Latest Updates
-
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ!
ಗರ್ಭಕಂಠದ ಕ್ಯಾನ್ಸರ್‌ನಿಂದ ನಟಿ ಪೂನಂ ಪಾಂಡೆ ನಿಧನ..! ಏನಿದು ಗರ್ಭಕಂಠದ ಕ್ಯಾನ್ಸರ್..?
ಬಾಲಿವುಡ್ ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ಶುಕ್ರವಾರ ನಿಧನರಾದರು ಎಂದು ಅವರ ಮ್ಯಾನೇಜರ್ ಆಕೆಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದಾರೆ. 32 ವರ್ಷದ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ಗೆ ಒಳಗಾಗಿದ್ದರು ಎಂದು ಮ್ಯಾನೇಜರ್ ತಿಳಿಸಿದ್ದಾರೆ.
ಇತ್ತೀಚಿಗೆ ಈ ರೀತಿ ಕ್ಯಾನ್ಸರ್‌ಗೆ ತುತ್ತಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಯುವ ಸಮುದಾಯದಲ್ಲಿ ಈ ಸಂಖ್ಯೆಯ ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಹಾಗಾದರೆ ಏನಿದು ಗರ್ಭಕಂಠದ ಕ್ಯಾನ್ಸರ್, ಈ ಕ್ಯಾನ್ಸರ್‌ಗೆ ಕಾರಣವೇನು? ಈ ಕ್ಯಾನ್ಸರ್ ಕಂಡುಬರಲು ಪ್ರಮುಖ ಕಾರಣವಾದರೂ ಏನು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ಗರ್ಭಾಶಯ ಮತ್ತು ಯೋನಿಯನ್ನು ಸಂಪರ್ಕಿಸುವ ಗರ್ಭಕಂಠದಲ್ಲಿ ಜೀವಕೋಶಗಳಲ್ಲಿ ಬದಲಾವಣೆಯಾದಾಗ ಗರ್ಭಕಂಠದ ಕ್ಯಾನ್ಸರ್ ಉಂಟಾಗುವುದು. ಇದನ್ನು ಪ್ರಾರಂಭದಲ್ಲಿಯೇ ಗುರುತಿಸಿದರೆ ಗುಣಪಡಿಸಬಹುದು, ಆದರೆ ದುರಾದೃಷ್ಟವಶಾತ್ ಹೆಚ್ಚಿನವರಿಗೆ ಪ್ರಾರಂಭದಲ್ಲಿ ಇದರ ಲಕ್ಷಣಗಳು ತಿಳಿಯುವುದೇ ಇಲ್ಲ, ಹೀಗಾಗಿ ಜೀವಕ್ಕೆ ಅಪಾಯ ಉಂಟಾಗುವುದು.

ಹೆಚ್‌ಐವಿ ಇರುವ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್‌ನ ಅಪಾಯ ಹೆಚ್ಚು ಅಲ್ಲದೆ ಕೆಲವೊಂದು ಜೀವನಶೈಲಿ ಕೂಡ ಗರ್ಭಕಂಠದ ಕ್ಯಾನ್ಸರ್ ಅಪಾಯ ಹೆಚ್ಚಿಸುತ್ತದ. ಬೇಗನೆ ಋತುಮತಿಯಾಗುವುದು, ಧೂಮಪಾನ, ಗರ್ಭನಿರೋಧಕ ಮಾತ್ರೆಗಳು, ಮೆನೋಪಾಸ್ ನಿಧಾನವಾಗುವುದು, ಒಂದಕ್ಕಿಂತ ಹೆಚ್ಚಿನವರ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ಭಾಗಿಯಾಗುವುದು ಇವೆಲ್ಲಾ ಗರ್ಭಕಂಠದ ಕ್ಯಾನ್ಸರ್ ಅಪಾಯ ಹೆಚ್ಚಿಸುವುದು.
ಆಹಾರಶೈಲಿ ಕೂಡ ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗಬಹುದು. ಒಬೆಸಿಟಿ ಇರುವ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಬೆಳೆಯಬಹುದು ಯಾರು ಹಣ್ಣು ಮತ್ತು ತರಕಾರಿಗಳನ್ನು ಕಡಿಮೆ ತಿನ್ನುತ್ತಾರೋ ಅವರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡು ಬರುವ ಸಾಧ್ಯತೆ ಹೆಚ್ಚು.
ಗರ್ಭ ಕಂಠದ ಕ್ಯಾನ್ಸರ್ ಲಕ್ಷಣಗಳೇನು?
ಮುಟ್ಟಿನ ನಂತರ ಕೂಡ ಆಗಾಗ ಸ್ವಲ್ಪ ರಕ್ತ ಕಲೆ ಕಂಡು ಬರುವುದು, ಲೈಂಗಿಕ ಕ್ರಿಯೆ ಬಳಿಕ ರಕ್ತಸ್ರಾವ, ಬಿಳುಪು ಹೋಗುವುದು ಹೆಚ್ಚುವುದು, ಲೈಂಗಿಕ ಕ್ರಿಯೆ ವೇಳೆ ನೋವಾಗುವುದು, ಮೆನೋಪಾಸ್ ಆದ ಬಳಿಕ ಕೂಡ ರಕ್ತಸ್ರಾವವಾಗುವುದು, ಜನನೇಂದ್ರೀಯ ಭಾಗದಲ್ಲಿ ತುರಿಕೆ ಕಂಡು ಬರುವುದು, ತಲೆಸುತ್ತು, ಆಗಾಗ ಮೂತ್ರ ವಿಸರ್ಜನೆ, ಕೆಳಹೊಟ್ಟು ಉಬ್ಬುವುದು ಇವೆಲ್ಲಾ ಗರ್ಭಕಂಠ ಕ್ಯಾನ್ಸರ್ ಲಕ್ಷಣಗಳಾಗಿವೆ.
ಪದೇ ಪದೇ ಮೂತ್ರ ವಿಸರ್ಜನೆ
ನಿಮಗೆ ಸಾಮಾನ್ಯಕ್ಕಿಂತಲೂ ಪದೇ ಪದೇ ಮೂತ್ರ ವಿಸರ್ಜನೆ ಆಗುತ್ತಲಿದ್ದರೆ ಆಗ ಇದು ಗರ್ಭಕಂಠದ ಕ್ಯಾನ್ಸರ್ ಲಕ್ಷಣವಾಗಿ ಇರಲೂಬಹುದು. ಪದೇ ಪದೇ ಮೂತ್ರ ವಿಸರ್ಜನೆ ಮಾಡುವಂತೆ ನಿಮಗೆ ಒಂದು ವಾರ ಕಾಲ ಆದರೆ ಆಗ ನೀವು ಪರೀಕ್ಷೆ ಮಾಡಿಸಿಕೊಳ್ಳಬೇಕು.
ದೀರ್ಘ ಸಮಯ ಮತ್ತು ಅತಿಯಾದ ಋತುಚಕ್ರ
ಋತುಚಕ್ರವು 508 ದಿನಗಳ ತನಕ ಹೋಗುವುದು ಮತ್ತು ಇದು ಅದಕ್ಕಿಂತಲೂ ಹೆಚ್ಚು ಸಮಯ ತನಕ ಹೋಗಬಹುದು. ಇದು ಗರ್ಭಕಂಠದ ಕ್ಯಾನ್ಸರ್ ನ ಪ್ರಮುಖ ಲಕ್ಷಣಗಳಲ್ಲಿ ಒಂದಾಗಿದೆ. ಇದರ ಹೊರತಾಗಿ ಸಾಮಾನ್ಯಕ್ಕಿಂತ ಹೆಚ್ಚಿನ ರಕ್ತಸ್ರಾವವಾಗುತ್ತಲಿದ್ದರೆ, ಗಂಟೆಗೊಂದು ಸ್ಯಾನಿಟರಿ ಪ್ಯಾಡ್ ಬದಲಾಯಿಸಿಕೊಳ್ಳುತ್ತಿದ್ದರೆ ಆಗ ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ವೈದ್ಯರನ್ನು ಭೇಟಿ ಮಾಡಿ, ಅವರಿಗೆ ನಿಮ್ಮ ಸಮಸ್ಯೆ ಬಗ್ಗೆ ಸರಿಯಾಗಿ ತಿಳಿಸಿ.
ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವುದು ಹೇಗೆ?
- ಲಸಿಕೆ ಪಡೆಯುವುದು: ಸಿಡಿಸಿ ಮಹಿಳೆಯರು ಗರ್ಭಕಂಠ ಕ್ಯಾನ್ಸರ್ ನಿಯಂತ್ರಣಕ್ಕೆ ಲಸಿಕೆ ಪಡೆಯುವುದು ಒಳ್ಳೆಯದೆಂದು ಸಲಹೆ ನೀಡಿದೆ.
- ಧೂಮಪಾನ ವರ್ಜಿಸಿ: ಧೂಮಪಾನದ ಅಭ್ಯಾಸವಿದ್ದರೆ ಅದನ್ನು ಬಿಡುವುದರಿಂದ ದೇಹದಲ್ಲಿ ರೋಗ ನಿರೊಧಕ ಶಕ್ತಿ ಹೆಚ್ಚುವುದು.
- ಪ್ರತಿದಿನ ವ್ಯಾಯಾಮ ಮಾಡಿ: ಪ್ರತಿದಿನ ವ್ಯಾಯಾಮ ಮಾಡುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದು, ರೋಗ ನಿರೋಧಕ ಶಕ್ತಿ ಚೆನ್ನಾಗಿರುತ್ತದೆ.
- ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳಬೇಡಿ: ಗರ್ಭನಿರೋಧಕ ಮಾತ್ರೆಗಳಿಂದ ಗರ್ಭಕಂಠದ ಕ್ಯಾನ್ಸರ್ ಅಪಾಯವಿರುವುದರಿಂದ ಮಾತ್ರೆ ಬದಲಿಗೆ ಇತರ ಗರ್ಭನಿರೋಧಕ ಮಾತ್ರೆಗಳನ್ನು ಬಳಸಿ.
- ಒಂದಕ್ಕಿಂತ ಹೆಚ್ಚು ಜನರೊಂದಿಗೆ ಲೈಂಗಿಕ ಸಂಪರ್ಕ ಅಪಾಯಕಾರಿ
- ನಿಯಮಿತ ಪರೀಕ್ಷೆ ಮಾಡಿಸಿ.
- ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ.
9-14 ಪ್ರಾಯದಹೆಣ್ಮಕ್ಕಳಿಗೆ HPV ಲಸಿಕೆ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಬಜೆಟ್‌ನಲ್ಲಿ ಮಹತ್ವದ ಹೆಜ್ಜೆ
ಚಿಕಿತ್ಸೆಯೇನು?
ಗರ್ಭಕಂಠದ ಕ್ಯಾನ್ಸರ್ ಆರಂಭದ ಹಂತದಲ್ಲಿ ಪತ್ತೆಯಾದರೆ ಬೇಗನೆ ಗುಣಪಡಿಸಬಹುದು, ಆದರೆ ಕ್ಯಾನ್ಸರ್ 2ನೇ ಅಥವಾ 3ನೇ ಹಂತಕ್ಕೆ ಹೋದರೆ ಕೀಮೋ ಥೆರಪಿ ಅಥವಾ ರೇಡಿಯೋ ಥೆರಪಿ ಮಾಡಿಸಬೇಕಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

