Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅಡುಗೆಮನೆಯ ಸಾಸಿವೆ ಎಣ್ಣೆ- ಅದೇನು ಮಾಯೆ, ಅದೇನು ಜಾದೂ!
ನಾವು ದಿನಿತ್ಯ ಬಳಸುವ ಸಾಸಿವೆ ಎಣ್ಣೆಯನ್ನು ಬಳಸಿಕೊಂಡು ದೇಹದ ಸೌಂದರ್ಯವನ್ನು ಯಾವ ರೀತಿ ಕಾಪಾಡಬಹುದು ಎಂದು ಈ ಲೇಖನದಲ್ಲಿ ತಿಳಿದುಕೊಳ್ಳುವ.
ನೋಡಲು ತುಂಬಾ ಚಿಕ್ಕದಾಗಿದ್ದರೂ ಸಾಸಿವೆಯಲ್ಲಿ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ. ಸಾಸಿವೆಯನ್ನು ಪದಾರ್ಥಗಳಲ್ಲಿ ಬಳಕೆ ಮಾಡುವುದು ಸಹಜವಾಗಿದೆ. ಸಾಸಿವೆ ಎಣ್ಣೆಯನ್ನು ಹೆಚ್ಚಿನವರು ಬಳಸುತ್ತಾರೆ. ಆದರೆ ಇದರ ಘಾಟು ಸ್ವಲ್ಪ ಹೆಚ್ಚಿರುವ ಕಾರಣದಿಂದ ದೂರ ಇರುವವರು ಅಷ್ಟೇ ಸಂಖ್ಯೆಯಲ್ಲಿದ್ದಾರೆ. ಸಾಸಿವೆ ಎಣ್ಣೆಯಿಂದ ಆರೋಗ್ಯ ಲಾಭಗಳು ಇವೆ ಎಂದು ಪ್ರತಿಯೊಬ್ಬರಿಗೂ ತಿಳಿದಿದೆ. ಬೆಕ್ಕಸ ಬೆರಗಾಗಿಸುವ ಅರಿಶಿನ ಪುಡಿ+ಸಾಸಿವೆ ಎಣ್ಣೆಯ ಕರಾಮತ್ತು!

ಆದರೆ ಸಾಸಿವೆ ಎಣ್ಣೆಯಲ್ಲಿ ಅಡಗಿರುವಂತಹ ಸೌಂದರ್ಯವರ್ಧಕ ಗುಣಗಳು ಈಗಲೂ ಹೆಚ್ಚಿನವರಿಗೆ ತಿಳಿದಿಲ್ಲ. ಸಾಸಿವೆ ಎಣ್ಣೆಯನ್ನು ಬಳಸಿಕೊಂಡು ನಮ್ಮ ಹಿರಿಯರು ಅವರ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತಿದ್ದರು. ಸಾಸಿವೆಯಲ್ಲಿರುವ ಕೆಲವೊಂದು ಸೌಂದರ್ಯವರ್ಧಕ ಗುಣಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.
ತ್ವಚೆಯ ಕಾಂತಿ ಹೆಚ್ಚಿಸಲು
ಹಿಂದಿನ ಕಾಲದಿಂದಲೂ ಭಾರತದಲ್ಲಿ ಸ್ನಾನಕ್ಕೆ ಮೊದಲು ಸಾಸಿವೆ ಎಣ್ಣೆಯನ್ನು ಹಚ್ಚಿಕೊಂಡು ಮಸಾಜ್ ಮಾಡಲಾಗುತ್ತಿದೆ. ಸ್ನಾನಕ್ಕೆ ಮೊದಲು ಇದನ್ನು ದೇಹಕ್ಕೆ ಹಚ್ಚಿಕೊಂಡು ಮಸಾಜ್ ಮಾಡಬಹುದು. ಮುಖದಲ್ಲಿನ ಕಲೆಗಳನ್ನು ನಿವಾರಣೆ ಮಾಡಲು ಸಾಸಿವೆ ಎಣ್ಣೆಗೆ ಕಡಲೆ ಹಿಟ್ಟು, ಮೊಸರು ಮತ್ತು ಲಿಂಬೆರಸವನ್ನು ಹಾಕಿಕೊಂಡು ಪ್ಯಾಕ್ ಮಾಡಿಕೊಳ್ಳಬಹುದು. ಸಾಸಿವೆ ಎಣ್ಣೆ : ಅಡುಗೆಗೂ ಸೈ, ಕೂದಲಿನ ಸಮಸ್ಯೆಗೂ ಜೈ!
ಮುಖದ ಕಾಂತಿಗೆ
ಚಳಿಗಾಲದಲ್ಲಿ ಕೆಲವು ಹನಿ ಸಾಸಿವೆ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಂಡು ಕೆಲವು ಸಮಯದ ಬಳಿಕ ನೀರಿನಿಂದ ತೊಳೆಯಿರಿ. ಚರ್ಮವು ಈಗ ಮೃಧುವಾಗಿರುತ್ತದೆ. ಈಗ ಫೌಂಡೇಶನ್ ಹಚ್ಚಿ ಮೇಕಪ್ ಮಾಡಿಕೊಳ್ಳಬಹುದು.
ಕೂದಲಿನ ಆರೈಕೆಗೆ
ಚಳಿಗಾಲದಲ್ಲಿ ಕೂದಲಿನ ಆರೈಕೆ ತುಂಬಾ ಮುಖ್ಯವಾಗಿರುತ್ತದೆ. ತಲೆಬುರುಡೆಯಲ್ಲಿ ತುರಿಕೆ, ಕೂದಲು ಉದುರುವಿಕೆ ಹಾಗೂ ತಲೆಹೊಟ್ಟು ಕಾಣಿಸಿಕೊಳ್ಳುತ್ತದೆ. ಸಾಸಿವೆ ಎಣ್ಣೆಯನ್ನು ಬಿಸಿ ಮಾಡಿಕೊಂಡು ತಲೆಬುರುಡೆಗೆ ಹಚ್ಚಿಕೊಳ್ಳಬೇಕು. ಸ್ವಲ್ಪ ಸಮಯ ಬಿಟ್ಟು ಶಾಂಪೂ ಹಾಕಿಕೊಂಡು ಸ್ನಾನ ಮಾಡಿದರೆ ಆರೋಗ್ಯಕರ ಹಾಗೂ ಕಾಂತಿಯುತ ಕೂದಲನ್ನು ನೀವು ಪಡೆಯಬಹುದು. ನಂಬಲೇಬೇಕು 'ಸಾಸಿವೆ ಎಣ್ಣೆ' ಕೂದಲಿಗೆ ಬಹಳ ಒಳ್ಳೆಯದು....
ತುಟಿಗಳ ರಕ್ಷಣೆಗೆ
ಚಳಿಗಾಲದಲ್ಲಿ ತುಟಿ ಒಡೆಯುವುದು ದೊಡ್ಡ ಸಮಸ್ಯೆಯಾಗಿ ಕಾಡುತ್ತಾ ಇರುತ್ತದೆ. ಒಡೆದ ತುಟಿಗಳಿಗೆ ಕೆಲವು ಹನಿ ಸಾಸಿವೆ ಎಣ್ಣೆಯನ್ನು ಹಚ್ಚಿಕೊಳ್ಳಿ. ಇದು ತುಟಿಗಳನ್ನು ಶಮನಗೊಳಿಸುತ್ತದೆ ಮತ್ತು ಮಾರುಕಟ್ಟೆಯಲ್ಲಿ ಸಿಗುವ ಲಿಪ್ಮ ಲಾಮ್ ಗಳಿಗಿಂತ ಇದು ಸುರಕ್ಷಿತ.



Click it and Unblock the Notifications



