Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಕೂದಲಿನ ಪೋಷಣೆಗೆ ಬಾಹ್ಯ ಮತ್ತು ಆಂತರಿಕ ಆರೈಕೆ

ಪೋಷಕಾಂಶಗಳ ಕೊರತೆಯಿಂದ ಶಕ್ತಿಯ ಕೊರತೆ ಉಂಟಾಗಿ ವಯಸ್ಸಾದ ಮೇಲೆ ಕೂದಲು ಉದುರಲಾರಂಭಿಸಿದರೆ, ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಉದುರಲಾರಂಭಿಸುತ್ತದೆ. ಹೀಗೆ ಕೂದಲು ಉದುರುವಾಗ ಆಹಾರಕ್ರಮದ ಬಗ್ಗೆ ನಿಗಾ ವಹಿಸಿದರೆ ಅಂದರೆ ಪೋಷಕಾಂಶವಿರುವ ಆಹಾರಗಳ ಸೇವನೆ ಮಾಡಿದರೆ ಸಾಕು ಉತ್ತಮ ಪ್ರಯೋಜನವನ್ನು ಪಡೆಯಬಹುದು. ಉತ್ತಮ ಪೋಷಕಾಂಶಗಳುಳ್ಳ ಆಹಾರ ಜೀರ್ಣಿಸಿಕೊಳ್ಳುವ ಸಾಮರ್ಥ್ಯವಿದ್ದಲ್ಲಿ ಕೂದಲು ಉದುರುವಿಕೆ ಅಷ್ಟಾಗಿ ಕಂಡುಬರುವುದಿಲ್ಲ.
ಕೂದಲು ಉದುರುವುದನ್ನು ತಡೆಗಟ್ಟಬೇಕಾದರೆ ಈ ಕೆಳಗಿನ ಸಲಹೆಯನ್ನು ಪಾಲಿಸಿದರೆ ಒಳ್ಳೆಯದು.
* ಹಾಲು, ಬೆಣ್ಣೆ, ತುಪ್ಪ, ಮೊಳೆತ ಕಡಲೆಕಾಳು, ಮೊಳೆತ ಹೆಸರುಕಾಳು ಕ್ರಮವಾಗಿ ಸೇವಿಸಬೇಕು. ಕರಿದ ತಿಂಡಿಗಳನ್ನು ತಿನ್ನಬಾರದು. ಒತ್ತಡವನ್ನು ಆದಷ್ಟು ತಡೆಗಟ್ಟಬೇಕು. ನಿದ್ದೆ ಕೆಡುವುದು, ಅತಿಯಾದ ಲೈಂಗಿಕ ಸಂಭೋಗ, ಮಲಮೂತ್ರಗಳ ಒತ್ತಡ ತಡೆಹಿಡಿಯುವುದು ಮಾಡಿದರೆ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.
* ಪ್ರತಿದಿನವೂ ತಲೆಗೆ ತಣ್ಣೀರಿನ ಸ್ನಾನ ಒಳ್ಳೆಯದು. ಹದ ಬಿಸಿ ನೀರಾದರೂ ಆಗುತ್ತೆ. ತುಂಬಾ ಬಿಸಿಯಿರುವ ನೀರು ಹಾಕಿದರೆ ಕೂದಲು ಹಾಳಾಗುವುದು.
* ಪ್ರತಿದಿನ ತಲೆಕೂದಲಿಗೆ ಎಳ್ಳೆಣ್ಣೆ, ಬಾದಮಿ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲೀವ್ ಎಣ್ಣೆ ಹಚ್ಚಿ ಬಾಚುತ್ತಿರಬೇಕು.
* ವಾರಕ್ಕೊಮ್ಮೆ ಎಣ್ಣೆ ಸ್ನಾನ ಮಾಡಿದರೆ ಕೂದಲಿಗೂ ಆರೋಗ್ಯಕ್ಕೂ ಒಳ್ಳೆಯದು.
ಅಲ್ಲದೆ ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಕೂದಲು ಉದುರುವುದನ್ನು ಸಂಪೂರ್ಣವಾಗಿ ತಡೆಯಬಹುದು.
* ತೆಂಗಿನ ಎಣ್ಣೆಗೆ ಒಂದು ಟೀ ಚಮಚ ನಿಂಬೆ ರಸ ಹಿಂಡಿ. ನಂತರ, ಈ ಮಿಶ್ರಣವನ್ನು ಪ್ರತಿದಿನವೂ ಕೂದಲಿಗೆ ಹಚ್ಚಿ ತಲೆ ತೊಳೆದರೆ ಹೊಟ್ಟು ನಿವಾರಣೆಯಾಗುತ್ತದೆ, ಕೂದಲೂ ಚೆನ್ನಾಗಿ ಬೆಳೆಯುತ್ತದೆ.
* ರಾತ್ರಿ ಮಲಗುವುದಕ್ಕಿಂತ ಮುಂಚೆ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ತಲೆಬುರುಡೆಗೆ ಹಚ್ಚಿ ಚೆನ್ನಾಗಿ ತಿಕ್ಕಿ, ಮರುದಿನ ಬೆಳಿಗ್ಗೆ ತಲೆಗೆ ಸ್ನಾನ ಮಾಡಬೇಕು. ಈ ರೀತಿ ವಾರದಲ್ಲಿ 2-3 ಬಾರಿ ಮಾಡಬೇಕು.
* ಮೆಂತೆಯನ್ನು ಅರೆದು ತೆಂಗಿನ ಹಾಲಿನೊಂದಿಗೆ ಮಿಶ್ರ ಮಾಡಬೇಕು. ನಂತರ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ
* ಬೇವಿನ ಎಲೆಗಳನ್ನು ಎಣ್ನೆಯಲ್ಲಿ ಕುದಿಸಿ ತಲೆಗೆ ಹಚ್ಚುವುದು ಒಳ್ಳೆಯದು. ದಾಸವಾಳದ ಎಲೆಗಳನ್ನು ಅರೆದು ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ಸ್ನಾನ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.ಹಚ್ಚುವುದಾದರೆ ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಹಚ್ಚಿದರೆ ಒಳ್ಳೆಯದು.
ದೇಹಕ್ಕೆ ಅಗತ್ಯವಾದ ವಿಟಮಿನ್ ಗ ಪೂರೈಕೆ ಮತ್ತು ಬಾಹ್ಯವಾಗಿ ಕೂದಲಿಗೆ ಪೋಷಣೆ ಮಾಡಿದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ.



Click it and Unblock the Notifications
