Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸ್ಟಾಪ್ ಮಾಡಿ! ಮಹಿಳೆಯರು ಪಿರಿಯಡ್ಸ್ ಟೈಮ್‌ನಲ್ಲಿ ಈ 5 ತಪ್ಪು ಮಾಡ್ತಾರೆ.. ಇದರಿಂದ ಪ್ರಾಬ್ಲಂ ಡಬಲ್
ಪಿರಿಯಡ್ಸ್ ಸಮಯದಲ್ಲಿ ಮಹಿಳೆಯರಿಗೆ ದೈಹಿಕ ಮತ್ತು ಮಾನಸಿಕ ಸವಾಲುಗಳು ಎದುರಾಗುತ್ತವೆ. ಈ ಸಮಯದಲ್ಲಿ ಸ್ವಲ್ಪ ಅಜಾಗರೂಕತೆಯು ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಹೌದು, ಮಹಿಳೆಯರು ಮುಟ್ಟಿನ ಸಮಯದಲ್ಲಿ ಸಾಮಾನ್ಯವಾಗಿ ಕೆಲವು ತಪ್ಪುಗಳನ್ನು (Period Mistakes) ಮಾಡುತ್ತಾರೆ. ಇದರಿಂದ ನಿಮ್ಮ ಆರೋಗ್ಯ ಸಮಸ್ಯೆಯನ್ನು ಹೆಚ್ಚುತ್ತದೆ. ಪಿರಿಯಡ್ಸ್ ಸಮಯದಲ್ಲಿ ನೈರ್ಮಲ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ಇಲ್ಲದಿದ್ದರೆ ಅದು ಅನೇಕ ರೀತಿಯ ಸೋಂಕುಗಳಿಗೆ ಕಾರಣವಾಗಬಹುದು. ನಾವಿಂದು ಈ ಲೇಖನದಲ್ಲಿ ಅವುಗಳನ್ನು ತಪ್ಪಿಸುವ ಮಾರ್ಗಗಳ ಬಗ್ಗೆ ತಿಳಿಸುತ್ತೇವೆ.
ಮುಟ್ಟಿನ ಸಮಯದಲ್ಲಿ ಮಹಿಳೆಯರು ತಮ್ಮ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಇದರ ಜೊತೆಗೆ ಹೆಚ್ಚು ವಿಶ್ರಾಂತಿ ಪಡೆಯಬೇಕು. ಇದರಿಂದ ನಿಮ್ಮ ಪಿರಿಯಡ್ಸ್ ದಿನಗಳು ಆರೋಗ್ಯಕರವಾಗಿರುತ್ತದೆ. ಆದರೆ, ಮುಟ್ಟಿನ ಬಗ್ಗೆ ಸಮಾಜದಲ್ಲಿ ಹರಡಿರುವ ತಪ್ಪು ಕಲ್ಪನೆಗಳು ಹಾಗೂ ನೈರ್ಮಲ್ಯದ ಕೊರತೆಯಿಂದ ನೀವು ಹಲವು ಮುಟ್ಟಿಗೆ ಸಂಬಂಧಿಸಿದ ಕಾಯಿಲೆಗೆ ಒಳಗಾಗುತ್ತಿದ್ದೀರಿ. ಇದರಿಂದ ಪ್ರತಿ ವರ್ಷ ಅನೇಕ ಮಹಿಳೆಯರು ಸಾಯುತ್ತಿದ್ದಾರೆ. ಆದ್ದರಿಂದ, ಮುಟ್ಟಿನ ಬಗ್ಗೆ ಸರಿಯಾದ ಸಲಹೆಗಳನ್ನು ತಿಳಿದುಕೊಳ್ಳಬೇಕಿದೆ. ಮುಟ್ಟಿನ ಸಮಯದಲ್ಲಿ ಮಹಿಳೆಯರು ಸಾಮಾನ್ಯವಾಗಿ ಮಾಡುವ 5 ತಪ್ಪುಗಳು ಯಾವುವು? ಎಂಬುವುದು ಇಲ್ಲಿದೆ ನೋಡಿ.

1. ದೀರ್ಘಕಾಲ ಒಂದೇ ಸ್ಯಾನಿಟರಿ ಉತ್ಪನ್ನ ಬಳಸುವುದು
ಮುಟ್ಟಿನ ಸಮಯದಲ್ಲಿ ಅನೇಕ ಮಹಿಳೆಯರು ದಿನವಿಡೀ ಒಂದೇ ಪ್ಯಾಡ್ ಅನ್ನು ಬಳಸುತ್ತಾರೆ. ಇದು ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ಹೇಳಲಾಗುತ್ತದೆ. ಈ ಅಭ್ಯಾಸವು ದುರ್ವಾಸನೆ ಮತ್ತು ತುರಿಕೆಗೆ ಕಾರಣವಾಗುತ್ತದೆ. ಅಲ್ಲದೆ, ಮೂತ್ರದ ಸೋಂಕು (UTI) ಮತ್ತು ಚರ್ಮದ ದದ್ದುಗಳಿಗೆ ಕಾರಣವಾಗಬಹುದು. ರಕ್ತಸ್ರಾವ ಕಡಿಮೆ ಇದ್ದರೂ ಸಹ ಪ್ರತಿ 4 ರಿಂದ 6 ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್ ಅನ್ನು ಬದಲಾಯಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
2. ಪಿರಿಯಡ್ಸ್ ಸಮಯದಲ್ಲಿ ಕಡಿಮೆ ನೀರು ಕುಡಿಯುವುದು
ಋತುಚಕ್ರದ ಸಮಯದಲ್ಲಿ ಅನೇಕರು ಕಡಿಮೆ ನೀರು ಕುಡಿಯುತ್ತಾರೆ. ಹೌದು, ಮುಟ್ಟಿನ ಸಮಯದಲ್ಲಿ ದೇಹವು ನಿರ್ಜಲೀಕರಣಗೊಳ್ಳುತ್ತದೆ. ಇದು ಆಯಾಸ ಮತ್ತು ತಲೆನೋವುಗೆ ಕಾರಣವಾಗಬಹುದು. ಆದರೆ, ಮಹಿಳೆಯರು ಸಾಮಾನ್ಯವಾಗಿ ನೋವು ಮತ್ತು ಸುಸ್ತು ಕಾರಣದಿಂದಾಗಿ ನೀರು ಕುಡಿಯುವುದನ್ನು ಕಡಿಮೆ ಮಾಡುತ್ತಾರೆ. ನೀರಿನ ಕೊರತೆಯಿಂದಾಗಿ ಹೊಟ್ಟೆ ಉಬ್ಬುವುದು ಮತ್ತು ಮಲಬದ್ಧತೆ ಹೆಚ್ಚಾಗಬಹುದು. ಈ ಸಮಯದಲ್ಲಿ ಸಾಕಷ್ಟು ನೀರು ಮತ್ತು ದ್ರವ ಆಹಾರ ಸೇವಿಸುವುದು ಬಹಳ ಮುಖ್ಯ.
3. ಹೆಚ್ಚು ಅಥವಾ ಕಡಿಮೆ ವ್ಯಾಯಾಮ ಮಾಡುವುದು
ಕೆಲವು ಮಹಿಳೆಯರು ಮುಟ್ಟಿನ ಸಮಯದಲ್ಲಿ ಸಂಪೂರ್ಣವಾಗಿ ವಿಶ್ರಾಂತಿ (ಬೆಡ್ ರೆಸ್ಟ್) ಪಡೆಯುತ್ತಾರೆ. ಆದರೆ, ಕೆಲವರು ನೋವನ್ನು ಲೆಕ್ಕಿಸದೆ ಕಠಿಣ ವ್ಯಾಯಾಮ ಮಾಡುತ್ತಾರೆ. ಈ ಎರಡೂ ವಿಷಯಗಳು ಅಪಾಯಕಾರಿ. ಸಣ್ಣಪುಟ್ಟ ವ್ಯಾಯಾಮ ಅಥವಾ ವಾಕಿಂಗ್ ಮಾಡುವುದು ಪ್ರಯೋಜನಕಾರಿ. ಆದರೆ, ದೇಹದ ಸಾಮರ್ಥ್ಯಕ್ಕಿಂತ ಹೆಚ್ಚು ಶ್ರಮವಹಿಸಿದರೆ (ವ್ಯಾಯಾಮ) ನೋವು ಮತ್ತು ರಕ್ತಸ್ರಾವ ಹೆಚ್ಚಾಗಬಹುದು.
4. ಆಹಾರದ ಬಗ್ಗೆ ನಿರ್ಲಕ್ಷ್ಯ
ಅತಿಯಾಗಿ ಜಂಕ್ ಫುಡ್ ತಿನ್ನುವುದು. ಮುಟ್ಟಿನ ಸಮಯದಲ್ಲಿ ಅನೇಕ ಜನರು ತಿನ್ನಬೇಕೆಂಬ ಬಯಕೆಯಿಂದ ಚಿಪ್ಸ್, ಚಾಕೊಲೇಟ್ ಮತ್ತು ಕರಿದ ತಿಂಡಿಗಳನ್ನು ತಿನ್ನಲು ಪ್ರಾರಂಭಿಸುತ್ತಾರೆ. ಆದರೆ, ಹೀಗೆ ಮಾಡುವುದರಿಂದ ಹೊಟ್ಟೆ ಉಬ್ಬುವುದು, ಗ್ಯಾಸ್ ಮತ್ತು ಸೆಳೆತ ಹೆಚ್ಚಾಗುತ್ತದೆ. ಹಣ್ಣುಗಳು, ತರಕಾರಿಗಳು ಮತ್ತು ಫೈಬರ್ ಭರಿತ ಆಹಾರಗಳನ್ನು ಒಳಗೊಂಡಿರುವ ಸಮತೋಲಿತ ಆಹಾರವನ್ನು ಸೇವಿಸುವುದು ಉತ್ತಮ.
5. ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುವುದು
ಮುಟ್ಟಿನ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಯಿಂದಾಗಿ ಮಹಿಳೆಯರಲ್ಲಿ ಮನಸ್ಥಿತಿಯಲ್ಲಿ ಏರುಪೇರು (ಮೂಡ್ ಸ್ವಿಂಗ್ಸ್), ಕಿರಿಕಿರಿ ಮತ್ತು ಆತಂಕ ಉಂಟಾಗುವುದು ಸಾಮಾನ್ಯ. ಆದರೆ, ಅನೇಕ ಮಹಿಳೆಯರು ಈ ಮಾನಸಿಕ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಾಗೆಯೇ ಒಂಟಿತನ ಅನುಭವಿಸಲು ಪ್ರಾರಂಭಿಸುತ್ತಾರೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಮಾತನಾಡುವುದು ಅಥವಾ ಯಾವುದಾದರೂ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಈ ಸಮಯದಲ್ಲಿ ನಿಮ್ಮನ್ನು ಮಾನಸಿಕವಾಗಿ ಬಲಪಡಿಸುತ್ತದೆ.
ಒಟ್ಟಾರೆ, ಮುಟ್ಟಿನ ಸಮಯದಲ್ಲಿ ಮಹಿಳೆಯರು ವಿವಿಧ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದರೂ, ಅದನ್ನು ಬಹಳ ಎಚ್ಚರಿಕೆಯಿಂದ ನಡೆಸಬೇಕು. ಪಿರಿಯಡ್ಸ್ ಸಮಯದಲ್ಲಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಗಮನಹರಿಸುವುದು ಮುಖ್ಯವಾಗುತ್ತದೆ. ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಈ ಸಮಯವನ್ನು ಸುಲಭವಾಗಿ ನಿಭಾಯಿಸಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
