Latest Updates
-
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ!
ಈ ಜ್ಯೂಸ್ ಕುಡಿದರೆ ಸಾಕು! ಮುಖದ ಸುಕ್ಕು, ಕಲೆಗಳು ಮಾಯ.. ಸ್ಕಿನ್ ಲಕ ಲಕ ಹೊಳೆಯುತ್ತೆ
ಪ್ರತಿದಿನ ಆಮ್ಲಾ ಜ್ಯೂಸ್ ಕುಡಿಯಿರಿ.. ಮುಖದ ಸುಕ್ಕುಗಳು ಮತ್ತು ಕಲೆಗಳಿಗೆ ಬೈಬೈ ಹೇಳಿ. ನಿಮ್ಮ ಚರ್ಮ ವಯಸ್ಸಾದಂತೆ ಕಾಣೋದಿಲ್ಲ. ಹೌದು, ಆಮ್ಲಾ ಅಥವಾ ನೆಲ್ಲಿಕಾಯಿಯನ್ನು (Amla) ಆಯುರ್ವೇದದಲ್ಲಿ ಅಮೃತಫಲ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಹೇರಳವಾಗಿದ್ದು, ನಮ್ಮ ದೇಹ, ಚರ್ಮ ಮತ್ತು ಕೂದಲಿಗೆ ಅತ್ಯಂತ ಪ್ರಯೋಜನಕಾರಿ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಚರ್ಮ ಮತ್ತು ಕೂದಲಿನ ಸೌಂದರ್ಯ ಕಾಪಾಡಿಕೊಳ್ಳಬಹುದು.
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ರೋಗಗಳಿಂದ ಮುಕ್ತವಾಗಿರಲು ಸಹಾಯ ಮಾಡುತ್ತದೆ. ಪ್ರತಿದಿನ ಅಥವಾ ನಿಯಮಿತವಾಗಿ ನೆಲ್ಲಿಕಾಯಿ ಜ್ಯೂಸ್ (Amla Juice) ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಜೊತೆಗೆ ಜೀರ್ಣಕ್ರಿಯೆ ಸುಧಾರಿಸುತ್ತದೆ.

ನೆಲ್ಲಿಕಾಯಿ ಜ್ಯೂಸ್ ಕೂದಲು ಮತ್ತು ಚರ್ಮಕ್ಕೆ ಅತ್ಯಂತ ಪ್ರಯೋಜನಕಾರಿ. ನೆಲ್ಲಿಕಾಯಿನಲ್ಲಿರುವ ವಿಟಮಿನ್ ಸಿ ಚರ್ಮವನ್ನು ಆಂತರಿಕವಾಗಿ ಗುಣಪಡಿಸಿ ಹೊಳಪನ್ನು ನೀಡುತ್ತದೆ. ಇದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಿ, ಕೂದಲನ್ನು ದಪ್ಪ ಮತ್ತು ಹೊಳೆಯುವಂತೆ ಮಾಡುತ್ತದೆ. ನೆಲ್ಲಿಕಾಯಿ ಜ್ಯೂಸ್ ಸೇವನೆಯ ಕೆಲವು ಪ್ರಯೋಜನಗಳನ್ನು (Amla Juice Benefits) ಈ ಲೇಖನದಲ್ಲಿ ತಿಳಿಸಲಾಗಿದೆ.
ನೆಲ್ಲಿಕಾಯಿ ಏಕೆ ವಿಶೇಷ?
• ಆಯುರ್ವೇದದಲ್ಲಿ ಅಮೃತಫಲ ಎಂದು ಕರೆಯಲಾಗುತ್ತದೆ
• ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧ
• ದೇಹ, ಚರ್ಮ ಮತ್ತು ಕೂದಲಿಗೆ ಸಮಗ್ರ ಪ್ರಯೋಜನ
ನೆಲ್ಲಿಕಾಯಿ ಜ್ಯೂಸ್‌ನ ಪ್ರಯೋಜನಗಳು
ರೋಗನಿರೋಧಕ ಶಕ್ತಿ ಹೆಚ್ಚಳ
ನೆಲ್ಲಿಕಾಯಿನಲ್ಲಿರುವ ಉತ್ಕರ್ಷಣ ನಿರೋಧಕಗಳು ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದು ಯಾವುದೇ ರೀತಿಯ ಸೋಂಕು ಮತ್ತು ಕಾಲೋಚಿತ ಕಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ. ನೆಲ್ಲಿಕಾಯಿ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಮಲಬದ್ಧತೆ, ಗ್ಯಾಸ್ ಪ್ರಬ್ಲಂ ದೂರ
ನೆಲ್ಲಿಕಾಯಿ ಜ್ಯೂಸ್ (ಆಮ್ಲಾ ರಸ) ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ನೆಲ್ಲಿಕಾಯಿ ಅಲ್ಲಿ ನಾರಿನಂಶ ಸಮೃದ್ಧವಾಗಿದ್ದು, ಮಲಬದ್ಧತೆ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಂಡು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ.
ಸುಕ್ಕುಗಳು ಮಾಯ
ನೆಲ್ಲಿಕಾಯಿನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಮುಖದ ಕಲೆಗಳು ಮತ್ತು ಸುಕ್ಕುಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ. ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಅನ್ನು ಕುಡಿಯುವುದರಿಂದ ಚರ್ಮದ ಹೊಳಪು ಹೆಚ್ಚುತ್ತದೆ. ಇದರಿಂದ ನಮ್ಮ ಚರ್ಮವು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಕಾಣುತ್ತದೆ.
ತಲೆಹೊಟ್ಟು ಕಡಿಮೆ ಮಾಡುತ್ತೆ
ನೆಲ್ಲಿಕಾಯಿ ಜ್ಯೂಸ್ ಅನ್ನು ಕುಡಿಯುವುದರಿಂದ ನಮ್ಮ ದೇಹದ ಜೊತೆಗೆ ಕೂದಲಿನ ಆರೋಗ್ಯವೂ ಸುಧಾರಿಸುತ್ತದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ನಿರ್ಜೀವ ಮತ್ತು ಒಣ ಕೂದಲು ಸಹ ಆರೋಗ್ಯಕರವಾಗಿ ಮತ್ತು ಹೊಳೆಯುತ್ತದೆ. ಇದು ಕೂದಲನ್ನು ಬುಡದಿಂದ ಬಲಪಡಿಸುತ್ತದೆ. ತಲೆಹೊಟ್ಟು ಕಡಿಮೆ ಮಾಡುತ್ತದೆ ಮತ್ತು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ.
ಫಿಟ್‌ನೆಸ್ ಪ್ರಿಯರಿಗೆ ಅತ್ಯುತ್ತಮ
ತೂಕ ಇಳಿಸಿಕೊಳ್ಳಲು ಬಯಸುವವರು ನೆಲ್ಲಿಕಾಯಿ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯಬೇಕು. ನೆಲ್ಲಿಕಾಯಿ ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅಥವಾ ಫಿಟ್‌ನೆಸ್ ಪ್ರಿಯರಿಗೆ ಇದು ಅತ್ಯುತ್ತಮವಾಗಿದೆ.
ಶುಗರ್ ಕಂಟ್ರೋಲ್‌ಗೆ ಸಹಕಾರಿ
ಶುಗರ್ ಅಥವಾ ಮಧುಮೇಹ ರೋಗಿಗಳಿಗೆ ನೆಲ್ಲಿಕಾಯಿ ಜ್ಯೂಸ್ ಅಮೃತದಂತೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಶುಗರ್ ಲೆವೆಲ್ (ಸಕ್ಕರೆ ಮಟ್ಟ) ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಒಟ್ಟಾರೆಯಾಗಿ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದು ಒಳ್ಳೆಯದು. ಇದರಿಂದ ದೇಹ, ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

