Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ವಾರ ಭವಿಷ್ಯ: ವಾರ ಭವಿಷ್ಯ ಪ್ರಕಾರ ಈ 5 ರಾಶಿಗಳಿಗೆ ತುಂಬಾನೇ ಶುಭವಾಗಿದೆ
ಗ್ರಹಗತಿಗಳ ಸ್ಥಾನದ ಪ್ರಕಾರ ಭವಿಷ್ಯ ಹೇಳಲಾಗುವುದು, ವೈದಿಕ ಶಾಸ್ತ್ರದ ಪ್ರಕಾರ ಈ ವಾರ 5 ರಾಶಿಗೆ ಅದೃಷ್ಟದ ವಾರವಾಗಿದೆ ನೋಡಿ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿದೆ. ವ್ಯಾಪಾರಿಗಳಿಗೂ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವವರಿಗೆ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಕೂಡ ತುಂಬಾ ಚೆನ್ನಾಗಿರಲಿದೆ. ಆರೋಗ್ಯವೂ ಉತ್ತಮವಾಗಿರುತ್ತದೆ.

ಸಿಂಹ ರಾಶಿ
ಈ ವಾರ ನಿಮಗೆ ಶುಭವಾಗಿದೆ. ಜವಾಬ್ದಾರಿಗಳ ಹೊರೆ ಸ್ವಲ್ಪ ಹೆಚ್ಚಿರಬಹುದು, ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆಯೂ ಪೂರ್ಣವಾಗಲಿದೆ. ಇನ್ನು ಆನ್‌ಲೈನ್ ವ್ಯವಹಾರ ಮಾಡುವವರು ಈ ವಾರ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಈ ವಾರ ನಿಮ್ಮ ಆಹಾರಕ್ರಮದ ಕಡೆ ಗಮನಹರಿಸಿದರೆ ಒಳ್ಳೆಯದು.
ಕನ್ಯಾ ರಾಶಿ
ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಲ್ಲದೆ ಪೂರ್ಣಗೊಳ್ಳುತ್ತೆ. ನೀವು ಹೊಸ ವ್ಯವಹಾರ ಮಾಡಲು ಯೋಚಿಸುತ್ತಿದ್ದರೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವುದು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ.
ಕುಂಭ ರಾಶಿ
ವ್ಯಾಪಾರಿಗಳಿಗೆ ಈ ವಾರ ಲಾಭದಾಯಕವಾಗಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಸ್ವಲ್ಪ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಮೀನ ರಾಶಿ
ಕೆಲಸದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಈ ಅವಧಿಯಲ್ಲಿ ಉನ್ನತ ಅಧಿಕಾರಿಗಳ ಆಶೀರ್ವಾದವೂ ನಿಮ್ಮ ಮೇಲಿರುತ್ತದೆ. ನಿಮ್ಮ ವ್ಯಾಪಾರ ವಿಸ್ತರಣೆ ಯೋಜನೆಯಲ್ಲಿ ಯಾವುದೇ ಅಡಚಣೆಯಿದ್ದರೆ, ನಿಮ್ಮ ಸಮಸ್ಯೆ ಬಗೆಹರಿಯಲಿದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸಂಗಾತಿಯೊಂದಿಗಿನ ಸಂಬಂಧವು ಬಲಗೊಳ್ಳುತ್ತದೆ.
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ಈ ಸಂಖ್ಯೆಯವರಿಗೆ ಅದೃಷ್ಟಕರ
ಸಂಖ್ಯೆ 5
ದಾಂಪತ್ಯ ಜೀವನದಲ್ಲಿ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ವಾರ ವಿಶೇಷವಾಗಿರಲಿದೆ. ಉದ್ಯಮಿಗಳು ತಮ್ಮ ಕೆಲಸದಲ್ಲಿ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 6
ಸಂಗಾತಿ ಜೊತೆ ಏನಾದರೂ ಸಮಸ್ಯೆಯಿದ್ದರೆ ಬಗೆಹರಿದು ನಿಮ್ಮ ಸಂಬಂಧವು ಸುಧಾರಿಸುತ್ತದೆ. ನೀವು ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ನಿಮ್ಮನ್ನು ಹೊಂದಿಕೊಳ್ಳಲು ಪ್ರಯತ್ನಿಸುತ್ತೀರಿ. ಈ ಸಮಯದಲ್ಲಿ, ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೆ ಈ ವಾರ ಲಾಭದಾಯಕವಾಗಿರುತ್ತದೆ. ನಿಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ.
ಸಂಖ್ಯೆ 9
ಈ ವಾರ ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಪರಸ್ಪರ ಹೊಂದಾಣಿಕೆ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ವಾರ ತುಂಬಾ ಒಳ್ಳೆಯದು. ಪರೀಕ್ಷೆಯಲ್ಲಿ ಉತ್ತಮ ಯಶಸ್ಸನ್ನು ಗಳಿಸಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications