For Quick Alerts
ALLOW NOTIFICATIONS  
For Daily Alerts

ಈ ಬ್ಯೂಟಿ ಟಿಪ್ಸ್ ಅನುಸರಿಸಿ-ಇನ್ನಷ್ಟು ಸುಂದರವಾಗಿ ಕಾಣುವಿರಿ!

By Deepu
|

ಇತ್ತೀಚಿನ ದಿನಗಳಲ್ಲಿ ಸೌಂದರ್ಯ ಉತ್ಪನ್ನಗಳ ಮೇಲೆ ಜನರ ಮೋಹ ಅಧಿಕಗೊಳ್ಳುತ್ತಿದೆ. ಹಾಗಾಗಿಯೇ ಮಾರುಕಟ್ಟೆಯಲ್ಲಿ ಸೌಂದರ್ಯೋತ್ಪನ್ನಗಳು ತಮ್ಮ ಅಸ್ತಿತ್ವವನ್ನು ಮತ್ತು ಪ್ರಾಮುಖ್ಯತೆಯನ್ನು ಸಾರಿ ಸಾರಿ ಹೇಳುತ್ತಿವೆ. ಸಹಜವಾಗಿ ಇಂತಹ ಉತ್ಪನ್ನಗಳ ಬೇಡಿಕೆ ಮತ್ತು ಮಾರಾಟ ಇತ್ತೀಚೆಗೆ ಹೆಚ್ಚಾಗಿದೆ. ಜನರಲ್ಲಿ ಹೆಚ್ಚುತ್ತಿರುವ ಸೌಂದರ್ಯ ಪ್ರಜ್ಞೆಯನ್ನು ಬಂಡವಾಳವನ್ನಾಗಿ ಮಾಡಿಕೊಂಡಿರುವ ಕಂಪೆನಿಗಳು ಅವರ ಬೇಡಿಕೆಗಳನ್ನು ಪೂರೈಸಲು ಮಾರುಕಟ್ಟೆಯಲ್ಲಿ ತರಹೇವಾರಿ ಉತ್ಪನ್ನವನ್ನು ಬಿಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ.

ಆದರೆ ಇಂತಹ ಉತ್ಪನ್ನಗಳಲ್ಲಿ ರಾಸಾಯನಿಕಗಳು ಅಧಿಕವಾಗಿದ್ದು, ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳನ್ನುಂಟು ಮಾಡುತ್ತವೆ. ಅದಕ್ಕಾಗಿ ನಾವು ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಲು ಸ್ವಾಭಾವಿಕ ಪರಿಹಾರಗಳ ಕಡೆಗೆ ಗಮನ ಹರಿಸಬೇಕಾದ ಕಾಲ ಬಂದಿದೆ. ಇಂತಹ ಸ್ವಾಭಾವಿಕ ಉತ್ಪನ್ನಗಳಲ್ಲಿ ಕೆಲವೊಂದನ್ನು ಇಲ್ಲಿ ಪರಿಚಯಿಸಲಾಗಿದ್ದು ಇದನ್ನು ಬಳಸುವುದರಿಂದ ನಮ್ಮ ತ್ವಚೆಗೆ ಅದ್ಭುತವಾದ ಹೊಳಪನ್ನು ನಾವು ನೀಡಬಹುದು. ಬನ್ನಿ ಅವು ಯಾವುದು ಎಂಬುದನ್ನು ನೋಡೋಣ...

ಬಾಳೆ ಹಣ್ಣಿನ ಫೇಸ್ ಪ್ಯಾಕ್

ಬಾಳೆ ಹಣ್ಣಿನ ಫೇಸ್ ಪ್ಯಾಕ್

ಸರಿಯಾಗಿ ಹಣ್ಣಾದ ಬಾಳೆಹಣ್ಣೊ೦ದನ್ನು ತೆಗೆದುಕೊ೦ಡು, ಅದನ್ನು ಜಜ್ಜಿ, ಸ್ವಲ್ಪ ಜೇನುತುಪ್ಪ ಹಾಗೂ ಒ೦ದು ಟೀ ಚಮಚದಷ್ಟು ಆಲಿವ್ ತೈಲದೊಡನೆ ಅದನ್ನು ಬೆರೆಸಿರಿ. ಈ ಪ್ಯಾಕ್ ಅನ್ನು ನಿಮ್ಮ ಮುಖದ ಮೇಲೆ ಹಚ್ಚಿಕೊ೦ಡು ಅದನ್ನು ಹದಿನೈದು ನಿಮಿಷಗಳವರೆಗೆ ಹಾಗೆಯೇ ಇರಗೊಡಿರಿ. ಮುಖದ ತ್ವಚೆಯ ಮೇಲಿರಬಹುದಾದ ನೆರಿಗೆಗಳು ಹಾಗೂ ಢಾಳಾಗಿರುವ ವೃದ್ದಾಪ್ಯ ರೇಖೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇದೊ೦ದು ಅತ್ಯುತ್ತಮವಾದ, ಮನೆಯಲ್ಲಿಯೇ ತಯಾರಿಸಿದ ಫೇಸ್ ಪ್ಯಾಕ್ ಆಗಿದ್ದು, ಇದು ನಿಮ್ಮ ತ್ವಚೆಯನ್ನು ನವನಾವೀನ್ಯದಿ೦ದಿರಿಸುತ್ತದೆ ಹಾಗೂ ತ್ವಚೆಯು ಕಾ೦ತಿಯಿ೦ದ ಹೊಳೆಯುವ೦ತೆ ಮಾಡುತ್ತದೆ.

ನುಗ್ಗೆ ಎಲೆಗಳ ಫೇಸ್ ಪ್ಯಾಕ್

ನುಗ್ಗೆ ಎಲೆಗಳ ಫೇಸ್ ಪ್ಯಾಕ್

ಸುಮಾರು ಒಂದು ಮುಷ್ಠಿಯಷ್ಟು ನುಗ್ಗೆ ಎಲೆಗಳಿಗೆ ನಾಲ್ಕಾರು ಹನಿ ಲಿಂಬೆರಸ, ಚಿಟಿಕೆ ಅರಿಶಿನ ಪುಡಿ, ಚಿಟಿಕೆ ಗಂಧದ ಒಣ ಪುಡಿ (ಅಥವಾ ಹೊಟ್ಟು) ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. (ಕಲ್ಲಿನ ಮೇಲೆ ಅರೆದರೆ ಉತ್ತಮ, ಮಿಕ್ಸಿಯಲ್ಲಿ ಅರೆದರೆ ಬಿಸಿಯಾಗುವ ಮೂಲಕ ಎಲೆಗಳು ಗುಣಗಳನ್ನು ಕಳೆದುಕೊಳ್ಳಬಹುದು). ಈ ಲೇಪವನ್ನು ಮುಖ, ಕುತ್ತಿಗೆ ಮತ್ತು ಕೈಗಳ ಮೇಲೆ ಹಚ್ಚಿ ಸುಮಾರು ಇಪ್ಪತ್ತು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಬಳಸದಿರಿ. ಸಂಜೆ ಈ ಲೇಪನವನ್ನು ಹಚ್ಚಿ ಮರುದಿನ ಸ್ನಾನ ಮಾಡಿದರೆ ಉತ್ತಮ ಪರಿಣಾಮ ದೊರಕುತ್ತದೆ.

ನೆಲ್ಲಿಕಾಯಿ ಹಾಗೂ ಪಪ್ಪಾಯ

ನೆಲ್ಲಿಕಾಯಿ ಹಾಗೂ ಪಪ್ಪಾಯ

ನೆಲ್ಲಿಕಾಯಿ: ಎರಡು..

*ಪಪ್ಪಾಯಿ ಹಣ್ಣು: ನಾಲ್ಕೈದು ತೊಳೆಗಳು.

ತಯಾರಿಸುವ ವಿಧಾನ:

* ಮೇಲೆ ತಿಳಿಸಿದ ಸಾಮಾಗ್ರಿಗಳನ್ನು ಮಿಕ್ಸಿಯ ಬ್ಲೆಂಡರಿನಲ್ಲಿ ಚೆನ್ನಾಗಿ ಗೊಟಾಯಿಸಿ.

* ಈ ಲೇಪನವನ್ನು ಒಂದು ಬೋಗುಣಿಯಲ್ಲಿ ಸಂಗ್ರಹಿಸಿ

* ಈಗ ತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ಈ ಲೇಪನವನ್ನು ತೆಳುವಾಗಿ ಹಚ್ಚಿ

* ಹಚ್ಚುವ ಸಮಯದಲ್ಲಿ ನಯವಾಗಿ ಮಸಾಜ್ ಮಾಡಿ.

* ಕೆಲವು ನಿಮಿಷ ಮಸಾಜ್ ಮಾಡಿದ ಬಳಿಕ ಲೇಪವನ್ನು ಒಣಗಲು ಬಿಡಿ.

* ಸುಮಾರು ಹದಿನೈದು ನಿಮಿಷಗಳ ಬಳಿಕ ಉಗುರುಬೆಚ್ಚನೆಯ ನೀರಿನಿಂದ ತೊಳೆದುಕೊಳ್ಳಿ. ವಾರಕ್ಕೆ ಎರಡು ಅಥವಾ ಮೂರು ಬಾರಿ ಈ ವಿಧಾನವನ್ನು ಅನುಸರಿಸಿ.

ಟೊಮೆಟೊ ಮತ್ತು ಮೊಸರು

ಟೊಮೆಟೊ ಮತ್ತು ಮೊಸರು

ಮುಖದ ಬಣ್ಣವನ್ನು ಬಿಳಿಯಾಗಿಸಬೇಕಾದರೆ ತಾಜಾ ಟೊಮೆಟೊ ಜತೆಗೆ ಮೊಸರನ್ನು ಸೇರಿಸಿಕೊಳ್ಳಿ. ಟೊಮೆಟೊ ಮತ್ತು ಮೊಸರಿನಲ್ಲಿ ಬ್ಲೀಚಿಂಗ್ ಗುಣಗಳು ಇವೆ ಮತ್ತು ಇದು ಪರಿಣಾಮಕಾರಿಯಾಗಿ ಮುಖದ ಬಣ್ಣವನ್ನು ಬಿಳಿಯಾಗಿಸುವುದು. ಒಳ್ಳೆಯ ಫಲಿತಾಂಶ ಬೇಕೆಂದರೆ ಎರಡು ದಿನಕ್ಕೊಮ್ಮೆ ಇದನ್ನು ಬಳಸಿಕೊಳ್ಳಿ.

ಶ್ರೀಗಂಧ ಮತ್ತು ಪಪ್ಪಾಯ

ಶ್ರೀಗಂಧ ಮತ್ತು ಪಪ್ಪಾಯ

ಶ್ರೀಗಂಧವು ಚರ್ಮವನ್ನು ಬಿಳಿಮಾಡುವ ಗುಣಗಳನ್ನು ಹೊಂದಿದೆ. ಇದು ಚರ್ಮದಿಂದ ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಚರ್ಮವನ್ನು ಕಲೆಮುಕ್ತವಾಗಿಸುತ್ತದೆ. ಶ್ರೀಗಂಧದ ಆಂಟಿ ಬ್ಯಾಕ್ಟೀರಿಯ ಮತ್ತು ಆಂಟಿಸ್ಸೆಪ್ಟಿಕ್ ಗುಣಲಕ್ಷಣಗಳು ಮೊಡವೆ ಮತ್ತು ಮೊಡವೆಕಲೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಚರ್ಮವನ್ನು ಹೊಳಪು ಮಾಡುತ್ತದೆ. ಎಣ್ಣೆಯುಕ್ತ ಚರ್ಮ ಹೊಂದಿದವರು ಈ ಪ್ಯಾಕ್ ಅನ್ನು ಬಳಸಬಹುದು.

ಬೇಕಾಗುವ ಸಾಮಾಗ್ರಿಗಳು

• 1 ಚಮಚ ಶ್ರೀಗಂಧದ ಪುಡಿ / ಪೇಸ್ಟ್.

* ಹಿಸುಕಿದ ಪಪ್ಪಾಯ 3 ಟೇಬಲ್ ಚಮಚ

ಬಳಸುವುದು ಹೇಗೆ:

• ಬಟ್ಟಲಿನಲ್ಲಿ, 1 ಚಮಚ ಶ್ರೀಗಂಧದ ಪುಡಿ / ಪೇಸ್ಟ್ ಮತ್ತು 3 ಟೇಬಲ್ ಚಮಚ ಹಿಸುಕಿದ ಪಪ್ಪಾಯಿ ಸೇರಿಸಿ. ಮೃದು ಮಿಶ್ರಣವಾಗುವವರೆಗೆ ಕಲಸಿಕೊಳ್ಳಿ

• ನಿಮ್ಮ ಮುಖ ಮತ್ತು ಕತ್ತಿನ ಮೇಲೆ ಈ ಮಿಶ್ರಣವನ್ನು ಸರಿಯಾಗಿ ಹಚ್ಚಿಕೊಳ್ಳಿ.

• ನಿಮ್ಮ ಮುಖದ ಮೇಲೆ ಪ್ಯಾಕ್ ಅನ್ನು 20 ನಿಮಿಷಗಳ ಕಾಲ ಬಿಡಿ.

• ತಣ್ಣನೆಯ ನೀರಿನಿಂದ ತೊಳೆಯಿರಿ.

• ಕಾಂತಿಯುಕ್ತ ಚರ್ಮವನ್ನು ಪಡೆಯಲು ನಿಯಮಿತವಾಗಿ ಇದನ್ನು ಬಳಸಿರಿ

ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ

ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ

ಈ ಎಲ್ಲವೂ ನಿಮ್ಮ ಮುಖದ ಮೇಲೆ ಅದ್ಭುತವಾಗಿ ಕೆಲಸ ಮಾಡಲಿದೆ ಮತ್ತು ಕಾಂತಿಯನ್ನು ಹೆಚ್ಚಿಸಲಿದೆ. ಒಂದು ಚಮಚ ಹಾಲು ಮತ್ತು ಒಂದು ಚಮಚ ಲಿಂಬೆರಸವನ್ನು ಬೆರೆಸಿಕೊಳ್ಳಿ. ಇದಕ್ಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿಕೊಳ್ಳಿ. ಇದು ಮಾಯಿಶ್ಚರೈಸರ್ ನಂತೆ ಕೆಲಸ ಮಾಡುತ್ತದೆ. ಇದನ್ನು ನಿಯಮಿತವಾಗಿ ಬಳಸುವುದರಿಂದ ಕಾಂತಿಯುತ ತ್ವಚೆಯು ನಿಮ್ಮದಾಗುವುದರಲ್ಲಿ ಸಂಶಯವಿಲ್ಲ.

ಆಲೂಗಡ್ಡೆ

ಆಲೂಗಡ್ಡೆ

ಆಲೂಗಡ್ಡೆಯನ್ನು ಕೇವಲ ಅಡುಗೆಯಲ್ಲಿ ಮಾತ್ರ ಬಳಸುವುದಲ್ಲ. ಇದರಲ್ಲಿ ಇರುವಂತಹ ಬ್ಲೀಚಿಂಗ್ ಅಂಶವು ಮುಖದ ಬಣ್ಣವನ್ನು ಹೆಚ್ಚು ಮಾಡಿ ಕಾಂತಿ ನೀಡುವುದು. ಒಂದು ಆಲೂಗಡ್ಡೆ ತೆಗೆದುಕೊಂಡು ಅದನ್ನು ಹುಡಿ ಮಾಡಿ ಇದರ ರಸ ಅಥವಾ ತಿರುಳನ್ನು ಮುಖದ ಮೇಲೆ ಹಚ್ಚಿಕೊಳ್ಳಿ. ಪರಿಣಾಮಕಾರಿ ಫಲಿತಾಂಶ ಬೇಕೆಂದರೆ ನಿಯಮಿತವಾಗಿ ಬಳಸಿ.

ಬಾಳೆಹಣ್ಣು ಮತ್ತು ಬಾದಾಮಿ ಎಣ್ಣೆ

ಬಾಳೆಹಣ್ಣು ಮತ್ತು ಬಾದಾಮಿ ಎಣ್ಣೆ

ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ಮತ್ತು ಬಾದಾಮಿ ಎಣ್ಣೆಯು ಮುಖದ ಬಣ್ಣ ಹಾಗೂ ಕಾಂತಿಯನ್ನು ಹೆಚ್ಚಿಸುವುದು. ಹಣ್ಣಾಗಿರುವ ಬಾಳೆಹಣ್ಣನ್ನು ತೆಗೆದುಕೊಂಡು ಅದನ್ನು ಸರಿಯಾಗಿ ಕಿವುಚಿ. ಇದು ತುಂಬಾ ನಯವಾದ ಬಳಿಕ ಅದಕ್ಕೆ ಒಂದು ಚಮಚ ಬಾದಾಮಿ ಎಣ್ಣೆ ಹಾಕಿ. ಇದನ್ನು ಸರಿಯಾಗಿ ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. 20 ನಿಮಿಷ ಬಿಟ್ಟು ತೊಳೆಯಿರಿ.

ಪಪ್ಪಾಯಿ ಮತ್ತು ಜೇನುತುಪ್ಪ

ಪಪ್ಪಾಯಿ ಮತ್ತು ಜೇನುತುಪ್ಪ

ಪಪ್ಪಾಯಿಯಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಅದೇ ಪಪ್ಪಾಯಿಯಲ್ಲಿರುವ ಕೆಲವೊಂದು ಕಿಣ್ವಗಳು ಚರ್ಮದ ಮರುನಿರ್ಮಾಣಕ್ಕೆ ನೆರವಾಗುವುದು. ಪಪ್ಪಾಯಿಯು ನೈಸರ್ಗಿಕ ಸನ್ ಸ್ಕ್ರೀನ್ ಮತ್ತು ಸೂರ್ಯನ ಕಿರಣಗಳಿಂದ ತ್ವಚೆಯನ್ನು ರಕ್ಷಿಸುವುದು. ಅರ್ಧ ಕಪ್ ಪಪ್ಪಾಯಿ ತಿರುಳನ್ನು ಸರಿಯಾಗಿ ಕಿವುಚಿಕೊಂಡು ಅದಕ್ಕೆ ಒಂದು ಚಮಚ ಜೇನುತುಪ್ಪನ್ನು ಹಾಕಿಕೊಳ್ಳಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿಕೊಂಡು 20 ನಿಮಿಷ ಕಾಲ ಹಾಗೆ ಬಿಡಿ. ನೀರಿನಿಂದ ತೊಳೆದ ಬಳಿಕ ಮುಖದಲ್ಲಿ ಕಾಂತಿಯನ್ನು ಕಾಣಬಹುದು.

ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ

ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ

ಈ ಎಲ್ಲವೂ ನಿಮ್ಮ ಮುಖದ ಮೇಲೆ ಅದ್ಭುತವಾಗಿ ಕೆಲಸ ಮಾಡಲಿದೆ ಮತ್ತು ಕಾಂತಿಯನ್ನು ಹೆಚ್ಚಿಸಲಿದೆ. ಒಂದು ಚಮಚ ಹಾಲು ಮತ್ತು ಒಂದು ಚಮಚ ಲಿಂಬೆರಸವನ್ನು ಬೆರೆಸಿಕೊಳ್ಳಿ. ಇದಕ್ಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿಕೊಳ್ಳಿ. ಇದು ಮಾಯಿಶ್ಚರೈಸರ್ ನಂತೆ ಕೆಲಸ ಮಾಡುತ್ತದೆ. ಇದನ್ನು ನಿಯಮಿತವಾಗಿ ಬಳಸುವುದರಿಂದ ಕಾಂತಿಯುತ ತ್ವಚೆಯು ನಿಮ್ಮದಾಗುವುದರಲ್ಲಿ ಸಂಶಯವಿಲ್ಲ.

ಓಟ್ಸ್ ಮತ್ತು ಮೊಸರು

ಓಟ್ಸ್ ಮತ್ತು ಮೊಸರು

ಓಟ್ಸ್ ಮತ್ತು ಮೊಸರಿನ ಮಿಶ್ರಣವು ಮುಖದ ಬಣ್ಣವನ್ನು ಬಿಳಿ ಮಾಡಲು ಅತ್ಯಂತ ಸುಲಭ ನೈಸರ್ಗಿಕ ವಿಧಾನವಾಗಿದೆ. ಇದು ಕಪ್ಪುಕಲೆ, ಮೊಡವೆಯಿಂದ ಆದ ಕಲೆ ಮತ್ತು ಇತರ ಕಲೆಗಳನ್ನು ತುಂಬಾ ವೇಗವಾಗಿ ತೆಗೆದುಹಾಕುವುದು. ಓಟ್ ಮೀಲ್ ನ್ನು ರಾತ್ರಿ ವೇಳೆ ನೆನೆಸಲು ಹಾಕಿ. ಬೆಳಿಗ್ಗೆ ಅದನ್ನು ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಮೊಸರು ಸೇರಿಸಿ. ಪ್ರತೀ ದಿನ ನೀವು ಇದನ್ನು ಹಚ್ಚಿಕೊಳ್ಳುವುದರಿಂದ ಪರಿಣಾಮಕಾರಿ ಫಲಿತಾಂಶವನ್ನು ಪಡೆಯಬಹುದು.

ಕಡಲೆಹಿಟ್ಟು ಮತ್ತು ಅರಿಶಿನ

ಕಡಲೆಹಿಟ್ಟು ಮತ್ತು ಅರಿಶಿನ

ಕಡಲೆ ಹಿಟ್ಟು ಮತ್ತು ಅರಿಶಿನವು ನಮ್ಮ ಅಡುಗೆ ಮನೆಗಳಲ್ಲಿ ತುಂಬಾ ಸುಲಭವಾಗಿ ಸಿಗುವಂತದ್ದಾಗಿದೆ. ಒಂದು ಚಮಚ ಕಡಲೆ ಹಿಟ್ಟು ಮತ್ತು ಒಂದು ಚಮಚ ಅರಿಶಿನವನ್ನು ಹಾಲು ಅಥವಾ ನೀರಿನೊಂದಿಗೆ ಸರಿಯಾಗಿ ಬೆರೆಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. 15 ನಿಮಿಷ ಬಿಟ್ಟು ಮುಖ ತೊಳೆಯಿರಿ.

English summary

Ways to Get Fair Skin in Two Weeks

In some cases, even if you are have a lighter skin tone, due to various reasons like poor nutrition, exposure to pollution and sunlight, hormonal imbalance, lack of a proper skin care routine, etc, your skin can lose its fairness and radiance. So, in order to attain a fairer skin tone naturally, without going in for beaching treatments, etc, you can use this ancient home remedy made using natural ingredients. Here is how you prepare the homemade face pack, have a \look.
X
Desktop Bottom Promotion