Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಹೊಳೆಯುವ ಕೂದಲಿನ ಒಡೆಯರಾಗಲು ಈ ವಿಧಾನ

1. ತಲೆಕೂದಲು ಸೊಂಪಾಗಿ ಬೆಳೆಯಲು ಹರಳೆಣ್ಣೆಯನ್ನು ಹಚ್ಚುವುದು ಒಳ್ಳೆಯದು.
2. ವಾರಕ್ಕೊಮ್ಮೆ ಟೀಯನ್ನು ತಲೆಗೆ ಹಚ್ಚಿ ತೊಳೆದರೆ ತಲೆಕೂದಲು ಕಪ್ಪಾಗಿ ಮತ್ತು ಹೊಳಪಿನಿಂದ ಕೂಡಿರುತ್ತದೆ.
3. ಕಡಲೆಹಿಟ್ಟನ್ನು ಅನ್ನದ ಗಂಜಿಯಲ್ಲಿ ಕಲೆಸಿ ಅದನ್ನು ತಲೆಗೆ ಹಚ್ಚಿ ಅರ್ಧ ಗಂಟೆ ಬಳಿಕ ತೊಳೆಯಬೇಕು.
4.ಒಂದು ಹಿಡಿ ನೆಲ್ಲಿಕಾಯಿಯನ್ನು 1 ಗ್ಲಾಸ್ ಹಾಲಿನಲ್ಲಿ ನೆನೆಹಾಕಿ ನಂತರ ಅದನ್ನು ಪೇಸ್ಟ್ ಮಾಡಿ ತಲೆಗೆ ಹಚ್ಚಿ ಒಂದು ಗಂಟೆ ಬಳಿಕ ತೊಳೆಯಬೇಕು.
5. ಮೊಟ್ಟೆಯ ಬಿಳಿಗೆ 1 ಚಮಚ ಹರಳೆಣ್ಣೆ, 1 ಚಮಚ ಗ್ಲಿಸರಿನ್ ಮಿಶ್ರ ಮಾಡಿ ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ ತೊಳೆದರೆ ಕೂದಲು ಹೊಳಪಿನಿಂದ ಕೂಡಿರುತ್ತದೆ.
6. ತಲೆಗೆ ಸ್ವಲ್ಪ ಬಿಸಿ ಇರುವ ತೆಂಗಿನೆಣ್ಣೆ ಹಚ್ಚಿ, ಟವಲ್ ಅನ್ನು ಬಿಸಿ ನೀರಿನಲ್ಲಿ ಅದ್ದಿ ಅದರ ನೀರನ್ನು ಹಿಂಡಿ ತಲೆಗೆ ಸುತ್ತಬೇಕು. ನಂತರ ಒಂದು ಗಂಟೆಯ ಬಳಿಕ ತೊಳೆಯಬೇಕು. ಈ ರೀತಿ ಮಾಡಿದರೆ ಕೂದಲು ಆರೋಗ್ಯಕರವಾಗಿ ಬೆಳೆಯುತ್ತದೆ.
7. ತೆಂಗಿನೆಣ್ಣೆ ಜೊತೆ ದಾಸವಾದ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ಉಪಯೋಗಿಸಿದರೆ ಕೂದಲು ಉದ್ದ ಮತ್ತು ದಪ್ಪವಾಗಿ ಬೆಳೆಯುತ್ತದೆ.
8. ಕೂದಲನ್ನು ತೊಳೆಯಲು ಸೀಗೆಕಾಯಿಗೆ ಸ್ವಲ್ಪ ನಿಂಬೆಕಾಯಿ ಹಿಂಡಿ, ಆ ಮಿಶ್ರಣದಿಂದ ತಲೆ ತೊಳೆದರೆ ಕೂದಲು ಆಕರ್ಷಕವಾಗಿ ಕಾಣುವುದು.



Click it and Unblock the Notifications
