Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಈ ವಾರದ ರಾಶಿಫಲ ಪ್ರಕಾರ ನಿಮ್ಮ ಹಾಗೂ ಸಂಗಾತಿ ನಡುವೆ ಸಂಬಂಧ ಹೇಗಿರಲಿದೆ?
ಈ ವಾರದ ರಾಶಿಫಲ ಪ್ರಕಾರ ಈ ವಾರ ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಹೇಗಿರಲಿದೆ?
ಮೇಷ ರಾಶಿ
ಸಂಬಂಧದ ದೃಷ್ಟಿಯಿಂದ ಮಿಶ್ರಫಲ, ನಿಮ್ಮ ವರ್ತನೆ ಸಂಬಂಧದ ಮೇಲೆ ದೊಡ್ಡ ಪರಿಣಾಮ ಬೀರಬಹುದು. ನೀವು ನಿಮ್ಮ ಸಂಗಾತಿಯಭಾವನೆ ಕೂಡ ಗೌರವಿಸುವುದು ಒಳ್ಳೆಯದು,ಇನ್ನು ಏನಾದರು ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಮನೆಯವರ ಸಲಹೆ ಪಡೆಯಿರಿ.
ವೃಷಭ ರಾಶಿ
ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ವಾರ ನೀವು ಖುಷಿಯಿಂದ ಇರುವಿರಿ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಅವಾಹಿತರಿದ್ದರೆ ಮದುವೆ ಪ್ರಸ್ತಾಪ ಬರಬಹುದು.

ಮಿಥುನ ರಾಶಿ
ಸಂಬಂಧದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಏನಾದರೂ ಭಿನ್ನಾಭಿಪ್ರಾಯವಿದ್ದರೆ ಈ ಅವಧಿಯಲ್ಲಿ ಸರಿಯಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ವರ್ತನೆ ಅವರನ್ನು ನೋಯಿಸದಂತೆ ಜಾಗ್ರತೆವಹಿಸಿ. ನೀವು ಅವರ ಮಾತು ಕೂಡ ಕೇಳಿ, ಅವರ ಭಾವನೆಗಳಿಗೆ ಸ್ಪಂದಿಸಿ.
ಸಿಂಹ ರಾಶಿ
ಸಂಬಂಧದ ವಿಷಯದಲ್ಲಿ ಈ ವಾರ ಗ್ರಹತಿಗಳ ಸ್ಥಾನ ನಿಮಗೆ ಅನುಕೂಲಕರವಲ್ಲ, ನೀವು ಕುಟುಂಬದವಿಷಯವನ್ನು ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ಹಾಗೂ ಸಂಗಾತಿ ನಡುವೆ ಮನಸ್ತಾಪ ಬರಬಹುದು. ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು.
ಕನ್ಯಾ ರಾಶಿ
ಸಂಬಂಧದ ಬಗ್ಗೆ ನನೋಡುವುದಾದರೆ ಈ ವಾರ ಕನ್ಯಾ ರಾಶಿಯವರು ಕೂಡ ತುಂಬಾ ಜಾಗ್ರತೆವಹಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ನಿಮ್ಮ ನಡುವೆ ಚಿಕ್ಕ ಸಮಸ್ಯೆ ದೊಡ್ಡದಾಗಬಹುದು, ಈ ಬಗ್ಗೆ ಜಾಗ್ರತೆವಹಿಸಿ.
ತುಲಾ ರಾಶಿ
ಕುಟುಂಬ ಬದುಕಿನ ಕಡೆಗೆ ತುಂಬಾನೇ ಗಮನಹರಿಸಬೇಕು. ಮೂರನೇಯ ವ್ಯಕ್ತಿ ನಿಮ್ಮಿಬ್ಬರ ಬದುಕಿನಲ್ಲಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೋಪ ನಿಯಂತ್ರಿಸಿ ತಾಳ್ಮೆಯಿಂದ ವರ್ತಿಸಿದರೆ ಚಿಕ್ಕ ಸಮಸ್ಯ ದೊಡ್ಡದಾಗುವುದಿಲ್ಲ ಎಂದು ಸಲಹೆ ನೀಡಲಾಗುವುದು.
ವೃಶ್ಚಿಕ ರಾಶಿ
ನಿಮ್ಮ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಮೌನವಾಗಿರುವ ಬದಲಿಗೆ ಮನಸ್ಸು ಬಿಚ್ಚಿ ಮಾತನಾಡುವುದು ಒಳ್ಳೆಯದು, ಸಂಗಾತಿಯ ಮೇಲೆ ಅನುಮಾನ ಪಡಬೇಡಿ, ಅವರನ್ನು ಅರ್ಥ ಮಾಡಿಕೊಳ್ಳಲು ಹೆಚ್ಚು ಸಮಯ ಅವರ ಜೊತೆ ಕಳೆಯಿರಿ.
ಧನು ರಾಶಿ
ಕುಟುಂಬ ಜೀವನ ತುಂಬ ಚೆನ್ನಾಗಿರಲಿದೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಪ್ರೇಮಿಗಳಿಗೂ ಈ ಅವಧಿ ಚೆನ್ನಾಗಿರಲಿದೆ. ಮನೆಯಲ್ಲಿ ಅವಾಹಿತರಿದ್ದರೆ ಶೀಘ್ರವೇ ಶುಭ ಕಾರ್ಯ ನಡೆಯಲಿದೆ, ಅದಕ್ಕೆ ಸಂಬಂಧಿಸಿದ ಮಾತುಕತೆ ನಡೆಯಬಹುದು.
ಮಕರ ರಾಶಿ
ಸಂಬಂಧದ ದೃಷ್ಟಿಯಿಂದ ಮಕರ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಇರಲಿದೆ. ಆರ್ಥಿಕ ನಿರ್ಧಾರಗಳು ಕುಟುಂಬದ ಮೇಲೆ ಪ್ರಭಾವ ಬೀರದಂತೆ ಜಾಗ್ರತೆವಹಿಸಿ.
ಕುಂಭ ರಾಶಿ
ಈ ವಾರ ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಚೆನ್ನಾಗಿರಲಿದೆ. ನೀವಿಬ್ಬರು ಯಾವುದೇ ನಿರ್ಧಾರವಾಗಲಿ ಪರಸ್ಪರ ಬೆಂಬಲಿಸುತ್ತೀರಿ, ಹೀಗಾಗಿ ಕುಟುಂಬದಲ್ಲಿ ನೆಮ್ಮದಿ, ಸಂತೋಷವಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications