ಒಂದೆರಡು ವಾರದಲ್ಲಿಯೇ ಬಳಿ ಕೂದಲನ್ನು ಕಪ್ಪು ಮಾಡುವ ಮನೆಮದ್ದುಗಳು

Posted By: Deepu
Subscribe to Boldsky

ಕೂದಲು ನೆರೆಯುವುದಕ್ಕೆ ಅಥವಾ ಬಿಳಿಯಾಗುವುದಕ್ಕೆ ಇಂತಿಷ್ಟೇ ಎಂಬ ವಯಸ್ಸಿನ ನಿರ್ಬಂಧವಿಲ್ಲ. ಕೆಲವರಿಗೆ ಇಪ್ಪತ್ತರಲ್ಲಿಯೇ ನೆರೆಯಲು ಪ್ರಾರಂಭಿಸಿದರೆ ಕೆಲವರಿಗೆ ಐವತ್ತರ ಬಳಿಕ ಪ್ರಾರಂಭವಾಗಬಹುದು. ಆದರೆ ಯಾವಾಗ ಪ್ರಾರಂಭವಾದರೂ ಇದು ಆತಂಕವನ್ನು ಮಾತ್ರ ತಪ್ಪದೇ ತರುತ್ತದೆ. ಏಕೆಂದರೆ ಕೂದಲು ನೆರೆಯುವುದು ವೃದ್ಧಾಪ್ಯದ ಲಕ್ಷಣ ಎಂದೇ ಎಲ್ಲರೂ ಅಂದುಕೊಂಡಿದ್ದಾರೆ.

ಇದನ್ನು ತಡೆಯಲು ಮಾಡದ ಪ್ರಯತ್ನವಿಲ್ಲ, ಅನುಸರಿಸದ ವಿಧಾನವಿಲ್ಲ. ಆದರೂ ಯಾವುದೇ ಪ್ರಯತ್ನ ಶೇಖಡಾ ನೂರರಷ್ಟು ಫಲ ನೀಡುತ್ತಿಲ್ಲ. ಕೂದಲ ನೆರೆಯುವಿಕೆಗೆ ಸ್ಪಷ್ಟವಾದ ಕಾರಣ ಇದುವರೆಗೆ ಗೊತ್ತಾಗಿಲ್ಲ. ಸ್ಥೂಲವಾಗಿ ಹೇಳಬೇಕೆಂದರೆ ತಾಮ್ರದ ಕೊರತೆಯಿಂದ ಕೂದಲಿಗೆ ಬಣ್ಣ ನೀಡುವ ಮೆಲನಿನ್ ಎಂಬ ವರ್ಣದ್ರವ್ಯ ಉತ್ಪತ್ತಿಯಾಗದೇ ಬಣ್ಣ ನೆರೆಯತೊಡಗುತ್ತದೆ. ಕೆಲವು ಊಹಾಪೋಹಗಳ ಪ್ರಕಾರ ಕೇಸರಿ ಬಣ್ಣದ ಬೇಳೆ ತಿನ್ನುವ ಕಾರಣದಿಂದಲೂ ಕೂದಲು ಅಕಾಲಿಕವಾಗಿ ನೆರೆಯುತ್ತದೆಯಂತೆ!, ಅಂತಹ ಕಟ್ಟು ಕಥೆಗಳನ್ನೆಲ್ಲಾ ಪಕ್ಕಕ್ಕಿಟ್ಟು ಕೂದಲು ಬಿಳಿಯಾಗುವ ಸಮಸ್ಯೆಯಿಂದ ಪಾರಾಗಲು ಕೆಲವೊಂದು ಸಿಂಪಲ್ ಮನೆಮದ್ದುಗಳನ್ನು ಪರಿಚಯಿಸುತ್ತಿದ್ದೇವೆ ಮುಂದೆ ಓದಿ....

ಬಾದಾಮಿ ಎಣ್ಣೆ

ಬಾದಾಮಿ ಎಣ್ಣೆ

ಸಮಪ್ರಮಾಣದಲ್ಲಿ ಬಾದಾಮಿ ಎಣ್ಣೆ, ಲಿಂಬೆರಸ ಮತ್ತು ನೆಲ್ಲಿಕಾಯಿಯ ರಸಗಳನ್ನು ಮಿಶ್ರಣಮಾಡಿಕೊಂಡು (ಬಿಸಿ ಮಾಡಬಾರದು) ನೇರವಾಗಿ ಕೂದಲಿಗೆ ಹಾಗೂ ಕೂದಲ ಬುಡಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ಬಿಳಿಗೂದಲು ಶೀಘ್ರವೇ ಕಪ್ಪಗಾಗುತ್ತದೆ.

ಕರಿಬೇವಿನ ಎಲೆ

ಕರಿಬೇವಿನ ಎಲೆ

ಚಿಕ್ಕ ಉರಿಯಲ್ಲಿ ಕೊಬ್ಬರಿ ಎಣ್ಣೆಯನ್ನು ಬಿಸಿಮಾಡಿ ಕೆಲವು ಕರಿಬೇವಿನ ಎಲೆಗಳನ್ನು ಬೇಯಿಸಬೇಕು. ತಣ್ಣಗಾದ ಬಳಿಕ ಈ ಎಣ್ಣೆಯನ್ನು ಕೂದಲ ಬುಡಕ್ಕೆ ನಯವಾಗಿ ಮಸಾಜ್ ಮಾಡುವುದರಿಂದ ಬಿಳಿ ಕೂದಲು ಕಪ್ಪಗಾಗತೊಡಗುತ್ತದೆ. ಈ ಎಣ್ಣೆಗೆ ಕೊಂಚ ಮೊಸರನ್ನು ಅಥವಾ ಮಜ್ಜಿಗೆಯನ್ನು ಸೇರಿಸಿಯೂ ಬಳಸಬಹುದು.

ಈರುಳ್ಳಿ

ಈರುಳ್ಳಿ

ಈರುಳ್ಳಿಯ ರಸವನ್ನು ಹಿಂಡಿಹೊಂಡು ಸ್ವಲ್ಪ, ಸ್ವಲ್ಪವಾಗಿಯೇ ಕೂದಲ ಬುಡಕ್ಕೆ ಹಚ್ಚಿ ಮಾಲಿಶ್ ಮಾಡುವುದರಿಂದ ಕೂದಲು ಬಳಿಯಾಗದಂತೆ ತಡೆಯಬಹುದು ಹಾಗೂ ಕೂದಲುದುರುವುದನ್ನೂ ತಡೆಯಬಹುದು.

 ಮೆಹೆಂದಿ ಮತ್ತು ಮೊಸರು

ಮೆಹೆಂದಿ ಮತ್ತು ಮೊಸರು

ಪರಿಶುದ್ಧವಾದ ಮೆಹೆಂದಿಯನ್ನು ಇದಕ್ಕೆ ಬಳಸಿ. ಪ್ಯಾಕ್‌ ಮಾಡಿರುವ ಮೆಹಂದಿಯನ್ನು ಬಳಸಬೇಡಿ. ರಾಸಾಯನಿಕಗಳಿಂದ ಮುಕ್ತವಾದ ಮೆಹಂದಿಯು ಇದಕ್ಕೆ ಒಳ್ಳೆಯದು. ಇದನ್ನು ಮಾಡಲು ಮೆಹಂದಿಯನ್ನು ನೀರಿನ ಬದಲಿಗೆ ಬ್ಲಾಕ್ ಟೀಯಲ್ಲಿ ನೆನೆಸಿ. ರಾತ್ರಿಯಿಡೀ ಇದನ್ನು ನೆನೆಯಲು ಬಿಟ್ಟು, ಬೆಳಗ್ಗೆ ಇದಕ್ಕೆ ಒಂದು ಟೇಬಲ್ ಚಮಚ ಆಲೀವ್ ಎಣ್ಣೆಯನ್ನು ಬೆರೆಸಿ. ನಂತರ ಅರ್ಧ ಕಪ್ ಮೊಸರು ಅಥವಾ ಒಂದು ಮೊಟ್ಟೆಯನ್ನು ಬೆರೆಸಿಕೊಳ್ಳಿ. ಆಮೇಲೆ ಇದನ್ನು ನಿಮ್ಮ ಕೂದಲಿಗೆ ಲೇಪಿಸಿ. 30 ನಿಮಿಷ ಬಿಟ್ಟು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ, ಹೀಗೆ ವಾರದಲ್ಲಿ ಎರಡು ಮೂರು ದಿನ ಮಾಡುವುದರಿಂದ ಹೊಳಪಿನ ನೈಸರ್ಗಿಕವಾಗಿ ಕಪ್ಪಗಾಗಿರುವ ಕೂದಲನ್ನು ಪಡೆಯಬಹುದು.

ಹಾಲಿನ ಕೆನೆ ಮತ್ತು ಮೊಟ್ಟೆಯ ಪ್ಯಾಕ್

ಹಾಲಿನ ಕೆನೆ ಮತ್ತು ಮೊಟ್ಟೆಯ ಪ್ಯಾಕ್

ಒಂದು ಬಟ್ಟಲು ತೆಗೆದುಕೊಂಡು ಅದರಲ್ಲಿ ಎರಡು ಟೇಬಲ್ ಚಮಚ ತಾಜಾ ಹಾಲಿನ ಕೆನೆಯನ್ನು ಹಾಕಿಕೊಳ್ಳಿ, ಇದಕ್ಕೆ 2 ಮೊಟ್ಟೆಗಳನ್ನು ಒಡೆದು ಕಲೆಸಿ. ಇವೆರಡನ್ನು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಈ ಪ್ಯಾಕ್ ಅನ್ನು ನಿಮ್ಮ ಕೂದಲು ಮತ್ತು ಅದರ ಬುಡಕ್ಕೆ ಲೇಪಿಸಿ. ಶವರ್ ಕ್ಯಾಪ್‍ನಿಂದ ಮುಚ್ಚಿಕೊಳ್ಳಿ. 30 ನಿಮಿಷಗಳ ನಂತರ ತಣ್ಣೀರಿನಲ್ಲಿ ಶಾಂಪೂ ಮಾಡಿಕೊಂಡು ಇದನ್ನು ತೊಳೆಯಿರಿ.

ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆಯೊಂದಿಗೆ ಬಳಸಿ ಕೂದಲ ಆರೈಕೆಗೆ ಕೊಬ್ಬರಿ ಎಣ್ಣೆ ಅತ್ಯುತ್ತಮ ಆಯ್ಕೆಯಾಗಿದೆ. ಕೂದಲ ಬೆಳವಣಿಗೆಯನ್ನು ಹೆಚ್ಚಿಸಲು ಕೊಂಚ ಈರುಳ್ಳಿ ರಸವನ್ನು ಬಿಸಿಮಾಡಿದ ಕೊಬ್ಬರಿ ಎಣ್ಣೆಯೊಂದಿಗೆ ಮಿಶ್ರಣ ಮಾಡಿ ಬಳಿಕ ತಲೆಗೆ ಹಚ್ಚಿಕೊಳ್ಳಿ. ತಲೆಗೂದಲ ಬುಡದಿಂದ ತುದಿಯವರೆಗೆ ಇದು ಆವರಿಸುವಂತೆ ನೋಡಿಕೊಳ್ಳಿ. ಸುಮಾರು ಒಂದು ಗಂಟೆ ಹಾಗೇ ಬಿಟ್ಟು ಬಳಿಕ ಉಗುರುಬೆಚ್ಚನೆಯ ನೀರು ಮತ್ತು ಸೌಮ್ಯ ಶಾಂಪೂ ಬಳಸಿ ತೊಳೆದುಕೊಳ್ಳಿ.

ಆಲೂಗಡ್ಡೆಯ ಮಾಸ್ಕ್

ಆಲೂಗಡ್ಡೆಯ ಮಾಸ್ಕ್

ನಿಮ್ಮ ಬಿಳಿಕೂದಲನ್ನು ಕಪ್ಪಗಾಗಿಸಲು, ಹಸಿ ಆಲೂಗಡ್ಡೆಯನ್ನು ಬೇಯಿಸಿಕೊಳ್ಳಿ ನಂತರ ಆ ನೀರಿನಿಂದ ಕೂದಲನ್ನು ತೊಳೆದುಕೊಳ್ಳಿ. ಒಣಗಿದ ನಂತರ ಕೂದಲಿಗೆ ಮೊಸರಿನ ಮಾಸ್ಕ್ ಅನ್ನು ಹಚ್ಚಿಕೊಳ್ಳಿ ಹತ್ತು ನಿಮಿಷಗಳ ನಂತರ ಕೂದಲನ್ನು ತೊಳೆದುಕೊಳ್ಳಿ.

ಹಾಗಲಕಾಯಿ ಮಾಸ್ಕ್!

ಹಾಗಲಕಾಯಿ ಮಾಸ್ಕ್!

ನಿಮ್ಮ ಬಿಳಿ ಕೂದಲನ್ನು ಕಪ್ಪಗಾಗಿಸಲು ಈ ಸರಳ ಟಿಪ್ಸ್ ಅನ್ನು ನಿಮ್ಮದಾಗಿಸಿ ಕೊಳ್ಳಬಹುದಾಗಿದೆ. ತೆಂಗಿನ ಎಣ್ಣೆಯೊಂದಿಗೆ ಹಾಗಲಕಾಯಿಯನ್ನು ಬೇಯಿಸಿಕೊಳ್ಳಿ ಬೆಂದ ನಂತರ ಅದನ್ನು ಎಣ್ಣೆಯೊಂದಿಗೆ ಹಿಸುಕಿಕೊಳ್ಳಿ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿಕೊಳ್ಳಿ. ಐದು ಬಾರಿ ಪ್ರಯೋಗ ಮಾಡಿದ ನಂತರ ನೀವು ಅದ್ಭುತ ಪ್ರಯೋಜನವನ್ನು ಪಡೆದುಕೊಳ್ಳುವುದು ಖಂಡಿತ.

ಲೋಳೆ ರಸ ಮತ್ತು ಮೊಟ್ಟೆ

ಲೋಳೆ ರಸ ಮತ್ತು ಮೊಟ್ಟೆ

ಅರ್ಧ ಕಪ್ ಲೋಳೆ ರಸ ಜೊತೆಗೆ ಒಂದು ಮೊಟ್ಟೆಯ ಬಿಳಿಭಾಗವನ್ನು ಮಿಶ್ರಣ ಮಾಡಿಕೊಂಡು ಪೇಸ್ಟ್‌ನಂತೆ ತಯಾರಿಸಿಕೊಳ್ಳಿ. ಈ ಪೇಸ್ಟನ್ನು ನಿಮ್ಮ ಕೂದಲು ಮತ್ತು ಅದರ ಬುಡಕ್ಕೆ ಲೇಪಿಸಿ. ಇದನ್ನು 30 ನಿಮಿಷ ಬಿಡಿ, ನಂತರ ತೊಳೆಯಿರಿ. ಈ ಹೇರ್ ಮಾಸ್ಕ್ ನಿಮ್ಮ ಕೂದಲಿಗೆ ಹೊಳಪನ್ನು ನೀಡುವುದರ ಜೊತೆಗೆ, ಬಿಳಿಗೂದಲು ಶೀಘ್ರವೇ ಕಪ್ಪಗಾಗುತ್ತದೆ.

English summary

Simple and powefull Home Remedies For Gray Hair That Really Work

ಕೆಲವರಿಗೆ ಇಪ್ಪತ್ತರಲ್ಲಿಯೇ ನೆರೆಯಲು ಪ್ರಾರಂಭಿಸಿದರೆ ಕೆಲವರಿಗೆ ಐವತ್ತರ ಬಳಿಕ ಪ್ರಾರಂಭವಾಗಬಹುದು. ಆದರೆ ಯಾವಾಗ ಪ್ರಾರಂಭವಾದರೂ ಇದು ಆತಂಕವನ್ನು ಮಾತ್ರ ತಪ್ಪದೇ ತರುತ್ತದೆ. ಏಕೆಂದರೆ ಕೂದಲು ನೆರೆಯುವುದು ವೃದ್ಧಾಪ್ಯದ ಲಕ್ಷಣ ಎಂದೇ ಎಲ್ಲರೂ ಅಂದುಕೊಂಡಿದ್ದಾರೆ. ಇದನ್ನು ತಡೆಯಲು ಮಾಡದ ಪ್ರಯತ್ನವಿಲ್ಲ, ಅನುಸರಿಸದ ವಿಧಾನವಿಲ್ಲ. ಆದರೂ ಯಾವುದೇ ಪ್ರಯತ್ನ ಶೇಖಡಾ ನೂರರಷ್ಟು ಫಲ ನೀಡುತ್ತಿಲ್ಲ. ಚಿಂತಿಸದಿರಿ, ಬಾದಾಮಿ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಕೊಬ್ಬರಿ ಎಣ್ಣೆಯನ್ನು ದಿನಾ ಹಚ್ಚಿ
Story first published: Friday, March 16, 2018, 23:31 [IST]