Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬರೀ ಎರಡೇ ದಿನಗಳಲ್ಲಿ ಕೂದಲುದುರುವ ಸಮಸ್ಯೆ ನಿಯಂತ್ರಣಕ್ಕೆ!
ಇಂದಿನ ದಿನಗಳಲ್ಲಿ ವಯಸ್ಸು ಇಪ್ಪತ್ತೈದು ಎಂದರೆ ಸಾಕು, ಪುರುಷ ಹಾಗೂ ಮಹಿಳೆಯರಲ್ಲಿ ಸೊಂಪಾಗಿ ಬೆಳೆಯಬೇಕಿದ್ದ ಕೂದಲು ಸಂಕುಚಿತವಾಗಿ ಉದುರಲು ಪ್ರಾರಂಭವಾಗುತ್ತದೆ! ಹಿಂದಿನ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಇಂದು ಹಾಗಲ್ಲ, ಹದಿಹರೆಯದವರ ಕೂದಲು ಉದುರಲು ಆರಂಭವಾಗಿದ್ದು, ಇದು ದಿನೇ ದಿನೇ ಹೆಚ್ಚುತ್ತಿದೆ.
ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ದೂಷಿಸಬಹುದು. ಈ ಕಾರಣಗಳು ಮಾತ್ರವಲ್ಲದೆ ಕ್ರಮಬದ್ಧವಲ್ಲದ ಆಹಾರಕ್ರಮ, ಕಲವು ಔಷಧಿಗಳ ಅಡ್ಡ ಪರಿಣಾಮ, ವಿಟಮಿನ್ ಮತ್ತು ಖನಿಜಾಂಶ ಕೊರತೆಯಿಂದ ಕೂಡ ಕೂದಲು ಉದುರುತ್ತದೆ. ಹಾಗಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರಗಳಿಲ್ಲವೇ...? ಕೂದಲುದುರುವ ಸಮಸ್ಯೆ: ಆಹಾರ ಕ್ರಮ ಹೀಗಿರಲಿ
ಖಂಡಿತವಾಗಿಯೂ ಇದೆ, ಈ ನಿಟ್ಟಿನಲ್ಲಿ ಬೋಲ್ಡ್ ಸ್ಕೈ ಸರಳವಾದ ನೈಸರ್ಗಿಕ ಮನೆಮದ್ದನ್ನು ಸೂಚಿಸಿದ್ದು, ಇದು ಯಾವುದೇ ಅಡ್ಡಪರಿಣಾಮಗಳು ಬೀರದೇ ಅತ್ಯ೦ತ ತ್ವರಿತಗತಿಯಲ್ಲಿ ಕೂದಲು ಉದುರುವುದನ್ನು ಪರಿಹರಿಸಬಲ್ಲ ಶಕ್ತಿ ತನ್ನಲ್ಲಿ ಅಡಗಿಸಿಕೊಂಡಿದೆ, ಬನ್ನಿ ಅವು ಯಾವುದು ಎಂಬುದನ್ನು ಮುಂದೆ ಓದಿ..

ಹೇರ್ ಪ್ಯಾಕ್ ಮಾಡಲು ಬೇಕಾಗುವ ಸಾಮಗ್ರಿಗಳು
*ಸಾಸಿವೆ ಎಣ್ಣೆ- ಎರಡು ಟೇಬಲ್ ಚಮಚ
*ದಾಲ್ಚಿನ್ನಿ ಪುಡಿ- 2 ಟೀಚಮಚ ಸಾಸಿವೆ ಎಣ್ಣೆ: ಕೂದಲಿನ ಸಮಸ್ಯೆಗಳಿಗೆ ಹೇಳಿ ಮಾಡಿಸಿದ ಮನೆಮದ್ದು
ತಯಾರಿಸುವ ಮತ್ತು ಬಳಸುವ ವಿಧಾನ
•ಮೇಲೆ ಹೇಳಿದಷ್ಟು ಪ್ರಮಾಣದ ಸಾಮಗ್ರಿಗಳನ್ನು ಒಂದು ಸಣ್ಣ ಬೌಲ್‌ಗೆ ಹಾಕಿಕೊಂಡು ಮಿಶ್ರಣ ಮಾಡಿ.
•ಈ ಮಿಶ್ರಣವನ್ನು ಸರಿಯಾಗಿ ಕಲಸಿಕೊಳ್ಳಿ.
•ಇನ್ನು ಇದನ್ನು ಕೂದಲಿಗೆ ಸರಿಯಾಗಿ ಹಚ್ಚಿಕೊಳ್ಳಿ. ಅದರಲ್ಲೂ ತಲೆಬುರುಡೆಗೆ ಹೆಚ್ಚು ಹಚ್ಚಿಕೊಳ್ಳಿ.
•ಕೆಲವು ನಿಮಿಷಗಳ ಕಾಲ ತಲೆಗೆ ಮಸಾಜ್ ಮಾಡಿಕೊಳ್ಳಿ.
•25 ನಿಮಿಷಗಳ ಕಾಲ ಕೂದಲನ್ನು ಹಾಗೆ ಬಿಡಿ.
•ನಂತರ ಕೂದಲನ್ನು ಉಗುರುಬೆಚ್ಚಗಿನ ನೀರು ಹಾಗೂ ಶಾಂಪೂನಿಂದ ತೊಳೆಯಿರಿ, ಉತ್ತಮ ಫಲಿತಾಂಶಕ್ಕಾಗಿ ದಿನದಲ್ಲಿ ಎರಡು ಮೂರು ಬಾರಿ ಮಾಡಿ......
ಇನ್ನೊಂದು ವಿಧಾನ
*ಒಂದು ಲೋಟ ಮೆಂತೆ ಬೀಜಕ್ಕೆ ನೀರನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಂಡು ಪೇಸ್ಟ್ ನಂತೆಮಾಡಿಕೊಳ್ಳಿ
*ನಂತರ ಅದನ್ನು ತಲೆಗೆ ಹಚ್ಚಿ 40 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ನೀರಿನಲ್ಲಿ ಕೂದಲನ್ನು ಸ್ವಚ್ಛಗೊಳಿಸಿ.
*ಹೀಗೆ ಒಂದು ತಿಂಗಳ ಕಾಲ ನಿರಂತರವಾಗಿ ಮಾಡಿದರೆ ಕೂದಲುದುರುವಿಕೆ ಕಡಿಮೆಯಾಗುತ್ತದೆ. ಅಡುಗೆಮನೆಯ ಮೆಂತೆ- ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು!



Click it and Unblock the Notifications


