Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಈ ಆಯುರ್ವೇದ ಮೂಲಿಕೆಗಳಿಂದ ಕೂದಲುದುರುವ ಸಮಸ್ಯೆಗೆ ಸುಲಭವಾಗಿ ಬ್ರೇಕ್ ಹಾಕಬಹುದು
ಆಯುರ್ವೇದದಲ್ಲಿ ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ. ಫಲಿತಾಂಶ ತಡವಾದರೂ, ಯಾವುದೇ ಅಡ್ಡಪರಿಣಾಮಗಳಿಲ್ಲದೇ, ನಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದೇ ರೀತಿ ನಮ್ಮ ಕೂದಲುದುರವ ಸಮಸ್ಯೆಗೂ ಆಯುರ್ವೇದ ಕೆಲವೊಂದು ಗಿಡಮೂಲಿಕೆಗಳ ಬಗ್ಗೆ ಹೇಳಿದೆ. ಈ ಮೂಲಿಕೆಗಳು ಕೂದಲುದುರುವುದನ್ನು ತಡೆಗಟ್ಟಿ, ಅವುಗಳ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಹಾಗಾದರೆ ಆ ಗಿಡಮೂಲಿಕೆಗಳು ಯಾವುವು? ಅದನ್ನು ಹೇಗೆ ಬಳಸಬೇಕು ಎಂಬುದನ್ನು ಇಲ್ಲಿ ನೋಡೋಣ.
ಆರೋಗ್ಯಕರ ಕೂದಲ ಬೆಳವಣಿಗೆಗೆ ಸಹಾಯ ಮಾಡುವ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಈ ಕೆಳಗೆ ನೀಡಲಾಗಿದೆ:

ಭೃಂಗರಾಜ:
ಇದು ತೇವಾಂಶವಿರುವ ಪ್ರದೇಶಗಳಲ್ಲಿ ಬೆಳೆಯುವ ಔಷಧೀಯ ಮೂಲಿಕೆಯಾಗಿದೆ. ಇದು ನೆತ್ತಿಯನ್ನು ಸ್ವಚ್ಛಗೊಳಿಸಿ, ಕೂದಲ ಕಿರುಚೀಲಗಳನ್ನು ಪೋಷಿಸುವ ಮೂಲಕ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ನೀವು ಭೃಂಗರಾಜ ಎಣ್ಣೆಯನ್ನು ಮಾರುಕಟ್ಟೆಯಲ್ಲಿ ಖರೀದಿಸಬಹುದು, ಇಲ್ಲದಿದ್ದರೆ ಮನೆಯಲ್ಲಿಯೇ ತಯಾರಿಸಬಹುದು. ಸ್ವಲ್ಪ ಜಜ್ಜಿದ ಭೃಂಗರಾಜ ಎಲೆಗಳನ್ನು ತೆಂಗಿನ ಎಣ್ಣೆಯೊಂದಿಗೆ ಕುದಿಸಿ, ನಂತರ ಅದನ್ನು ಜಾರ್‌ನಲ್ಲಿ ಸಂಗ್ರಹಿಸಿ. ವಾರಕ್ಕೊಮ್ಮೆ, ತಲೆಗೆ ಈ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡಿ ಮತ್ತು 30 ನಿಮಿಷಗಳ ಕಾಲ ಬಿಡಿ. ನಂತರ ಶಾಂಪೂ ಬಳಸಿ ನಿಮ್ಮ ಕೂದಲನ್ನು ತೊಳೆಯಿರಿ.

ಮೆಂತ್ಯೆ:
ಇದು ಭಾರತೀಯ ಪಾಕಪದ್ಧತಿಯ ಅವಿಭಾಜ್ಯ ಅಂಗವಾಗಿದೆ. ಜೊತೆಗೆ ಅನೇಕ ಪ್ರಮುಖ ಪೋಷಕಾಂಶಗಳ ಕೇಂದ್ರವಾಗಿದ್ದು ಕೂದಲಿನ ಸಮಸ್ಯೆಗಳಿಗೆ ಅತ್ಯಂತ ಒಳ್ಳೆಯದು. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಫೋಲಿಕ್ ಆಸಿಡ್, ವಿಟಮಿನ್ ಎ, ಸಿ, ಕೆ, ನಿಕೋಟಿನಿಕ್ ಆಸಿಡ್, ಪೊಟ್ಯಾಶಿಯಂ ಮತ್ತು ಪ್ರೋಟೀನ್ ಸಮೃದ್ಧವಾಗಿದೆ.ಈ ಮೆಂತ್ಯ ಎಣ್ಣೆಯನ್ನು ಆನ್‌ಲೈನ್‌ನಲ್ಲಿ ಅಥವಾ ಮಳಿಗೆಗಳಲ್ಲಿ ಖರೀದಿಸಬಹುದು ಅಷ್ಟೇ ಅಲ್ಲ, ಕೂದಲಿನ ತ್ವರಿತ ಬೆಳವಣಿಗೆಗೆ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು.

ನೆಲ್ಲಿಕಾಯಿ:
ಇದು ಕೂದಲಿಗೆ ಬಳಸುವ ಅತ್ಯಂತ ಜನಪ್ರಿಯ ಪದಾರ್ಥಗಳಲ್ಲಿ ಒಂದಾಗಿದೆ. ಬೇಕಿದ್ದಲ್ಲಿ ನೆಲ್ಲಿಕಾಯಿ ಎಣ್ಣೆಯನ್ನು ಖರೀದಿಸಬಹುದು ಅಥವಾ ತೆಂಗಿನ ಎಣ್ಣೆಯೊಂದಿಗೆ ಕೆಲವು ನೆಲ್ಲಿಕಾಯಿ ತುಂಡುಗಳನ್ನು ಬಿಸಿ ಮಾಡಿ, ಎಣ್ಣೆ ತಯಾರಿಸಿ, ಅದನ್ನು ನೆತ್ತಿಯ ಮೇಲೆ ಹಚ್ಚಿ, ಮಸಾಜ್ ಮಾಡಿ, 30 ನಿಮಿಷಗಳ ಕಾಲ ಬಿಡಿ. ನಂತರ ಶಾಂಪೂ ಬಳಸಿ ನಿಮ್ಮ ಕೂದಲನ್ನು ತೊಳೆಯಿರಿ. ಇದು ನಿಮ್ಮ ಕೂದಲು ಕಿರುಚೀಲಗಳನ್ನು ಪೋಷಿಸುತ್ತದೆ, ತಲೆಹೊಟ್ಟು ಕಡಿಮೆ ಮಾಡುತ್ತದೆ, ಕೂದಲಿನ ಪಿಎಚ್ ಮಟ್ಟವನ್ನು ಕಾಪಾಡುತ್ತದೆ ಜೊತೆಗೆ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ತ್ರಿಫಲ:
ತ್ರಿಫಲವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು ಅದು ತಲೆಹೊಟ್ಟು ಕಡಿಮೆ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಪೋಷಿಸುತ್ತದೆ. ನೀವು ತ್ರಿಫಲ ಪುಡಿಯನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ನೆತ್ತಿಗೆ ಹಚ್ಚಬಹುದು. ಜೊತೆಗೆ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಹೆಚ್ಚಿಸಲು ಇದನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚಗಿನ ನೀರಿನೊಂದಿಗೆ ಸೇವಿಸಬಹುದು.

ಜಟಾಮಾಸಿ:
ಇದು ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಸಣ್ಣ ಸಸ್ಯವಾಗಿದ್ದು ಅದು ತಲೆಹೊಟ್ಟು ಕಡಿಮೆ ಮಾಡುತ್ತದೆ, ಜೊತೆಗ ಕೂದಲು ಉದುರುವುದನ್ನು ತಡೆದು, ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ನಿಮ್ಮ ಒಣ ಕೂದಲನ್ನು ಮೃದುಗೊಳಿಸುತ್ತದೆ. ನೀವು ಜಟಮಾಸಿ ಎಣ್ಣೆಯನ್ನು ಖರೀದಿಸಿ, ಕೂದಲು ಮತ್ತು ನೆತ್ತಿಯನ್ನು ನಿಯಮಿತವಾಗಿ ಮಸಾಜ್ ಮಾಡಿ.



Click it and Unblock the Notifications