ಸಂಖ್ಯಾಶಾಸ್ತ್ರ ಭವಿಷ್ಯ: ಸೆಪ್ಟೆಂಬರ್ ಮೊದಲ ವಾರ ನಿಮ್ಮ ಜನ್ಮ ಸಂಖ್ಯೆ ಪ್ರಕಾರ ಹೇಗಿರಲಿದೆ?

ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ:

ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)

ಈ ವಾರ ನಿವು ತೆಗೆದುಕೊಳ್ಳುವ ನಿರ್ಧಾರಗಳು ಪ್ರಮುಖವಾಗಿರುತ್ತದೆ, ವೈವಾಹಿಕ ಬದುಕಿನಲ್ಲಿ ಪ್ರೀತಿ ಇರಲಿದೆ, ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿದೆ, ಕುಟುಂಬ ಜೀವನದಲ್ಲಿ ಪ್ರೀತಿ ಇರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ. ಒಟ್ಟಾರೆಯಾಗಿ ಈ ವಾರ ನಿಮಗೆ ಉತ್ತಮವಾಗಿರಲಿದೆ.

weekly numerology

ಸಂಖ್ಯೆ 2(ಹುಟ್ಟಿದ ದಿನಾಂಕ 20, 29)

ಈ ವಾರ ನಿಮಗೆ ದನಾತ್ಮಕವಾಗಿರಲಿದೆ. ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ಯಾವುದೇ ಅೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವಿದ್ಯಾರ್ಥಿಗಳಿಗೂ ಈ ಅವಧಿ ಉತ್ತಮವಿದೆ, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.

ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30 )

ಈ ಸಂಖ್ಯೆಯವರು ಈ ವಾರ ಖುಷಿ ಖುಷಿಯಿಂದ ಸಮಯ ಕಳೆಯುತ್ತೀರಿ. ವೈವಾಹಿಕ ಬದುಕು ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು, ಆರೋಗ್ಯ ಕೂಡ ಚೆನ್ನಾಗಿರಲಿದೆ, ಒಟ್ಟಿನಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ.


ಸಂಖ್ಯೆ 4 ( ಹುಟ್ಟಿದ ದಿನಾಂಕ 4, 22, 31)

ಯಾವುದೇ ನಿರ್ಧಾರವನ್ನು ಗಡಿಬಿಡಿಯಿಂದ ತೆಗೆಯಬೇಡಿ, ಚೆನ್ನಾಗಿ ಆಲೋಚಿಸಿ ತೆಗೆದುಕೊಂಡರೆ ಒಳ್ಳೆಯದು. ಅಲ್ಲದೆ, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೊಳಗಾಗಬಹುದು. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯ ಉಂಟಾದರೆ ಬಗೆಹರಿಸಲು ಪ್ರಯತ್ನಿಸಬೇಕು. ಕೆಲಸದಲ್ಲಿ ಹೆಚ್ಚಿನ ಒತ್ತಡಗಳಿರಬಹುದು, ಆರೋಗ್ಯದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23 )

ಈ ವಾರ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಸಸ್ಸು ದೊರೆಯಲಿದೆ, ಈ ಅವಧಿಯಲ್ಲಿ ಕುಟುಂಬ ಜಿವನ, ವೈವಾಹಿಕ ಜೀವನ ಚೆನ್ನಾಗಿರಲಿದೆ, ನೀವು ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯುವುದರಿಂದ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ಸ್ವಂತ ವ್ಯವಹಾರ ಮಾಡುತ್ತಿರುವವರಿಗೆ ಹೆಚ್ಚಿನ ಲಾಬ ಗಳಿಸಲು ಸಾಧ್ಯವಾಗುವುದು. ಆರೋಗ್ಯ ಉತ್ತಮವಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು.

ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)

ಈ ವಾರ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಈ ಅವಧಿಯಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ಇರಲಿದೆ. ಕೆಲಸದಲ್ಲಿ ನಿಮ್ಮ ಕೆಲಸ ಕಾರ್ಯಗಳು ಬಯಸಿದಂತೆ ನಡೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25)

ಕೆಲಸದಲ್ಲಿ ಅಭದ್ರತೆ ಕಾಡಬಹುದು, ಕೆಲಸ ಕಾರ್ಯದಲ್ಲಿ ಗಮನಹರಿಸಲು ಕಷ್ಟವಾಗುವುದು. ವೃತ್ತಿ ಬದುಕಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗುವುದು. ಆರೋಗ್ಯದ ಬಗ್ಗೆ ನೋಡುವುದಾದರೆ ಅಲರ್ಜಿ ಸಮಸ್ಯೆ ಕಾಡಬಹುದು.

ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)

ಈ ವಾರ ನೀವು ಗಬಯಸಿದಮತೆ ಫಲಿತಾಂಶ ಸಿಗದೆ ಕಷ್ಟವಾಗಬಹುದು. ಈ ಸಮಯದಲ್ಲಿ ಬೆಲೆ ಹಬಾಳುವ ವಸ್ತು ಕಳೆದು ಹೋಗಬಹುದು, ಆದ್ದರಿಂದ ಜಾಗ್ರತೆವಹಿಸಿ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಹೆಚ್ಚಿನ ಶ್ರಮ ಹಾಕಬೇಕು. ಅತ್ಯಧಿಕ ಒತ್ತಡದ ಕಾರಣದ ಸುಲಭದ ಕೆಲಸವೂ ಸವಾಲಾಗಿ ಅನಿಸಬಹುದು, ಆರೋಗ್ಯ ಸಮಸ್ಯೆಯೂ ಇರಲಿದೆ.

ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27 )

ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಾರೆ, ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ, ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ದೊರೆಯಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Numerology: September 1-7 Weekly Numerology Prediction In Kannada

Here is weekly numerology Prediction from September 1-7, read on...
Story first published: Saturday, August 31, 2024, 12:37 [IST]
X
Desktop Bottom Promotion