Related Articles
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಪುರಾತನ ಸೌಂದರ್ಯ ಪದ್ಧತಿ, ಇಂದಿಗೂ ನಂ.1..
ವಿಶ್ವದಲ್ಲಿ ಭಾರತದ ಹೆಸರನ್ನು ಬೆಳಗಿದ ವಿಷಯಗಳಲ್ಲಿ ಭಾರತೀಯ ಮಹಿಳೆಯರ ಸೌಂದರ್ಯವೂ ಒಂದು. ಇದಕ್ಕೆ ಪ್ರಮುಖ ಕಾರಣ ಶತಮಾನಗಳಿಂದ ಭಾರತೀಯ ನಾರಿಯರು ತಮ್ಮ ಸೌಂದರ್ಯಕ್ಕೆ ನೀಡುತ್ತಿದ್ದ ಮಹತ್ವ ಮತ್ತು ಕಾಳಜಿ. ಇಂದಿನ ಆಧುನೀಕತೆಯ ಭರಾಟೆ ಎಲ್ಲಾ ಕ್ಷೇತ್ರಗಳಂತೆಯೇ ಸೌಂದರ್ಯವನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದರೂ ಭಾರತೀಯ ಪುರಾತನ ಸೌಂದರ್ಯ ಪದ್ಧತಿಗಳು ಇಂದಿಗೂ ಉಳಿದುಕೊಂಡು ಬಂದಿರುವುದಕ್ಕೆ ಈ ವಿಧಾನಗಳು ನೀಡುತ್ತಿರುವ ಫಲಪ್ರದ ಅರೈಕೆಯೇ ಕಾರಣ.
ಆದರೆ ಇಂದಿನ ಜೆಟ್ ಯುಗದಲ್ಲಿ ಎಲ್ಲವೂ ಥಟ್ಟನೇ ಆಗುತ್ತಿರುವಾಗ ಸೌಂದರ್ಯದ ಕಾಳಜಿಯೂ ಥಟ್ಟನೇ ಆಗಬೇಕೆಂದು ಬಯಸುವುದು ಸಾಂಪ್ರಾದಾಯಿಕ ವಿಧಾನಗಳನ್ನು ಮೂಲೆಗುಂಪಾಗಿಸಿರುವುದು ಮಾತ್ರ ಖೇದಕರ. ಬನ್ನಿ ಪುರಾತನ ಕಾಲದಿಂದಲೂ ಸೌಂದರ್ಯ ಪ್ರಸಾಧನಗಳಿಗೆ ಹೆಸರುವಾಸಿಯಾಗಿರುವ ಕೆಲವೊಂದು ಪ್ರಮುಖ ಮಾಹಿತಿಗಳನ್ನು ನೀಡಿದ್ದೇವೆ ಮುಂದೆ ಓದಿ....
ಮುಲ್ತಾನಿ ಮಿಟ್ಟಿಯ ಪೇಸ್ಟ್
ಮುಲ್ತಾನಿ ಮಿಟ್ಟಿ ಮುಲ್ತಾನಿ ಮಿಟ್ಟಿಯನ್ನು ನೀರಿನಲ್ಲಿ ಕಲಸಿಕೊಂಡು ನುಣ್ಣಗೆ ಪೇಸ್ಟ್ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ ಒಂದು ಗಂಟೆಯ ನಂತರ ಮುಖವನ್ನು ತೊಳೆದುಕೊಳ್ಳಿ. ಈ ವಿಧಾನವನ್ನು ವಾರಕ್ಕೊಮ್ಮೆ ಮಾಡಿ ನಿಮಗೆ ಅದ್ಭುತ ಫಲಿತಾಂಶ ದೊರೆಯುವುದು ಖಂಡಿತ. ಮುಲ್ತಾನಿ ಮಿಟ್ಟಿ ನಿಮ್ಮ ತ್ವಚೆಯ ಚರ್ಮದ ರಚನೆಯನ್ನು ಸುಧಾರಿಸುತ್ತದೆ. ಇದು ಅನಗತ್ಯ ತೇಪೆಗಳನ್ನು ತೆಗೆದು ಚರ್ಮವನ್ನು ಮೃದುವಾಗಿಸುತ್ತದೆ. ಇದರಿಂದ ನಿಮ್ಮ ತ್ವಚೆಯ ಚರ್ಮ ತುಂಬಾ ಸುಸಂಗತ ಮತ್ತು ಬಿಳಿಯಾಗುತ್ತದೆ. ಚರ್ಮದ ಕಾಂತಿ ಹಾಗೂ ರಚನೆ, ಅದರ ಆರೋಗ್ಯಕ್ಕಾಗಿ ಮುಲ್ತಾನಿ ಮಿಟ್ಟಿಯನ್ನು ನಿಯಮಿತವಾಗಿ ಬಳಸಬೇಕು.
ಅರಿಶಿನದ ಫೇಸ್ ಪ್ಯಾಕ್
ಅರಿಶಿನವನ್ನು ಮೊಟ್ಟೆಯ ಬಿಳಿ ಭಾಗದ ಜೊತೆಗೆ ಬೆರೆಸಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಫೇಸ್ ಮಾಸ್ಕ್ ರೀತಿಯಲ್ಲಿ ಮುಖಕ್ಕೆ ಲೇಪಿಸಿ, ಒಣಗಲು ಬಿಡಿ. 15 ನಿಮಿಷದ ನಂತರ ಇದನ್ನು ತೊಳೆಯಿರಿ. ಒಂದು ವೇಳೆ ನಿಮಗೆ ಕಚ್ಛಾ ಮೊಟ್ಟೆಯ ವಾಸನೆ ಹಿಡಿಸದ ಪಕ್ಷದಲ್ಲಿ, ಇದಕ್ಕೆ ಒಂದೆರಡು ಹನಿ ಲಿಂಬೆರಸವನ್ನು ಬೆರೆಸಿಕೊಳ್ಳಬಹುದು. ಇದರಿಂದ ಮತ್ತಷ್ಟು ಒಳ್ಳೆಯ ಫಲಿತಾಂಶ ಪಡೆಯಬಹುದು.
ಅಕ್ಕಿ ನೀರಿನೊಂದಿಗೆ ಮುಖ ತೊಳೆಯಿರಿ
ತ್ವಚೆಯ ಮೇಲಿನ ಕಲೆಗಳನ್ನು ಅಕ್ಕಿಯ ನೀರಿನೊ೦ದಿಗೆ ತಿಳಿಗೊಳಿಸಿಕೊಳ್ಳಿರಿ. ನಿಮ್ಮ ಮುಖವನ್ನು ಅಕ್ಕಿನೀರಿನಿ೦ದ ತೊಳೆದುಕೊಳ್ಳುವುದಕ್ಕೆ ಮೊದಲು ಅದಕ್ಕೆ ಚಿಟಿಕೆಯಷ್ಟು ಅರಿಶಿನವನ್ನು ಸೇರಿಸಿಕೊಳ್ಳಿರಿ. ಇದರಿ೦ದ ಅಕ್ಕಿ ನೀರಿನಿ೦ದಾಗಬಹುದಾದ ಪ್ರಯೋಜನವು ಮತ್ತಷ್ಟು ಹೆಚ್ಚಾಗುತ್ತದೆ. ಅಕ್ಕಿ ನೀರನ್ನು ಒ೦ದು ಫೇಸ್ ವಾಶ್ ನ ರೂಪದಲ್ಲಿ ನಿಯಮಿತವಾಗಿ ಬಳಸಿದ್ದೇ ಆದಲ್ಲಿ, ಅದು ಮೊಡವೆಗಳ ನಿವಾರಣೆಗೆ ನೆರವಾಗುತ್ತದೆ. ಆದರೂ ಸಹ, ಅಕ್ಕಿ ನೀರಿನ ನಿಯಮಿತ ಬಳಕೆಯು ನಿಮ್ಮ ತ್ವಚೆಯನ್ನು ಮಾತ್ರ ಶುಷ್ಕಗೊಳಿಸಿಬಿಡುತ್ತದೆ.
ಕೊತ್ತಂಬರಿ ಸೊಪ್ಪು
ತಾಜಾ ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಆಂಟಿ ಆಕ್ಸಿಡೆಂಟ್‍ಗಳು ಮತ್ತು ರಂಜಕದಂತಹ ಖನಿಜಗಳು ಯಥೇಚ್ಛವಾಗಿರುವುದರಿಂದ ತ್ವಚೆಯ ಕಾಂತಿಯನ್ನು ವೃದ್ಧಿಸುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ನೀವು ಮಾಡಬೇಕಾದದು ಇಷ್ಟೇ 4 ಟೇಬಲ್ ಚಮಚ ಓಟ್‌ಮೀಲ್, 2 ಟೇಬಲ್ ಚಮಚ ಹಾಲು, 2 ಟೀ ಚಮಚ ಸೌತೆಕಾಯಿ ರಸವನ್ನುಚೆನ್ನಾಗಿ ಬೆರೆಸಿಕೊಂಡು, ಇದಕ್ಕೆ ಜಜ್ಜಿರುವ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಸಹ ಹಾಕಿ ಚೆನ್ನಾಗಿ ಪೇಸ್ಟ್ ರೀತಿಯಲ್ಲಿ ಮಿಶ್ರಣ ಮಾಡಿ, ಮುಖದ ಮೇಲೆ ಲೇಪಿಸಿಕೊಳ್ಳಿ ಹಾಗೂ 15 ನಿಮಿಷಗಳವರೆಗೆ ಅದನ್ನು ಹಾಗೆಯೇ ಬಿಡಿ. ನಂತರ ತಣ್ಣೀರಿನಲ್ಲಿ ಮುಖವನ್ನು ತೊಳೆಯಿರಿ.
ಲೊಳೆಸರ
ಒಂದು ವೇಳೆ ಬಿಸಿಲು ಅಥವಾ ಹಳೆಯ ಮೊಡವೆ ಚಿವುಟಿದ್ದರ ಪರಿಣಾಮವಾಗಿ ತ್ವಚೆಯ ಮೇಲೆ ಕಲೆ ಉಳಿದುಕೊಂಡಿದ್ದರೆ ರಾತ್ರಿ ಮಲಗುವ ಮುನ್ನ ಲೋಳೆಸರವನ್ನು ಕೊಂಚ ವೃತ್ತಾಕಾರದಲ್ಲಿ ಕಲೆಯ ಮೇಲೆ ಹಚ್ಚಿ ಮಲಗಿ. ಬೆಳಿಗ್ಗೆ ತಣ್ಣೀರಿನಿಂದ ತೊಳೆದುಕೊಳ್ಳುವ ಮೂಲಕ ನಿಧಾನವಾಗಿ ಕಲೆಗಳು ಮಾಯವಾಗುತ್ತವೆ.
ಬೇವಿನ ಪುಡಿ
ಒಂದು ವೇಳೆ ಮುಖದಲ್ಲಿ ಚಿಕ್ಕದಾಗಿ ಮೊಡವೆಗಳು ಮೂಡುತ್ತಿದ್ದರೆ ಬೇವಿನ ಪುಡಿಯನ್ನು ತಣ್ಣೀರಿನಲ್ಲಿ ಬೆರೆಸಿ ನುಣುಪಾದ ಲೇಪನ ತಯಾರಿಸಿ ತೆಳುವಾಗಿ ಹಚ್ಚಿಕೊಳ್ಳಿ. ರಾತ್ರಿ ಹಚ್ಚಿ ಬೆಳಿಗ್ಗೆ ತಣ್ಣೀರಿನಿಂದ ತೊಳೆದುಕೊಳ್ಳಿ. ಇದು ಮೊಡವೆಗಳನ್ನು ಮಾಗಿಸುವುದು ಮಾತ್ರವಲ್ಲ, ಕಲೆಗಳನ್ನೂ ನಿಧಾನವಾಗಿ ನಿವಾರಿಸುತ್ತದೆ.