Latest Updates
-
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ?
ಕೊಲೆಸ್ಟ್ರಾಲ್ ಸಮಸ್ಯೆ ಇದೆಯೇ? ಈ 7 ಆಹಾರಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ
ಕೊಲೆಸ್ಟ್ರಾಲ್ 35 ವರ್ಷದ ದಾಟಿದ ಬಹುತೇಕರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ, ಈ ಸಮಸ್ಯೆಗೆ ಪ್ರಮುಖ ಕಾರಣ ಜೀವನಸೈಲಿ, ಆಹಾರ ಶೈಲಿ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗದಂತೆ ಜಾಗ್ರತೆವಹಿಸಬೇಕು, ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಗಟ್ಟಲು ಈ ಆಹಾರಗಳು ಸಹಕಾರಿಯಾಗಿದೆ.

ಪಾಲಾಕ್
ಪಾಲಾಕ್‌ನಲ್ಲಿ ಲುಟಿನ್, ಕಾರೋಟೆನೊಯ್ಡ್ ಅಂಶ ಅಧಿಕವಿರುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ. ಇದನ್ನು ಪ್ರತಿದಿನ ಬಳಸುವುದು ಒಳ್ಳೆಯದು.
ಬ್ರೊಕೋಲಿ
ಬ್ರೊಕೋಲಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿರುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದನ್ನು ಬೇಯಿಸಿ ತಿನ್ನಿ. ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಸ್ವಲ್ಪ ಬ್ರೊಕೋಲಿ ಬೇಯಿಸಿ ಪ್ರತಿದಿನ ತಿನ್ನುವುದು ಒಳ್ಳೆಯದು.
ಇದನ್ನು ಚಿಟಿಕೆಯಷ್ಟು ಉಪ್ಪು ಹಾಕಿ ಬೇಯಿಸಿ ತಿನ್ನಬಹುದು. ಒಂದು ಚಮಚ ಎಣ್ಣೆಯನ್ನು ಪಾತ್ರೆಗೆ ಹಾಕಿ ಬಿಸಿ ಮಾಡಿ, ಸ್ವಲ್ಪ ಕತ್ತರಿಸಿದ ಈರುಳ್ಳಿ ಹಾಕಿ ನಂತರ ಬ್ರೊಕೋಲಿ ಹಾಕಿ ನೀರು, ಸ್ವಲ್ಪ ಉಪ್ಪು ಹಾಕಿ ಬೇಯಿಸಿ ತಿಂದರೆ ತುಂಬಾನೇ ರುಚಿಯಾಗಿರುತ್ತದೆ. ಉಪ್ಪು ಸ್ವಲ್ಪವೇ ಸ್ವಲ್ಪ ಹಾಕಬೇಕು, ಇಲ್ಲದಿದ್ದರೆ ಉಪ್ಪುಪ್ಪು ಹೆಚ್ಚಾಗುವುದು.
ಕ್ಯಾರೆಟ್
ಇದರಲ್ಲಿ ನಾರಿನಂಶ ,ಪೆಕ್ಟಿನ್ ಇರುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ. ಇದನ್ನು ನೀವು ಬೇಕಿದ್ದರೆ ಹಸಿ ತಿನ್ನಬಹುದು, ಇಲ್ಲದಿದ್ದರೆ, ಸೂಪ್, ಅಡುಗೆಯಲ್ಲಿ ಬಳಸಬಹುದು.
ಸಿಹಿ ಗೆಣಸು
ಸಿಹಿ ಗೆಣಸು ಎಲ್ಲಾ ರೀತಿಯಲ್ಲೂ ಅತ್ಯುತ್ತಮವಾದ ಆಹಾರ, ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿದೆ, ಇದರಲ್ಲಿರುವ ಮೆಟಾದಂಥ ಆ್ಯಂಟಿಆಕ್ಸಿಡೆಂಟ್ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹಿಗಳು ಇದನ್ನು ಧೈರ್ಯವಾಗಿ ಇದನ್ನು ಸೇವಿಸಬಹುದು.
ಕ್ಯಾಬೇಜ್
ಕ್ಯಾಬೇಜ್‌ನಲ್ಲಿ ನೀರಿನಂಶ ಅತ್ಯಧಿಕವಿರಲಿದೆ, ಇದರ ಸೇವನೆಯಿಂದ ಉರಿಯೂತದಂಥ ಸಮಸ್ಯೆ ಕಡಿಮೆಯಾಗುವುದು, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
ಹಾಗಲಕಾಯಿ
ಹಾಗಾಲಕಾಯಿ ರಕ್ತವನ್ನು ಶುದ್ಧೀಕರಿಸಲು ಸಹಕಾರಿ ದಿನಾ ಹಾಗಲಕಾಯಿ ಜ್ಯೂಸ್ ಮಾಡಿ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿಡಲು ಸಹಕಾರಿ, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ, ಆರೋಗ್ಯಕರ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ.
ಕರಿಬೇವು
ದಿನಾ ಸ್ವಲ್ಪ ಕರಿಬೇವು ತಿನ್ನುವುದರಿಂದ ತೂಕ ನಿಯಂತ್ರಣಕ್ಕೆ ಸಹಕಾರಿ, ಮೈ ಬೊಜ್ಜು ಕರಗಿಸುತ್ತದೆ, ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ.
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಕಂಡು ಬರುವ ಅಪಾಯವೇನು?
ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುವುದು
ದೇಹದಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾದರೆ ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುವುದು. ಕೊಲೆಸ್ಟ್ರಾಲ್ ಸಮಸ್ಯೆ ಕಡೆಗೆ ಗಮನಹರಿಸದಿದ್ದರೆ ದಿನಗಳು ಕಳೆಯುತ್ತಿದ್ದಂತೆ ರಕ್ತ ನಾಳಗಳು ಕಿರಿದಾಗುತ್ತಾ ಹೋಗುವುದು , ಇದರಿಂದ ಹೃದಯ ಬ್ಲಾಕ್ ಆಗುವುದು, ಇದರಿಂದಾಗಿ ಎದೆನೋವು, ರಕ್ತ ಸಂಚಾರದಂಥ ನೋವು ಕಂಡು ಬರುವುದು.
ಪಾರ್ಶ್ವವಾಯು ಉಂಟಾಗುವುದು
ದೇಹದಲ್ಲಿಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಪಾರ್ಶ್ವವಾಯು ಉಂಟಾಗುವುದು. ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿ ಪಾರ್ಶ್ವವಾಯು ಉಂಟಾಗುವುದು.
ನರ ಸಂಬಂಧಿ ಸಮಸ್ಯೆ ಉಂಟಾಗುವುದು
ಕೊಲೆಸ್ಟ್ರಾಲ್ ಹೆಚ್ಚಾದರೆ ಕೈ ಕಾಲುಗಳಲ್ಲಿ ಸೆಳೆತ ಉಂಟಾಗುವುದು, ಮೈಕೈಯಲ್ಲಿ ನೋವು ಕಂಡು ಬರುವುದು.
ಮಧುಮೇಹದ ಸಮಸ್ಯೆ ಉಂಟಾಗುವುದು
ಈ ಕೊಲೆಸ್ಟ್ರಾಲ್ ಸಮಸ್ಯೆ ಬಂದರೆ ಮಧುಮೇಹದ ಸಮಸ್ಯೆ ಕೂಡ ಉಂಟಾಗುವುದು, ಮಧುಮೇಹ ಬಂದ ಮೇಲೆ ಅನೇಕ ರೀತಿಯ ಆರೋಗ್ಯ ಸಮಸ್ಯೆ ಉಂಟಾಗುವುದು. ಹಾಗಾಗಿ ಕೊಲೆಸ್ಟ್ರಾಲ್ ಸಮಸ್ಯೆ ಉಂಟಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications