Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಆಲಿವ್ ಎಣ್ಣೆ-ತಲೆಹೊಟ್ಟಿನ ಸಮಸ್ಯೆಗೆ ರಾಮಬಾಣ
ಹದಿಹರೆಯದವರನ್ನು ಮತ್ತು ವಯಸ್ಕರನ್ನು ಅತೀ ಸಾಮಾನ್ಯವಾಗಿ ಕಾಡುವ ಮತ್ತು ಅತೀ ಕಿರಿಕಿರಿಯನ್ನು೦ಟು ಮಾಡುವ ಸಮಸ್ಯೆಗಳಲ್ಲೊ೦ದು ಈ ತಲೆಹೊಟ್ಟು. ಇದಕ್ಕೆ ವಯಸ್ಸಿನ ಅಂತರವಿಲ್ಲ, ಯಾವಾಗ ಬೇಕಾದರೂ ಕಾಣಿಸಿಕೊಳ್ಳಬಹುದು. ತಲೆಹೊಟ್ಟು ಸಾಮಾನ್ಯವಾಗಿ ಮುಜುಗುರಕ್ಕೀಡಾಗುವ ಸನ್ನಿವೇಶವನ್ನು೦ಟು ಮಾಡುತ್ತದೆ.
ಏಕೆ೦ದರೆ, ತಲೆಹೊಟ್ಟು ತಲೆದೋರಿದಾಗ, ವ್ಯಕ್ತಿಯ ತಲೆಯಿ೦ದ ನಿರ್ಜೀವ ತ್ವಚೆಯು ಸಣ್ಣ ಸಣ್ಣ ತುಣುಕುಗಳ ರೂಪದಲ್ಲಿ ಉದುರುತ್ತವೆ ಅಥವಾ ಕೆಲವೊಮ್ಮೆ ತಲೆಯ ಮೇಲೆ ಹಾಗೆಯೇ ಉಳಿದುಬಿಡುತ್ತವೆ ಇಲ್ಲವೇ ಕೆಲವೊಮ್ಮೆ ಧರಿಸಿಕೊ೦ಡಿರುವ ಬಟ್ಟೆಗಳ ಮೇಲೂ ಉದುರಿಬಿಡುತ್ತವೆ. ತಲೆಹೊಟ್ಟು ನಿವಾರಣೆಗೆ 6 ನೈಸರ್ಗಿಕ ವಿಧಾನ
ಹಾಗಾಗಿ ಇಂತಹ ಸಮಸ್ಯೆಯಿಂದ ಹೊರಬರಲು ಬಹುಶಃ ನೀವು ನಾನಾ ಬಗೆಯ ಮಾರುಕಟ್ಟಯೆಯಲ್ಲಿ ದೊರೆಯುವ ಸೌಂದರ್ಯವರ್ಧಕಗಳ ಮೊರೆ ಹೋಗಿ, ಕೊನೆಗೆ ಯಾವುದೇ ಫಲಿತಾಂಶಗಳು ಕಾಣದೇ ಬೇಸತ್ತು ಹೋಗಿರುವಿರಿ ಅಲ್ಲವೇ?, ಚಿಂತಿಸದಿರಿ ಇದಕ್ಕಾಗಿ ಬೋಲ್ಡ್ ಸ್ಕೈ ಇಂದು ನಿಮಗಾಗಿ ಪರಿಣಾಮಕಾರಿಯಾದ ಆಲಿವ್ ಎಣ್ಣೆಯ ಕುರಿತು ಪರಿಚಯಿಸುತ್ತಿದ್ದು, ತೆಲೆಹೊಟ್ಟಿನ ಸಮಸ್ಯೆಗೆ ಇದು ಶೀಘ್ರ ಪರಿಹಾರ ನೀಡಲಿದೆ ಎಂಬುದರಲ್ಲಿ ಯಾವುದೇ ಸಂಶಯ ಬೇಡ. ಬನ್ನಿ ಇಂದಿನ ಲೇಖನದಲ್ಲಿ ಆಲೀವ್ ಎಣ್ಣೆಯಿಂದ ತಲೆಹೊಟ್ಟನ್ನು ನಿವಾರಿಸಿಕೊಳ್ಳುವ ಕೆಲವೊಂದು ಮಾರ್ಗಗಳ ಕುರಿತು ತಿಳಿಸಿಕೊಡುತ್ತೇವೆ. ಮುಂದೆ ಓದಿ...

ಆಲಿವ್ ಎಣ್ಣೆ ಟೀ ಟ್ರೀ ಆಯಿಲ್ ಜೊತೆಗೆ
ಆಲಿವ್ ಎಣ್ಣೆಯು ಕೂದಲಿನ ಬುಡವನ್ನು ಮೊಯಿಶ್ಚರೈಸ್ ಮಾಡುತ್ತದೆ ಮತ್ತು ಅದಕ್ಕೆ ಸಂಬಂಧಿಸಿದ ತಲೆಹೊಟ್ಟನ್ನು ಸಹ ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ, ಮೊದಲು ಆಲಿವ್ ಎಣ್ಣೆಗೆ ಕೆಲವು ಹನಿಗಳಷ್ಟು ಟೀ ಟ್ರೀ ಎಣ್ಣೆಯನ್ನು ಬೆರೆಸಿಕೊಳ್ಳಿ. ಅದನ್ನು ನಿಮ್ಮ ತಲೆಗೆ ಲೇಪಿಸಿ, ನಂತರ ಇದನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. 15 ದಿನಗಳಿಗೊಮ್ಮೆ ಈ ಪ್ರಕ್ರಿಯೆಯನ್ನು ಪುನರಾವರ್ತಿಸಿ, ಆಗ ಅದರ ಫಲಿತಾಂಶಗಳನ್ನು ನೀವೇ ನೋಡುವಿರಿ.

ಆಲಿವ್ ಎಣ್ಣೆಯ ಜೊತೆಗೆ ಬಾದಾಮಿ ಎಣ್ಣೆ
ಬಾದಾಮಿ ಎಣ್ಣೆ ಮತ್ತು ಆಲಿವ್ ಎಣ್ಣೆಯ ಮಿಶ್ರಣವನ್ನು ಕೂದಲಿನ ಬುಡಕ್ಕೆ ಲೇಪಿಸಿ. ಈ ಮಿಶ್ರಣವನ್ನು ವಾರಕ್ಕೊಮ್ಮೆ ಬಳಸುತ್ತಿದ್ದರೆ, ಅದು ತಲೆಹೊಟ್ಟನ್ನು ಸಂಪೂರ್ಣವಾಗಿ ಹೋಗಲಾಡಿಸುತ್ತದೆ.

ಆಲಿವ್ ಎಣ್ಣೆಯ ಜೊತೆಗೆ ಆಪಲ್ ಸಿಡೆರ್ ವಿನೀಗರ್
ಆಲೀವ್ ಎಣ್ಣೆಯಿಂದ ನಿಮ್ಮ ಕೂದಲನ್ನು ಕೆಲವು ನಿಮಿಷಗಳ ಕಾಲ ಮಸಾಜ್ ಮಾಡಿ. ಇದನ್ನು ಸ್ವಲ್ಪ ಸಮಯ ಹಾಗೆಯೇ ಬಿಡಿ ಮತ್ತು ಮೆದುವಾದ ಶಾಂಪೂವಿನಿಂದ ಕೂದಲನ್ನು ಚೆನ್ನಾಗಿ ತೊಳೆಯಿರಿ. ಹೀಗೆ ತೊಳೆಯುವಾಗ ಆಪಲ್ ಸಿಡೆರ್ ವಿನೀಗರ್ ಅನ್ನು ಕಂಡೀಶನರ್ ಆಗಿ ಬಳಸಿ. ಈ ಪ್ರಕ್ರಿಯೆಯು ಸ್ವಾಭಾವಿಕವಾಗಿ ನಿಮ್ಮ ಕೂದಲನ್ನು ಕಂಡೀಶನ್ ಮಾಡುತ್ತದೆ ಮತ್ತು ಕೂದಲಿನ ಬುಡವನ್ನು ಸದೃಢಗೊಳಿಸುತ್ತದೆ, ಜೊತೆಗೆ ತಲೆಹೊಟ್ಟನ್ನು ನಿವಾರಿಸುತ್ತದೆ.

ಅವೊಕ್ಯಾಡೊ ಜೊತೆಗೆ ಆಲಿವ್ ಎಣ್ಣೆ
ಆಲಿವ್ ಎಣ್ಣೆ ಮತ್ತು ಅವೊಕ್ಯಾಡೊ ಮಿಶ್ರಣವನ್ನು ತಲೆ ಹೊಟ್ಟು ನಿವಾರಿಸಿಕೊಳ್ಳಲು ಸಮರ್ಪಕವಾಗಿ ಬಳಸಿಕೊಳ್ಳಬಹುದು. ಇದು ಕೂದಲನ್ನು ಹೊಳಪಿನಿಂದ ಕಂಗೊಳಿಸುವಂತೆ ಮಾಡುವುದರ ಜೊತೆಗೆ ಆರೋಗ್ಯಕರವಾಗಿ ಸಹ ಇರುವಂತೆ ಮಾಡುತ್ತದೆ. ಇದಕ್ಕಾಗಿ ಅವೊಕ್ಯಾಡೊಗಳನ್ನು ಜಜ್ಜಿಕೊಂಡು ಅದನ್ನು 2 ಟೇಬಲ್ ಚಮಚ ಆಲೀವ್ ಎಣ್ಣೆಯ ಜೊತೆಗೆ ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ನಿಮ್ಮ ಕೂದಲಿನ ಮೇಲೆ ಲೇಪಿಸಿಕೊಳ್ಳಿ, ಹಾಗು ಮೃದುವಾಗಿ ಕೆಲವು ನಿಮಿಷಗಳ ಕಾಲ ಮಸಾಜ್ ಸಹ ಮಾಡಿ. ಈ ಪ್ರಕ್ರಿಯೆಯನ್ನು ವಾರಕ್ಕೊಮ್ಮೆ ಪುನರಾವರ್ತಿಸಿ. ತಲೆಹೊಟ್ಟು ನಿವಾರಣೆಯಾಗುತ್ತದೆ.



Click it and Unblock the Notifications