Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
ಕಪ್ಪುಕಲೆ ನಿವಾರಿಸುತ್ತೆ ಈ ಮನೆಮದ್ದು

ಈ ರೀತಿ ಉಂಟಾದಾಗ ಹೆಚ್ಚಿನವರು ಕ್ರೀಮ್ ಬಳಸಿದರೆ ಹೋಗಬಹುದು ಎಂದು ನಂಬುತ್ತಾರೆ. ಆದರೆ ಈ ರೀತಿಯ ಕಪ್ಪಕಲೆಗಳಿಗೆ (Pigmentation) ಇದುವರೆಗೆ ಯಾವುದೇ ಸೂಕ್ತವಾದ ಕ್ರೀಮ್ ಕಂಡುಹಿಡಿಯಲಿಲ್ಲ! ಅನೇಕ ಕ್ರೀಮ್ ಗಳು ಬಂದಿದ್ದರೂ ಅವುಗಳು ಆಹಾರ ಮತ್ತು ಔಷಧ ಸಂಸ್ಥೆ (FDA) ಇನ್ನೂ ಒಪ್ಪಿಗೆಯನ್ನು ಪಡೆಯಲಿಲ್ಲ.
ಆದ್ದರಿಂದ ಈ ಕಪ್ಪು ಕಲೆಗಳನ್ನು ಹೋಗಲಾಡಿಸಲು ರಾಸಾಯನಿಕವಿರುವ ಕ್ರೀಮ್ ಬಳಸಿ ತ್ವಚೆ ಆರೋಗ್ಯ ಹಾಳು ಮಾಡುವ ಬದಲು ಈ ಕೆಳಗಿನ ಮನೆ ಮದ್ದುಗಳನ್ನು ಮಾಡಿ ನೋಡಿ, ಇವುಗಳು ನಿಮ್ಮ ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸಲು ಸಹಕಾರಿಯಾಗುವುದು.
1. ಓಟ್ ಮೀಲ್ಸ್, ಹಾಲು ಮತ್ತು ಸಕ್ಕರೆ ಇವುಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಶ್ರ ಮಾಡಿ ಪೇಸ್ಟ್ ರೀತಿ ಮಾಡಬೇಕು. ನಂತರ ಈ ಪೇಸ್ಟ್ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಳಿಕ ಮುಖ ತೊಳೆಯಬೇಕು. ಈ ರೀತಿ ಒಂದು ತಿಂಗಳಿನವರೆಗೆ ಮಾಡಿದರೆ ಈ ರೀತಿಯ ಕಪ್ಪು ಕಲೆಗಳು ಮಾಯವಾಗುತ್ತದೆ.
2. ವಿನಿಗರ್ ಅನ್ನು ನೀರಿನಲ್ಲಿ ಮಿಶ್ರ ಮಾಡಿ ಅದನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತಣ್ಣೀರಿನಿಂದ ಮುಖ ತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಈ ರೀತಿಯ ಕಪ್ಪು ಕಲೆಗಳನ್ನು ಹೋಗಲಾಡಿಸಬಹುದು.
3. ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಒಣಗಿಸಬೇಕು, ನಂತರ ಅದನ್ನು ಅರೆದು ಪೇಸ್ಟ್ ರೀತಿ ಮಾಡಿ ಹಾಲಿನಲ್ಲಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಬೇಕು. ಈ ರೀತಿ ಮಾಡುತ್ತಾ ಬಂದರೆ ತ್ವಚೆ ಸಮಸ್ಯೆ ನಿವಾರಣೆಯಾಗಿ ಕಾಂತಿಯುತ ತ್ವಚೆ ನಿಮ್ಮದಾಗುವುದು.
4. ಬಾಳೆ ಹಣ್ಣು , ಸೀಬೆ ಹಣ್ಣು ಈ ಎರಡು ಹಣ್ಣುಗಳನ್ನು ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಳಿಕ ಮುಖ ತೊಳೆಯಿರಿ.
ಈ ಮೇಲಿನ ವಿಧಾನಗಳು ಅನುಸರಿಸಿದ್ದೇ ಆದರೆ ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸಿ ಹೊಳಪಿನ ತ್ವಚೆ ಪಡೆಯಬಹುದು.



Click it and Unblock the Notifications
