Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
ಚಳಿಗಾಲದ ಶುಷ್ಕ ಗಾಳಿ ನಿಮ್ಮ ಚರ್ಮಕ್ಕೆ ಹಾನಿ ಉಂಟುಮಾಡುತ್ತದೆ. ಇದು ಚರ್ಮ್ದ ನೈಸರ್ಗಿಕ ತೇವಾಂಶ ಮತ್ತು ಎಣ್ಣೆಯನ್ನು ಕಸಿದುಕೊಂಡು ನಿರ್ಜಲೀಕರಣಗೊಳಿಸುತ್ತದೆ. ಜೊತೆಗೆ, ಶೀತ ವಾತಾವರಣದಲ್ಲಿ ನಮಗೆ ಕಡಿಮೆ ಬಾಯಾರಿಕೆ ಇರುವುದರಿಂದ, ಬೇಸಿಗೆಗಿಂತ ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುತ್ತೇವೆ. ಚಳಿಗಾಲದಲ್ಲಿ ದೊಡ್ಡ ತಪ್ಪು ಇದು. ದೇಹವು ಕಲ್ಮಶವನ್ನು ಹೊರಹಾಕಲು, ನಿಮ್ಮ ಚರ್ಮವನ್ನು ಕಾಂತಿಯುತವಾಗಿರಿಸಲು ಮತ್ತು ತೇವಾಂಶವನ್ನು ಕಾಪಾಡಿಕೊಳ್ಳಲು ನೀರು ಸಹಾಯ ಮಾಡುತ್ತದೆ.
ನಿಮ್ಮ ಚರ್ಮವು ತನ್ನ ಹೊಳಪನ್ನು ಕಳೆದುಕೊಳ್ಳಲು ಇನ್ನೊಂದು ಕಾರಣವೆಂದರೆ ಇತ್ತೀಚೆಗಿನ ಅನಾರೋಗ್ಯಕರ ಆಹಾರ ಪದ್ಧತಿ. ಶೀತ ವಾತಾವರಣವು ಚರ್ಮಕ್ಕೆ ಉಂಟು ಮಾಡುವ ಸಕ್ಕರೆ ಮತ್ತು ಪಿಷ್ಟಯುಕ್ತ ಆಹಾರಕ್ಕಾಗಿ ಹಂಬಲಿಸುವಂತೆ ಮಾಡುತ್ತದೆ. ಇದರಿಂದ ಚರ್ಮದಲ್ಲಿ ಉರಿಯೂತ, ಮೊಡವೆಗಳು, ಒಣ ಚರ್ಮ ಮತ್ತು ಅಕಾಲಿಕ ವಯಸ್ಸಿಗೆ ಕಾರಣವಾಗಬಹುದು.
ಈ ಶುಷ್ಕತೆಯನ್ನು ಎದುರಿಸಲು ಮಾಯಿಶ್ಚರೈಸರ್ ಗಳಷ್ಟೇ ಸಾಕಾಗುವುದಿಲ್ಲ. ನಿಮ್ಮ ಚರ್ಮದ ಕಳೆದುಹೋದ ಶೈನ್ ಅನ್ನು ಮರಳಿ ತರಲು ನಿಮ್ಮ ಆಹಾರಕ್ರಮದ ಬಗ್ಗೆ ನೀವು ಗಮನ ಹರಿಸಬೇಕು. ಅದಕ್ಕಾಗಿ ಹಣ್ಣುಗಳು ಮತ್ತು ತರಕಾರಿಗಳು ಆ ಹೊಳಪನ್ನು ಮರಳಿ ಪಡೆಯಲು ನಿಮಗೆ ಸಹಾಯ ಮಾಡುತ್ತದೆ.
ಚಳಿಗಾಲದಲ್ಲಿ ಸೇವಿಸಬೇಕಾದ ಆಹಾರಗಳು ಇಲ್ಲಿವೆ:

ಕ್ಯಾರೆಟ್:
ಈ ಜನಪ್ರಿಯ ತರಕಾರಿ ಆರೋಗ್ಯಕರ ಚರ್ಮ ಮತ್ತು ಉಗುರುಗಳನ್ನು ಉತ್ತೇಜಿಸುವ ಹಲವಾರು ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಕ್ಯಾರೆಟ್‌ನಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದ್ದು, ಇದನ್ನು ದೇಹವು ವಿಟಮಿನ್ ಎ ಆಗಿ ಪರಿವರ್ತಿಸುತ್ತದೆ. ವಿಟಮಿನ್ ಎ ಚರ್ಮದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಮತ್ತು ಗುಣಪಡಿಸುವಿಕೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಇದು ನೈಸರ್ಗಿಕ ಆರ್ಧ್ರಕವನ್ನು ಉತ್ತೇಜಿಸಿ, ನಿಮ್ಮ ಚರ್ಮಕ್ಕೆ ಕಾಂತಿಯುತ ಹೊಳಪನ್ನು ನೀಡುತ್ತದೆ.

ಬೀಟ್ರೋಟ್:
ನಿಮ್ಮ ಚರ್ಮವು ಒಳಗಿನಿಂದ ಹೊಳೆಯುವಂತೆ ಮಾಡಲು ನಿಯಮಿತವಾಗಿ ತಾಜಾ ಬೀಟ್ರೂಟ್ ರಸವನ್ನು ಕುಡಿಯಿರಿ. ಇದು ರಕ್ತ ಶುದ್ಧೀಕರಣ ಮತ್ತು ಟಾಕ್ಸಿನ್ ಎಲಿಮಿನೇಟಿಂಗ್ ಗುಣಗಳನ್ನು ಹೊಂದಿದ್ದು ಅದು ಹೊಳೆಯುವ ಚರ್ಮಕ್ಕೆ ಕಾರಣವಾಗುತ್ತದೆ. ಬೀಟ್ರೂಟ್ ವಿಟಮಿನ್ ಸಿ ಯ ಉತ್ತಮ ಮೂಲವಾಗಿದ್ದು, ಇದ್ದು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಬಲ್ಲದು, ಇದು ವಯಸ್ಸಾಗುವಿಕೆಯನ್ನು ವಿಳಂಬಗೊಳಿಸುತ್ತದೆ ಮತ್ತು ನಿಮ್ಮ ಚರ್ಮವನ್ನು ತಾರುಣ್ಯ ಮತ್ತು ಕಾಂತಿಯುಕ್ತಗೊಳಿಸುತ್ತದೆ.

ಬ್ರೊಕೊಲಿ:
ಚರ್ಮದ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಎ ಮತ್ತು ಸಿ ಈ ತರಕಾರಿಯಲ್ಲಿ ಅಧಿಕವಾಗಿದೆ. ಚರ್ಮ ಮತ್ತು ಕೂದಲು ಸೇರಿದಂತೆ ಎಲ್ಲಾ ದೈಹಿಕ ಅಂಗಾಂಶಗಳ ಬೆಳವಣಿಗೆಯಲ್ಲಿ ವಿಟಮಿನ್ ಎ ಪ್ರಮುಖ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ಕಾಲಜನ್ ಉತ್ಪಾದನೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಬ್ರೊಕೊಲಿಯಲ್ಲಿ ವಿಟಮಿನ್ ಬಿ- ಇದ್ದು, ಇದು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಶುಷ್ಕತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕಿತ್ತಳೆ:
ಸಿಟ್ರಿಕ್ ಆಮ್ಲ ಹೆಚ್ಚಿರುವ ಈ ಕಿತ್ತಳೆ ತಿನ್ನುವುದು ಬಹಳ ಒಳ್ಳೆಯದು. ಇದು ಮೊಡವೆಗಳನ್ನು ಒಣಗಿಸಿ, ಆರೋಗ್ಯಕರ ಹೊಳೆಯುವ ಚರ್ಮ ನೀಡುತ್ತದೆ. ಈ ಜನಪ್ರಿಯ ಸಿಟ್ರಸ್ ಹಣ್ಣು ವಿಟಮಿನ್ ಸಿ ಯ ಉತ್ತಮ ಮೂಲವಾಗಿದ್ದು, ಒಣ ಚರ್ಮವನ್ನು ಸರಿಪಡಿಸಲು ಸಹಾಯ ಮಾಡುತ್ತದೆ.

ದಾಳಿಂಬೆ:
ಈ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ನೀರಿನ ಅಂಶವಿದ್ದು ಅದು ನಿಮ್ಮ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ, ಇದರ ಪರಿಣಾಮವಾಗಿ ನಯವಾದ, ಕಾಂತಿಯುಕ್ತ ಚರ್ಮ ನಿಮ್ಮದಾಗುತ್ತದೆ. ದಾಳಿಂಬೆ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಸ್ವತಂತ್ರ ರಾಡಿಕಲ್ಗಳನ್ನು ಎದುರಿಸಲು ಸಹಾಯ ಮಾಡುತ್ತದೆ.



Click it and Unblock the Notifications
