Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಧೂಮಪಾನ ಸ್ನೇಹಿಗಳ ಕಪ್ಪು ತುಟಿ ನಿವಾರಣೆ

1. ತುಟಿಯ ಕಪ್ಪನ್ನು ಹೋಗಲಾಡಿಸುವಲ್ಲಿ ನಿಂಬೆರಸ ತುಂಬಾ ಪ್ರಯೋಜನಕಾರಿ. ನಿಂಬೆ ಹಣ್ಣನ್ನು ಕತ್ತರಿಸಿ ಅದರ ತುಂಡನ್ನು ತುಟಿಗೆ 3-4 ನಿಮಿಷ ಉಜ್ಜಬೇಕು. ನಂತರ ತಣ್ಣೀರಿನಿಂದ ತುಟಿಯನ್ನು ತೊಳೆದು ಲಿಪ್ ಬಾಮ್ ಹಚ್ಚ ಬೇಕು.
2. ನಿಂಬೆರಸವನ್ನು ಜೇನಿನೊಂದಿಗೆ ಮಿಶ್ರ ಮಾಡಿ ತುಟಿಗೆ ಹಚ್ಚಿ ಮಲಗಬೇಕು, ಈ ರೀತಿ ಮಾಡಿದರೆ ತುಟಿ ಗುಲಾಬಿ ಬಣ್ಣವನ್ನು ಮರಳಿ ಪಡೆಯುತ್ತದೆ.
3. ತುಟಿಗೆ ಕೊಬ್ಬರಿ ಎಣ್ಣೆ ಅಥವಾ ಬಾದಾಮಿ ಎಣ್ಣೆಯನ್ನು ಹಚ್ಚುವುದರಿಂದ ಕೂಡ ತುಟಿಯ ಕಪ್ಪು ಕಡಿಮೆಯಾಗುವುದು.
4. ಗ್ಲಿಸರಿನ್ ಹಚ್ಚುವುದು ತುಂಬಾ ಪ್ರಯೋಜನಕಾರಿ. ಜೇನಿನ ಜೊತೆ ಗ್ಲಿಸರಿನ್ ಬೆರೆಸಿ ಹಚ್ಚಿ 10 ನಿಮಿಷದ ಬಳಿಕ ತಣ್ಣೀರಿನಿಂದ ತೊಳೆಯಬೇಕು.
5. ಬಾಳೆಹಣ್ಣು, ನಿಂಬೆರಸ ಮತ್ತು ಜೇನು ಮಿಶ್ರ ಮಾಡಿ ಹಚ್ಚುವುದರಿಂದ ತುಟಿಯು ಕೆಂಪು ಬಣ್ಣವನ್ನು ಪಡೆಯುತ್ತದೆ.
6. ಬಾದಾಮಿಯನ್ನು ನೀರಿನಲ್ಲಿ ನೆನೆ ಹಾಕಿ ಅದರಿಂದ ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ಮೊಸರು ಮತ್ತು ಜೇನು ಬೆರೆಸಿ ತುಟಿಗೆ ಹಚ್ಚಿ 5-10ನಿಮಿಷ ಬಿಡಬೇಕು. ನಂತರ ಮೊದಲು ಹಾಲಿನಿಂದ ನಂತರ ತಣ್ಣೀರಿನಿಂದ ತುಟಿಯನ್ನು ತೊಳೆಯ ಬೇಕು.
7. ದಾಳಿಂಬೆ ಜ್ಯೂಸ್ ಅಥವಾ ಸ್ಟ್ರಾಬರಿಯನ್ನು ತುಟಿಗೆ ಹಚ್ಚಿ ಸ್ವಲ್ಪ ಸಮಯದ ಬಳಿಕ ತಣ್ಣೀರಿನಿಂದ ತೊಳೆದುಬಾಮ್ ಅಥವಾ ಗ್ಲಿಸರಿನ್ ಹಚ್ಚಿದರೆ ತುಟಿ ಕೆಂಪು ಬಣ್ಣವನ್ನು ಕಳೆದು ಕೊಳ್ಳುವುದಿಲ್ಲ.
8. ತುಟಿಯನ್ನು ಹಾಗೆ ಒಣಗಲು ಬಿಡಬಾರದು. ಹಾಲು, ಕೆನೆ, ಜೇನು ಇವುಗಳನ್ನು ರಾತ್ರಿ ಮಲಗುವ ಮುಂಚೆ ತುಟಿಗೆ ಹಚ್ಚಿಕೊಂಡರೆ ತುಟಿ ಕಪ್ಪಾಗುವುದಿಲ್ಲ.



Click it and Unblock the Notifications
