Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗರ್ಭಿಣಿಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಳ: ಸಮೀಕ್ಷೆ

ಸ್ತನ ಕ್ಯಾನ್ಸರ್ ವುಳ್ಳ ಗರ್ಭಿಣಿಯರಿಗೆ ಯಾವ ಬಗೆಯ ಚಿಕಿತ್ಸೆ ನೀಡಿಡರೂ ಅನೇಕ ನ್ಯೂನತೆಯುಳ್ಳ ಶಿಶು ಜನಿಸುವುದನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಜರ್ಮನ್ನಿನ ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ವಿವಿಧ ಹಂತಗಳ ಸ್ತನ ಕ್ಯಾನ್ಸರ್ ವುಳ್ಳ 23 ರಿಂದ 47 ವರ್ಷ ವಯಸ್ಸಿನ ಮಹಿಳೆಯರ ಮೇಲೆ ಸುಮಾರು 7 ವರ್ಷಗಳ ಕಾಲ ಅಧ್ಯಯನ ನಡೆಸಲಾಗಿದೆ.
ಕಿಮೋಥೆರೆಪಿಯಿಂದ ಹಿಡಿದು ಲಭ್ಯವಿರುವ ಎಲ್ಲಾ ಚಿಕಿತ್ಸೆವಿಧಾನಗಳನ್ನು ಬಳಸಲಾಯಿತು. ಆದರೂ, ಎರಡು ಶಿಶುಗಳು ಜನ್ಮತಳೆದ ಕೆಲ ಕ್ಷಣಗಳಲ್ಲೆ ಸಾವನ್ನಪ್ಪಿದವು. 29 ಕ್ಕೂ ಅಧಿಕ ಮಹಿಳೆಯರಿಗೆ ಗರ್ಭ ಹೊರುವುದು ಕಷ್ಟವೆನಿಸಿ ತೆಗೆಸಿಬಿಟ್ಟರು. ಕಿಮೋಥೆರಪಿ ಬಳಸದ ಗರ್ಭಿಣಿಯರಿಗೆ ನಿಗದಿತ ವೇಳೆಗಿಂತ ಮುಂಚಿತವಾಗಿ ಮಕ್ಕಳು ಹುಟ್ಟಿದವು. ಈ ಮಕ್ಕಳಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ಕೂಡಾ ಹೆಚ್ಚಾಗಿದೆ ಎಂದು ತಜ್ಞರು ಕಂಡು ಕೊಂಡಿದ್ದಾರೆ.
ಸೂರ್ಯಸ್ನಾನ ಸ್ತನ ಕ್ಯಾನ್ಸರ್ ದೂರ: ವಿಟಮಿನ್ ಡಿ ಪೋಷಕಾಂಶಗಳ ಸೇವನೆ ಮತ್ತು ಸೂರ್ಯನ ಕಿರಣಗಳಿಗೆ ಮೈ ಒಡ್ಡುವುದರಿಂದ ಸ್ತನ ಕ್ಯಾನ್ಸರ್ ಕಾಯಿಲೆಯನ್ನು ದೂರ ಇಡಬಹುದು ಫ್ರಾನ್ಸ್‌ನ ತಜ್ಞ ವೈದ್ಯರ ತಂಡ ಅಭಿಪ್ರಾಯಪಟ್ಟಿದೆ.
ಸೂರ್ಯನ ಕಿರಣಕ್ಕೆ ಅತಿಯಾಗಿ ಮೈ ಒಡ್ಡಿಕೊಳ್ಳುವವರು ಅಥವಾ ವಿಟಮಿನ್ ಡಿ ಅಂಶ ಇರುವ ಆಹಾರವನ್ನು ಅತಿ ಹೆಚ್ಚು ಸೇವಿಸುವವರಲ್ಲಿ ಸ್ತನ ಕ್ಯಾನ್ಸರ್ ಕಡಿಮೆ ಇರುವುದು ಗೊತ್ತಾಗಿದೆ. ಆದರೆ, ಅತಿಯಾಗಿ ಸೂರ್ಯ ಕಿರಣಕ್ಕೆ ಮೈ ಒಡ್ಡಿಕೊಳ್ಳುವುದು ಅಪಾಯಕಾರಿ ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.



Click it and Unblock the Notifications
