Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಚರ್ಮ ಆರೋಗ್ಯವಾಗಿರುವಂತೆ ನೋಡಿಕೊಳ್ಳುವುದು ಹೇಗೆ?
ವಾತಾವರಣ ಬದಲಾದಾಗ ನಮ್ಮ ಶರೀರ ಮತ್ತು ಆರೋಗ್ಯದಲ್ಲಿ ಒಂದಷ್ಟು ಬದಲಾವಣೆಗಳಾಗುತ್ತವೆ. ಅದು ಒಬ್ಬರಿಂದ ಮತ್ತೊಬ್ಬರಿಗೆ ಒಂದೇ ರೀತಿಯಲ್ಲಿ ಕಾಣಿಸಬೇಕೆಂದಿಲ್ಲ. ಕೆಲವರಿಗೆ ಶೀತ, ಕೆಮ್ಮು, ನೆಗಡಿಗಳಾದರೆ, ಇನ್ನು ಕೆಲವರಿಗೆ ಜ್ವರ ಕಾಣಿಸಿಕೊಳ್ಳಬಹುದು.
ಇದರ ನಡುವೆ ವಾತಾವರಣದ ಬದಲಾವಣೆ ನೇರವಾಗಿ ನಮ್ಮ ಶರೀರದ ಮೇಲೆಯೇ ಬೀಳುತ್ತಿದ್ದು ಅದರ ಪರಿಣಾಮಗಳನ್ನು ಚರ್ಮವೇ ಎದುರಿಸಬೇಕಾಗುತ್ತದೆ.

ಕಾಡುವ ಚಳಿಗೆ ಚರ್ಮದಲ್ಲಿ ಒಡಕು
ಚಳಿಗಾಲದಲ್ಲಿ ನಾವೆಷ್ಟೇ ಶರೀರವನ್ನು ಕಾಪಾಡಿಕೊಂಡರೂ ಕೈಕಾಲುಗಳಲ್ಲಿ ಬಿರುಕು, ಚರ್ಮದಲ್ಲಿ ಒಡಕು ಕಂಡು ಬರುವುದು ಸಾಮಾನ್ಯ. ಇದರಿಂದ ಸಂರಕ್ಷಿಸಿಕೊಳ್ಳುವುದೇ ಒಂದು ಸವಾಲ್. ನಮ್ಮ ಶರೀರ ಅಂದವಾಗಿಯೂ, ರೋಗ ಮುಕ್ತವಾಗಿಯೂ ಇರಬೇಕಾದರೆ ಚರ್ಮದ ಬಗೆಗಿನ ಒಂದಷ್ಟು ಕಾಳಜಿ ಅಗತ್ಯ ಎಂಬುದನ್ನು ತಳ್ಳಿಹಾಕುವಂತಿಲ್ಲ.
ವಾತಾವರಣದಲ್ಲಿ ಏರುಪೇರಾದಾಗ ಹಾಗೂ ಶುಚಿಯಾಗಿರಿಸಿಕೊಳ್ಳದ ಸಂದರ್ಭ ಚರ್ಮದ ಮೇಲೆ ಪರಿಣಾಮ ಬೀರಿ ಹಲವು ಚರ್ಮ ರೋಗಗಳು ಬರುವ ಸಾಧ್ಯತೆ ಇರುತ್ತದೆ.
ಹಾಗಾದರೆ ಚರ್ಮ ಸುಂದರವಾಗಿಯೂ, ಆರೋಗ್ಯವಾಗಿಯೂ ಇರಬೇಕಾದರೆ ಏನು ಮಾಡಬೇಕು ಎಂಬ ಪ್ರಶ್ನೆಗಳು ಮೂಡುವುದು ಸಹಜ.

ಆರೋಗ್ಯವಂತ ಚರ್ಮ ನಮ್ಮದಾಗಿರಲಿ
ಆರೋಗ್ಯವಂತ ಚರ್ಮ ನಮ್ಮದಾಗಿದ್ದರೆ ಮಾತ್ರ ಆರೋಗ್ಯವಂತ ಬದುಕು ನಮ್ಮದಾಗಲು ಸಾಧ್ಯವಾಗುತ್ತದೆ. ಹಾಗಾದರೆ ಆರೋಗ್ಯವಂತ ಚರ್ಮ ಯಾವುದಪ್ಪಾ ಎಂಬ ಪ್ರಶ್ನೆಗಳು ನಮ್ಮಲ್ಲಿ ಏಳುತ್ತವೆ. ಕಾಂತಿಯಿಂದ ಮಿನುಗುವ, ಮೃದುವಾಗಿರುವ ಚರ್ಮವೇ ಆರೋಗ್ಯವಂತ ಚರ್ಮವಾಗಿದ್ದು, ಕೆಲವೊಮ್ಮೆ ವಾತಾವರಣದ ಮಾಲಿನ್ಯ, ಅತಿ ಉಷ್ಣ, ಅತಿ ಚಳಿ, ಪೌಷ್ಠಿಕ ಆಹಾರದ ಕೊರತೆ, ಅನಾರೋಗ್ಯ ಪರಿಸರಗಳಲ್ಲಿ ನೆಲೆಸುವುದರಿಂದ ಚರ್ಮದ ಆರೋಗ್ಯಕ್ಕೆ ಧಕ್ಕೆಯುಂಟಾಗುತ್ತದೆ.

ಮೃದುತ್ವ ನಾಶ ಮಾಡುವ ಸೂರ್ಯ ಕಿರಣ
ಚರ್ಮವು ಆರೋಗ್ಯವಾಗಿರಲು ಸೂರ್ಯನ ಕಿರಣಗಳ ಅಗತ್ಯವಿದೆಯಾದರೂ, ಕೆಲಮೊಮ್ಮೆ ಅಗತ್ಯಕ್ಕಿಂತ ಹೆಚ್ಚಿನ ಸೂರ್ಯನ ಕಾಂತಿಯಿಂದಲೂ ಚರ್ಮಕ್ಕೆ ಹಾನಿಯಾಗುತ್ತದೆ. ಏಕೆಂದರೆ ಸೂರ್ಯ ಕಿರಣದಲ್ಲಿನ ಅತಿನೇರಳೆ ಬಣ್ಣದ ಕಿರಣಗಳು ಚರ್ಮವನ್ನು ಒಣಗುವಂತೆ ಮಾಡಿ ಮೃದುತ್ವವನ್ನು ನಾಶಮಾಡುತ್ತದೆ. ಸೂರ್ಯ ಕಿರಣಗಳಿಂದಾಗಿ ಉಂಟಾಗುವ ರೆಡಿಯೇಷನ್‌ನಿಂದಲೂ ಸಹ ಚರ್ಮವು ತನ್ನ ತೇವವನ್ನು ಕಳೆದುಕೊಂಡು ಕಳಾಹೀನವಾಗಿ ಬಿಡುತ್ತದೆ. ಆದುದರಿಂದ ಬೆಳಗಿನ ಎಳೆ ಬಿಸಿಲಿನಲ್ಲಿ ವಾಕಿಂಗ್ ಮಾಡುವುದರಿಂದ ಚರ್ಮ ನುಣುಪಾಗಿರುತ್ತದೆ. ಬಿಸಿಲೇ ತಾಕದಂತೆ ಇದ್ದರೂ ಕೆಲವೊಮ್ಮೆ ಚರ್ಮ ಒಣಗಿ ಸುಕ್ಕು ಕಟ್ಟಿ ಬಿಡುತ್ತದೆ.

ವ್ಯಾಧಿಗಳು ದಾಳಿ ಮಾಡಬಹುದು
ನಾವು ವಾಸವಿರುವ ಮನೆಯ ಸುತ್ತಮುತ್ತ ಕಲುಷಿತ ವಾತಾವರಣ ಇದ್ದಾಗಲೂ ಚರ್ಮಕ್ಕೆ ಕೆಲವು ವ್ಯಾಧಿಗಳು ತಗಲುವ ಸಾಧ್ಯತೆಯಿರುತ್ತದೆ. ಗಾಳಿ, ನೀರು, ಧೂಳು, ಹೊಗೆ, ಅಲರ್ಜಿಕಾರಕ ವಸ್ತುಗಳಿಂದಲೂ ಚರ್ಮಕ್ಕೆ ಹಾನಿಯಾಗುತ್ತದೆ. ತೇವವಾಗಿ ತಣ್ಣಗಿರುವ ವಾತಾವರಣ ಚರ್ಮಕ್ಕೆ ತುಂಬಾ ಒಳ್ಳೆಯದು. ಹಾಗೆಂದು ಮಿತಿಮೀರಿದ ಚಳಿಯಲ್ಲಿ ಓಡಾಡುವುದು ಒಳ್ಳೆಯದಲ್ಲ. ಚಳಿಗಾಲದಲ್ಲಿ ಚರ್ಮ ಒಡೆಯುತ್ತದೆ.

ಪೌಷ್ಠಿಕಾಂಶಗಳ ಆಹಾರ ಸೇವನೆ ಅಗತ್ಯ
ವೈದ್ಯರು ಹೇಳುವ ಪ್ರಕಾರ ಚರ್ಮದ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಪೌಷ್ಟಿಕಾಂಶವುಳ್ಳ ಆಹಾರ, ಕಾಯಿಪಲ್ಯೆ, ತರಕಾರಿಗಳನ್ನು ಆಹಾರವಾಗಿ ಸೇವಿಸಬೇಕು. ಕೇಕ್, ತಂಪು ಪಾನೀಯಗಳು, ಸಿಹಿತಿಂಡಿಗಳು, ಮಸಾಲೆಯ ಪದಾರ್ಥ ತಿನ್ನುವುದನ್ನು ಕಡಿಮೆ ಮಾಡಬೇಕು. ಚರ್ಮಕ್ಕೆ ಹೊಂದಿಕೊಳ್ಳುವ ಸಾಬೂನನ್ನು ಅರಿತು ಅದನ್ನೇ ಉಪಯೋಗಿಸಬೇಕು. ಕೃತಕ ಸೌಂದರ್ಯ ವರ್ಧಕಗಳಿಂದ ಆದಷ್ಟು ದೂರವಿರಬೇಕು. ಬಾದಾಮಿ ಎಣ್ಣೆಯಿಂದ ಚರ್ಮವನ್ನು ಮೃದುವಾಗಿ ಮಾಲೀಸ್ ಮಾಡಬೇಕು.

ಜಿಡ್ಡು ತೊಲಗಿಸಲು ಸೌತೆ ಸಹಕಾರಿ
ಬಿಗಿಯಾದ ಉಡುಪುಗಳನ್ನು ಧರಿಸಬಾರದು. ಸೌತೆಕಾಯಿಯನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ, ಚರ್ಮದ ಮೇಲೆ ಇಟ್ಟುಕೊಂಡರೆ ಜಿಡ್ಡು ದೂರವಾಗುತ್ತದೆ. ಧರಿಸುವ ಉಡುಪು ಶುಭ್ರವಾಗಿರುವಂತೆ ನೋಡಿಕೊಳ್ಳಬೇಕು. ಶರೀರ ಹಾಗೂ ಬಟ್ಟೆ ಸ್ವಚ್ಛವಾಗಿರುವಂತೆ ಪ್ರತಿದಿನವೂ ನೋಡಿಕೊಂಡರೆ ಚರ್ಮವನ್ನು ಇತರೆ ವ್ಯಾಧಿಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಿದೆ.



Click it and Unblock the Notifications
