಳಿಗೆ ಈ ವಾರ ಅತ್ಯಂತ ಮಹತ್ವದ್ದಾಗಿದೆ. ನೀವು ವಿದ್ಯಾರ್ಥಿವೇತನವನ್ನು ಪಡೆಯುವ ಸಾಧ್ಯತೆಯಿದೆ. ನೀವು ವಿದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯಲು ಬಯಸಿದರೆ ನಿಮ್ಮ ದಾರಿಯಲ್ಲಿ ಬರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದೆ. ವ್ಯಾಪಾರಿಗಳು ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











