Latest Updates
-
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು
ಕೂದಲು ಉದುರುವುದನ್ನು ತಡೆಗಟ್ಟುವ ಟ್ರಿಕ್ಸ್
ಪರಿಸರ ಮಾಲಿನ್ಯ, ಆಹಾರಕ್ರಮ, ಒತ್ತಡ, ಕೂದಲಿನ ಆರೈಕೆ ಮಾಡದಿರುವುದು ಇವೆಲ್ಲಾ ಕೂದಲು ಉದುರಲು ಪ್ರಮುಖ ಕಾರಣಗಳಾಗಿವೆ. ಕೂದಲು ಉದುರಲು ಪ್ರಾರಂಭಿಸಿದರೆ ದುಬಾರಿ ಪಾರ್ಲರ್ ಗೆ ಹೋಗುವ ಬದಲು ಅದರ ಬಗ್ಗೆ ನಾವೇ ಸ್ವಲ್ಪ ಗಮನ ಹರಿಸಿದರೆ ಸಾಕು ಕೂದಲು ಉದುರುವುದನ್ನು ತಡೆಗಟ್ಟಬಹುದು.
ಇಲ್ಲಿ ನಾವು ಕೂದಲು ಉದುರುವುದು, ತಲೆ ಹೊಟ್ಟಿನಂತಹ ಸಮಸ್ಯೆ ಕಾಣಿಸಿದರೆ ನೀವೇನು ಮಾಡಬೇಕೆಂದು ವಿವರಿಸಿದ್ದೇವೆ. ಅವುಗಳನ್ನು ಪಾಲಿಸಿದರೆ ಕೂದಲು ಉದುರುವ ಸಮಸ್ಯೆಯನ್ನು ತಡೆಗಟ್ಟಿ ಕೂದಲಿನ ಆರೋಗ್ಯ ಹೆಚ್ಚಿಸಿಕೊಳ್ಳಬಹುದು.

ಬಿಸಿ ಎಣ್ಣೆ ಮಸಾಜ್
ತಲೆಗೆ ಸರಿಯಾಗಿ ಎಣ್ಣೆ ಹಚ್ಚಿ. ಅದರಲ್ಲೂ ತಲೆಗೆ ಎಣ್ಣೆಯನ್ನು ಬಿಸಿ ಮಾಡಿ ಹಚ್ಚಿದರೆ ಕೂದಲಿನ ಬುಡದ ರಂಧ್ರಗಳು ತೆರೆದುಕೊಂಡು ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಇದರಿಂದ ಕೂದಲು ಉದುರುವುದು ಕಡಿಮೆಯಾಗಿ ಆರೋಗ್ಯ ಹೆಚ್ಚಾಗುವುದು.

ಈರುಳ್ಳಿ ರಸ
ಈರುಳ್ಳಿ ರಸವನ್ನು ಎಣ್ಣೆಯ ಜೊತೆ ಮಿಶ್ರಣ ಮಾಡಿ ತಲೆಗೆ ಹಚ್ಚಿದರೆ ತಲೆ ಹೊಟ್ಟು ಮಾಯವಾಗುವುದು, ಕೂದಲು ಕೂಡ ದಪ್ಪವಾಗಿ ಬೆಳೆಯುತ್ತದೆ.

ತಲೆಗೆ ಮಸಾಜ್
ವಾರದಲ್ಲಿ ಎರಡು ಸಲ ತಲೆಗೆ ಎಣ್ಣೆ ಮಸಾಜ್ ಮಾಡಿಕೊಳ್ಳಿ. ನಂತರ ಟವಲ್ ಅನ್ನು ಬಿಸಿ ನೀರಿನಲ್ಲಿ ಅದ್ದಿ ತಲೆಗೆ ಸುತ್ತಿಕೊಳ್ಳಿ. ಈ ರೀತಿ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗಿ ಹೊಸ ಕೂದಲು ಹುಟ್ಟಲಾರಂಭಿಸುತ್ತದೆ.

ಗ್ರೀನ್ ಟೀ
ಗ್ರೀನ್ ಟೀಯನ್ನು ತಗೆ ಹಚ್ಚಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ ಹಾಗೂ ಕೂದಲು ಮಂದವಾಗಿ ಕಾಣುವುದು.

ಒತ್ತಡ
ಮಾನಸಿಕ ಒತ್ತಡವಿದ್ದರೆ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ. ಆದ್ದರಿಂದ ದಿನದಲ್ಲಿ ಸ್ವಲ್ಪ ಸಮಯ ಧ್ಯಾನಕ್ಕಾಗಿ ಮೀಸಲಿಡಿ. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಕೂದಲಿನ ಹಾಗೂ ದೇಹದ ಆರೋಗ್ಯ ಹೆಚ್ಚುತ್ತದೆ.



Click it and Unblock the Notifications
