Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ (ಅಕ್ಟೋಬರ್ 27-ನವೆಂಬರ್ 2) ನಿಮಗೆ ಹೇಗಿರಲಿದೆ? ಶುಭವೇ?
ಸಂಖ್ಯಾಶಾಸ್ತ್ರದಲ್ಲಿ ನಿಮ್ಮ ಜನ್ಮ ದಿನಾಂಕದ ಪ್ರಕಾರ ಭವಿಷ್ಯ ಹೇಳಲಾಗಿದೆ, ಈ ದೀಪಾವಳಿ ವಾರ ನಿಮಗೆ ಹೇಗಿರಲಿದೆ ನೋಡೋಣ:
ಸಂಖ್ಯೆ 1 ((ಜನ್ಮ ಸಂಖ್ಯೆ 1,10,19,28)
ಈ ವಾರ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ, ಹೀಗಾಗಿ ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ, ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ಕುಟುಂಬ ಜೀವನದಲ್ಲಿ ಅನಗ್ಯತ ವಾದ-ವಿವಾದಗಳಿಂದ ದೂರವಿರುವುದು ಒಳ್ಳೆಯದು. ನೀವು ತಾಳ್ಮೆಯಿಂದ ಇದ್ದಷ್ಟೂ ನಿಮ್ಮ ಕುಟುಂಬದ ನೆಮ್ಮದಿ, ಸಂತೋಷ ದೃಷ್ಟಿಯಿಂದ ಒಳ್ಳೆಯದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ಸಂಖ್ಯೆ 2 (ಜನ್ಮ ಸಂಖ್ಯೆ 2,11,20,29)
ವೃತ್ತಿ ಬದುಕಿನ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ. ಮನೆಗೆ ಹೊಸ ಅತಿಥಿ ಬರಬಹುದು. ಆರ್ಥಿಕವಾಗಿ ನೋಡುವುದಾದರೆ ಜವಾಬ್ದಾರಿ ಹೆಚ್ಚಾಗಲಿದೆ, ಇದರಿಂದ ಖರ್ಚು ಹೆಚ್ಚಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 3 (ಜನ್ಮ ಸಂಖ್ಯೆ 3,12,21,30)
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಆರ್ಥಿಕವಾಗಿಯೂ ಈ ಸಮಯ ಉತ್ತಮವಾಗಿದೆ. ಕುಟುಂಬದ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ.
ಸಂಖ್ಯೆ 4 (ಜನ್ಮ ಸಂಖ್ಯೆ 4,13,22,31)
ಈ ವಾರ ನೀವು ತಾಳ್ಮೆಯಿಂದಿರಬೇಕು, ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ಈ ವಾರ ಪಡೆಯುತ್ತೀರಿ. ಕೆಲಸದಲ್ಲಿಯೂ ಹೊಸ ಅವಕಾಶಗಳು ದೊರೆಯಲಿದೆ. ಆರೋಗ್ಯ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಮತ್ತಷ್ಟು ಬಲಪಡಿಸಲು ಪ್ರಯತ್ನಿಸಬೇಕು. ಅವರಿಗೆ ಯಾವುದೋ ಕಾರಣಕ್ಕೆ ಬೇಸರವಾಗಿದ್ದರೆ ಮುಕ್ತ ಮಾತಿನಿಂದ ಬಗೆಹರಿಸಲು ಪ್ರಯತ್ನಿಸಿ.
ಸಂಖ್ಯೆ 5 (ಜನ್ಮ ಸಂಖ್ಯೆ 5,14,23)
ಈ ವಾರ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ಕಂಡು ಬರಲಿದೆ. ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡು ಬರಲಿದೆ. ನಿಮ್ಮ ಕುಟುಂಬದ ವಾತಾವರಣ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆದರೆ ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಬೇಕು. ಮಿತಿಯಲ್ಲಿ ಖರ್ಚು ಮಾಡಲು ಪ್ರಯತ್ನ ಹಾಕಿದರೆ ಒಳ್ಳೆಯದು.
ಸಂಖ್ಯೆ 6 (ಜನ್ಮ ಸಂಖ್ಯೆ 6,15,24)
ಈ ವಾರ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷವಿರಲಿದೆ. ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆಯನ್ನು ಕಾಣಬಹುದು. ಕೆಲಸದಲ್ಲಿನ ಬದ್ಧತೆಯಿಂದಾಗಿ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ನಿಮ್ಮ ಕೆಲಸಕ್ಕೆ ತಕ್ಕ ಫಲ ಸಿಗಲಿದೆ, ಆದರೆ ಕುಟುಂಬ ಜೀವನದ ಕಡೆಗೆ ಗಮನಹರಿಸಿ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನ ಮಾಡಿದರೆ ಒಳ್ಳೆಯದು.
ಸಂಖ್ಯೆ 7 (ಜನ್ಮ ಸಂಖ್ಯೆ 7,16,25)
ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳು ಉಂಟಾಗಬಹುದು, ಕೆಲಸವನ್ನು ಸುಗಮವಾಗಿ ನಿಭಾಯಿಸಿಕೊಂಡು ಹೋಗುವುದು ಕಷ್ಟವಾಗಬಹುದು. ಆರ್ಥಿಕ ವಿಷಯದ ಕಡೆಗೆ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ವಾರ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ.
ಸಂಖ್ಯೆ 8 (ಜನ್ಮ ಸಂಖ್ಯೆ 8,17,26)
ಈ ಅವಧಿಯಲ್ಲಿ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಈ ಸಮಯದಲ್ಲಿ ಖರ್ಚು ಅಧಿಕವಿರಲಿದೆ, ಈ ವಾರ ಮಾನಸಿಕ ಒತ್ತಡ ಹೆಚ್ಚಿರಲಿದೆ. ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ಸಂಬಂಧದ ಕಡೆಗೆ ಗಮನಹರಿಸಿ, ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ವೃತ್ತಿ ಬದುಕಿನ ಕಡಗೆ ಹೆಚ್ಚು ಗಮನಹರಿಸುತ್ತೀರಿ.
ಸಂಖ್ಯೆ 9 (ಜನ್ಮ ಸಂಖ್ಯೆ 9,18,27)
ಈ ವಾರ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಸಂಬಂಧದ ವಿಷಯದಲ್ಲಿ ಈ ವಾರ ಉತ್ತಮವಾಗಿರಲಿದೆ. ನಿಮ್ಮ ಸಂಬಂಧದಲ್ಲಿನ ಸಮಸ್ಯೆ ಬಗೆಹರಿಯಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications