Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Mpoxಗೆ ಬೆಂಗಳೂರಲ್ಲಿ ಕಟ್ಟೆಚ್ಚರ: ಪಾಸಿಟಿವ್ ಬಂದರೆ 21 ದಿನ ಕ್ವಾರಂಟೈನ್.!
ಆಫ್ರಿಕಾದಲ್ಲಿ ಮಾತ್ರ ಕೇಳಿಬರುತ್ತಿದ್ದ ಮಂಕಿಪಾಕ್ಸ್ ಪ್ರಕರಣಗಳು ಭಾರತದಲ್ಲು ವರದಿಯಾಗಲು ಆರಂಭಿಸಿವೆ. ಹೀಗಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಇದರ ಅಂಗವಾಗಿಯೇ ಬೆಂಗಳೂರಿನಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸಲಾಗಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹಲವು ನಿಯಮ ಜಾರಿಯಾಗಿದೆ.
ಈಗಾಗಲೇ ಬೆಂಗಳೂರಿನ ಯುವಕನೊಬ್ಬ ಕೇರಳದಲ್ಲಿ ನಿಪಾ ವೈರಸ್‌ನಿಂದ ಮೃತಪಟ್ಟಿದ್ದಾನೆ. ಹಾಗೆ ಆತ ಸುಮಾರು 150ಕ್ಕೂ ಹೆಚ್ಚು ಜನರ ಸಂಪರ್ಕಕ್ಕೆ ಬಂದಿದ್ದ ಎಂಬ ಮಾಹಿತಿ ಆಧಾರದಲ್ಲಿ ಸಂಪರ್ಕಿತರ ಮಾಹಿತಿ ಸಂಗ್ರಹವೂ ನಡೆದಿದೆ. ಈಗ Mpox ಸಹ ಆತಂಕ ಹುಟ್ಟಿಸಿದೆ. ಹೀಗಾಗಿ ಬೆಂಗಳೂರು ವಿಮಾನ ನಿಲ್ದಾಣವು ನಾಲ್ಕು Mpox ಸ್ಕ್ರೀನಿಂಗ್ ಸ್ಟೇಷನ್‌ಗಳನ್ನು ತೆರೆದಿದೆ.

ಅಲ್ಲಿ ಅಧಿಕಾರಿಗಳು ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರ ತಾಪಮಾನ ಮತ್ತು ಇತರ ರೋಗಲಕ್ಷಣಗಳಿಗಾಗಿ ಪರಿಶೀಲಿಸಲಿದ್ದು, ಒಂದು ವೇಳೆ ಪಾಸಿಟಿವ್ ಕಂಡುಬಂದರೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಜಾರಿಗೆ ತಂದ ಪ್ರೋಟೋಕಾಲ್‌ಗಳಂತೆಯೇ 21 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ವಕ್ತಾರರು, ವಿಮಾನ ನಿಲ್ದಾಣದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ನಾವು ಅನುಸರಿಸುತ್ತೇವೆ ಎಂದಿದ್ದಾರೆ. ಇದಕ್ಕಾಗಿಯೇ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಸ್ಕ್ರೀನಿಂಗ್ ಪ್ರಕ್ರಿಯೆಗೆ ಒಳಪಡಿಸಲಾಗುವುದು, ಯಾರಲ್ಲಾದರು ಅಧಿಕ ತಾಪಮಾನ ಕಂಡುಬಂದರೆ ನಿಗಾ ವಹಿಸುತ್ತೇವೆ ಎಂದಿದ್ದಾರೆ.
ಭಾರತದಲ್ಲಿ ಈವರೆಗೆ ಒಂದು ಮಂಕಿಪಾಕ್ಸ್ ಪ್ರಕರಣ ದೃಢವಾಗಿದೆ. ಆದರೆ ಇದು ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿರುವ ಅಪಾಯಕಾರಿ ರೂಪಾಂತರವಾಗಿಲ್ಲ. ಬದಲಿಗೆ ಸಾಮಾನ್ಯ ರೂಪಾಂತರವಾಗಿದ್ದು ಅಪಾಯ ಕಡಿಮೆ ಎಮದು ತಿಳಿದುಬಂದಿದೆ. ಇನ್ನು ಹೆಚ್ಚಿನ ಅಪಾಯಕಾರಿ ರೂಪಾಂತರ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಆಫ್ರಿಕಾ ಮೊದಲ ಸ್ಥಾನದಲ್ಲಿದ್ದು ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಶೀಲನೆ ಜೊತೆ ವಿಶೇಷ ನಿಗಾ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 14 ರಂದು, ವಿಶ್ವ ಆರೋಗ್ಯ ಸಂಸ್ಥೆ (WHO) Mpox ಅನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ಈಗ ಈ ಮಂಕಿಪಾಕ್ಸ್ ವಿಶ್ವದ ಹಲವು ದೇಶಗಳಲ್ಲಿ ವ್ಯಾಪಿಸಿದೆ. ಇತ್ತೀಚಿಗೆ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಂಪಾಕ್ಸ್ ಶಂಕಿತ ಪ್ರಕರಣ ವರದಿಯಾಗಿತ್ತು. ಜೆಡ್ಡಾದಿಂದ ಆಗಮಿಸಿದ್ದ ಓರ್ವ ಪ್ರಯಾಣಿಕರಲ್ಲಿ ಈ ಮಂಕಿಪಾಕ್ಸ್‌ನ ರೋಗ ಲಕ್ಷಣ ಹೊಂದಿರುವುದು ಕಂಡುಬಂದಿದೆ.
ಡಿಆರ್‌ಸಿಯಲ್ಲಿ (ಡೆಮೋಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ) ಇತ್ತೀಚೆಗೆ 450 ಜನರು ಮಂಕಿಪಾಕ್ಸ್‌ಗೆ ಬಲಿಯಾಗಿದ್ದಾರೆ. ತಜ್ಞರ ಪ್ರಕಾರ ಈ ಮಂಕಿಪಾಕ್ಸ್ ವೇಗವಾಗಿ ಹರಡುತ್ತಿಲ್ಲ, ಆದರೆ ಈ ಕಾಯಿಲೆ ಭಯಾನಕವಾಗಿದೆ. ಹಾಗಾಗಿ ಈ ಕಾಯಿಲೆ ಬಗ್ಗೆ ನಿರ್ಲಕ್ಷ್ಯ ಬೇಡ, ಇದರ ಬಗ್ಗೆ ಜಾಗತಿಕ ಮಟ್ಟದಲ್ಲಿ ಕಟ್ಟೆಚ್ಚರವಹಿಸಬೇಕಾಗಿದೆ.
Mpox ಒಂದು ವೈರಲ್ ರೋಗ. ಮೂಲತಃ ಪ್ರೈಮೇಟ್‌ಗಳಲ್ಲಿ ಗುರುತಿಸಲಾಗಿದೆ, ಇದು ಸೋಂಕಿತ ಪ್ರಾಣಿಗಳ ನೇರ ಸಂಪರ್ಕದ ಮೂಲಕ ಅಥವಾ ದೈಹಿಕ ದ್ರವಗಳು, ಉಸಿರಾಟದ ಹನಿಗಳು ಅಥವಾ ಕಲುಷಿತ ವಸ್ತುಗಳೊಂದಿಗೆ ವ್ಯಕ್ತಿಯಿಂದ ವ್ಯಕ್ತಿಗೆ ಸಂಪರ್ಕದ ಮೂಲಕ ಮನುಷ್ಯರಿಗೆ ಹರಡುತ್ತದೆ ಎಂದು ತಿಳಿದುಬಂದಿದೆ.
ಮಂಕಿಪಾಕ್ಸ್ ತಗುಲಿದರೆ ಅಂತಹ ವ್ಯಕ್ತಿಗಳಲ್ಲಿ ತೀವ್ರ ಜ್ವರ, ದದ್ದು ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳು, ತಲೆ ನೋವು, ಮೈ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುವುದು ಸೇರಿ ಇತರೆ ಲಕ್ಷಣಗಳು ಕಂಡುಬರಲಿದೆ. ಮಂಕಿಪಾಕ್ಸ್ ವಿಶ್ವದ 17 ದೇಶದಲ್ಲಿ ತನ್ನ ಅಪಾಯ ಹೆಚ್ಚಿಸಿಕೊಂಡಿದೆ. 2024ರಲ್ಲಿ 16 ಸಾವಿರಕ್ಕೂ ಅಧಿಕ ಪ್ರಕರಣ ದೃಢವಾಗಿದ್ದು 570ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ವರದಿಗಳು ಹೇಳುತ್ತವೆ, ಇದರಲ್ಲಿ ಆಫ್ರಿಕನ್ ದೇಶಗಳಲ್ಲಿಯೇ ಸಾವು ಹೆಚ್ಚಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
