Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳ ಚಿಂತೆ ಇನ್ಯಾಕೆ?

1. ನಿದ್ದೆ ಸರಿಯಾಗಿಲ್ಲದಿದ್ದರೆ ಕಪ್ಪು ಕಣ್ಣಿನ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಆದ್ದರಿಂದ ದೇಹದ ಮತ್ತು ಸೌಂದರ್ಯದ ಆರೋಗ್ಯಕ್ಕೆ ದಿನಕ್ಕೆ 8 ಗಂಟೆ ನಿದ್ದೆ ಮಾಡಬೇಕು.
2. ಆಲೂಗೆಡ್ಡೆ ಅಥವಾ ಸೌತೆಕಾಯಿಯನ್ನು ವೃತ್ತಾಕಾರವಾಗಿ ಕತ್ತರಿಸಿ ಕಣ್ಣುಗಳನ್ನು ಮುಚ್ಚಿ ಕಣ್ಣಿನ ಮೇಲೆ ಇಟ್ಟು 15 ನಿಮಿಷ ಬಿಟ್ಟು ಹದ ಬಿಸಿ ನೀರಿನಿಂದ ಮುಖತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಕಪ್ಪು ಕಲೆಗಳು ಮಾಯವಾಗುತ್ತದೆ.
3. ಸೌತೆಕಾಯಿಯನ್ನು ಅರೆದು ಅದರ ರಸವನ್ನು ಹಿಂಡಿ ತೆಗೆದು ಫ್ರಿಜ್ನಲ್ಲಿಡಬೇಕು. ಆ ರಸಕ್ಕೆ ನಿಂಬೆ ರಸವನ್ನು ಹಾಕಿ ಕಪ್ಪುಕಲೆಗಳ ಮೇಲೆ ಹಚ್ಚಿ 15-20 ನಿಮಿಷ ಬಿಟ್ಟು ಮುಖ ತೊಳೆಯಬೇಕು. ಈ ರೀತಿ ಮಾಡಿದರೆ ಕಪ್ಪ ಕಲೆಗಳು ಕಡಿಮೆಯಾಗುತ್ತದೆ.
4. ದಿನಕ್ಕೆ ಎರಡು ಬಾರಿ ನಿಂಬೆರಸವನ್ನು ಹಚ್ಚಿದರೂ ಕಣ್ಣಿನ ಸುತ್ತ ಇರುವ ಕಪ್ಪು ಕಲೆ ಹೋಗಲಾಡಿಸಬಹುದು.
5. ಅರಿಶಿಣ ಪುಡಿಯನ್ನು ಪೈನಾಪಲ್ ರಸ ಹಾಕಿ ಮಿಶ್ರ ಮಾಡಬೇಕು. ನಂತರ ಕಣ್ಣಿನ ಕಪ್ಪು ಕಲೆಗಳ ಮೇಲೆ ಹಚ್ಚಬೇಕು. ಪುದೀನಾದ ರಸ ಹಿಂಡಿ ಹಚ್ಚುವುದರಿಂದ ಕೂಡ ಕಣ್ಣಿನ ಸುತ್ತವಿರುವ ಕಪ್ಪು ಕಲೆಗಳನ್ನು ಹೋಗಲಾಡಿಸಬಹುದು.
6. ಬಾದಾಮಿ ಎಣ್ಣೆ ಯನ್ನು ಮುಖಕ್ಕೆ ಹಚ್ಚಿದರೆ ಕಪ್ಪು ಕಲೆಗಳು ಕಡಿಮೆಯಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ತ್ವಚೆ ಆರೋಗ್ಯ ಹೆಚ್ಚಾಗುತ್ತದೆ.



Click it and Unblock the Notifications
