Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತ್ವಚೆಯ ಸೌಂದರ್ಯ ಹೆಚ್ಚಿಸಲು ಬರೀ 15 ದಿನಗಳು ಸಾಕು!
ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಇದಕ್ಕಾಗಿ ಎಷ್ಟೇ ಹಣ ವ್ಯಯಿಸಲು ಕೂಡ ನಾವು ಸಿದ್ಧರಾಗಿರುತ್ತೇವೆ. ಹಾಗಾಗಿ ಜನರಲ್ಲಿ ಹೆಚ್ಚುತ್ತಿರುವ ಸೌಂದರ್ಯ ಪ್ರಜ್ಞೆಯನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಕಂಪೆನಿಗಳು ಅವರ ಬೇಡಿಕೆಗಳನ್ನು ಪೂರೈಸಲು ಮಾರುಕಟ್ಟೆಯಲ್ಲಿ ತರಹೇವಾರಿ ಉತ್ಪನ್ನವನ್ನು ಬಿಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ.
ಆದರೆ ಇಂತಹ ಉತ್ಪನ್ನಗಳಲ್ಲಿ ರಾಸಾಯನಿಕಗಳು ಅಧಿಕವಾಗಿದ್ದು, ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳನ್ನುಂಟು ಮಾಡುತ್ತವೆ. ಅದಕ್ಕಾಗಿ ನಾವು ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಲು ಸ್ವಾಭಾವಿಕ ಪರಿಹಾರಗಳ ಕಡೆಗೆ ಗಮನ ಹರಿಸಬೇಕಾದ ಕಾಲ ಬಂದಿದೆ. ಅದ್ದರಿಂದ ರಾಸಾಯನಿಕ ವಸ್ತುಗಳನ್ನು ಬಳಸಿರುವ ಕಾಸ್ಮೆಟಿಕ್ ಉತ್ಪನ್ನಗಳನ್ನು ಮುಖಕ್ಕೆ ಹಚ್ಚುವುದನ್ನು ತಪ್ಪಿಸಿ ನೈಸರ್ಗಿಕವಾಗಿ
ದೊರೆಯುವ ಮನೆಯಲ್ಲಿಯೇ ತಯಾರಿಸಿಕೊಳ್ಳಬಹುದಾದ ವಸ್ತುಗಳನ್ನು ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಿ. ಇಂತಹ ಸ್ವಾಭಾವಿಕ ಮನೆಮದ್ದುಗಳಲ್ಲಿ ಕೆಲವೊಂದನ್ನು ಇಲ್ಲಿ ಪರಿಚಯಿಸಲಾಗಿದ್ದು ಇದನ್ನು ಬಳಸುವುದರಿಂದ ನಮ್ಮ ತ್ವಚೆಗೆ ಅದ್ಭುತವಾದ ಹೊಳಪನ್ನು ನಾವು ನೀಡಬಹುದು. ಬನ್ನಿ ಅವು ಯಾವುದು ಎಂಬುದನ್ನು ನೋಡೋಣ...

ಮೂಲಂಗಿ
ಮೂರು ಮೂಲಂಗಿಯನ್ನು ನೀರಿನಲ್ಲಿ ಹಾಕಿ ಅರ್ಧಗಂಟೆ ಬೇಯಿಸಿ. ನಂತರ ನೀರನ್ನು ತಣಿಯಲು ಬಿಟ್ಟು ಆ ನೀರಿನಲ್ಲಿ ಮುಖ ನೆನೆಸಿಕೊಳ್ಳಿ. ಈ ರೀತಿ ಮಾಡುವುದರಿಂದ ನಿಮ್ಮ ಚರ್ಮ ಕಾಂತಿಯುತವಾಗಿ, ಮುಖದ ಕಲೆಗಳು ಹೋಗಿ ಅಂದ ಹೆಚ್ಚುತ್ತದೆ.
ಕಿತ್ತಳೆ ಸಿಪ್ಪೆ
ಕಿತ್ತಳೆ ಸಿಪ್ಪೆಯನ್ನು ಸೂರ್ಯನ ಬಿಸಿಲಿನಲ್ಲಿ ಒಣಗಿಸಿ ಇದನ್ನು ಪುಡಿ ಮಾಡಿಟ್ಟುಕೊಳ್ಳಿ. ಮೂರು ಚಮಚ ಹಾಲಿನಲ್ಲಿ ಈ ಪುಡಿಯನ್ನು ಬೆರೆಸಿ ಮುಖಕ್ಕೆ ಹಚ್ಚಿ ಹದಿನೈದು ನಿಮಿಷ ಬಿಟ್ಟು ಮುಖವನ್ನು ತಣ್ಣೀರಿನಲ್ಲಿ ತೊಳೆದುಕೊಳ್ಳಿ.
ಜೀರಿಗೆ
ಜೀರಿಗೆಯನ್ನು ನೀರಿನಲ್ಲಿ ಅರ್ಧಗಂಟೆ ಕುದಿಸಿ. ನಂತರ ಈ ನೀರಿನಲ್ಲಿ ಮುಖ ತೊಳೆಯುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದು. ಕಾಂತಿಯುತವಾದ ತ್ವಚೆಯನ್ನು ಪಡೆಯಲು ಇದು ಸುಲಭ ವಿಧಾನ.
ಮುಲ್ತಾನಿ ಮಿಟ್ಟಿ ಮತ್ತು ಗಂದದ ಪುಡಿ
ಮುಲ್ತಾನಿ ಮಿಟ್ಟಿ ಮತ್ತು ಗಂಧದ ಪುಡಿಯನ್ನು ಒಂದೊಂದು ಚಮಚ ಬೆರೆಸಿ ಎರಡು ಚಮಚ ರೋಸ್ ವಾಟರ್ ಬೆರೆಸಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ ಹದಿನೈದು ನಿಮಿಷ ಬಿಟ್ಟು ಹದವಾದ ಬಿಸಿನೀರಿನಲ್ಲಿ ತೊಳೆಯಿರಿ. ಅಥವಾ ಹಣ್ಣಾದ ಟೊಮೇಟೊವನ್ನು ಎರಡು ಟೀ.ಚಮಚ ಮುಲ್ತಾನಿ ಮಿಟ್ಟಿ ಹಾಗು ಒಂದು ಟೀ.ಚಮಚ ಕಡಲೆ ಹಿಟ್ಟಿನ ಜೊತೆಗೆ ಬೆರೆಸಿ ಗಟ್ಟಿಯಾದ ಪೇಸ್ ಪ್ಯಾಕ್ ಮಾಡಿಕೊಳ್ಳಿ. ಇದನ್ನು ನಿಮ್ಮ ಮುಖಕ್ಕೆ ಲೇಪಿಸಿ, 20 ನಿಮಿಷಗಳ ಕಾಲ ಬಿಡಿ. ನಂತರ ಇದನ್ನು ತಣ್ಣೀರಿನಲ್ಲಿ ತೊಳೆಯಿರಿ. ಈ ಪ್ಯಾಕ್ ನಿಮ್ಮ ತ್ವಚೆಯಲ್ಲಿರುವ ಎಣ್ಣೆ ಅಂಶವನ್ನು ನಿವಾರಿಸುತ್ತದೆ.
ಬಾದಾಮಿ
ಸ್ವಲ್ಪ ಬಾದಾಮಿಯನ್ನು ಹಾಲಿನಲ್ಲಿ ಹಾಕಿ ರಾತ್ರಿ ನೆನೆಸಿಡಿ. ಇದನ್ನು ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ. ಇದು ಮುಖದಲ್ಲಿರುವ ಕಲೆಯನ್ನು ಹೋಗಲಾಡಿಸಲು ಸಹಕರಿಸುತ್ತದೆ.
ಫೇಸ್ ವಾಶ್ ಆಗಿ ಹಾಲು
ಎರಡು ಚಮಚ ಹಾಲನ್ನು ತೆಗೆದುಕೊಳ್ಳಿ. ಅದನ್ನು ನಿಮ್ಮ ಮುಖದ ಮೇಲೆ ಚೆನ್ನಾಗಿ ಉಜ್ಜಿ, ನಂತರ ಬೆರಳುಗಳಿಂದ ಮೃದುವಾಗಿ ಮಸಾಜ್ ಮಾಡಿ. ಕೊನೆಯದಾಗಿ ತಣ್ಣೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ. ಇದರಿಂದ ನಿಮ್ಮ ಮುಖ ತಾಜ ಆಗಿ ಕಾಣುತ್ತದೆ. ಇದನ್ನು ಪ್ರತಿನಿತ್ಯ ಸ್ನಾನ ಮಾಡುವ ಮುನ್ನ ಮಾಡಿ.



Click it and Unblock the Notifications





