Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಭಾರತೀಯ ಮಹಿಳೆಯರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಲು ಪ್ರಮುಖ ಕಾರಣಗಳಿವು ಎಂತಾರೆ ವೈದ್ಯರು
ಮಹಿಳೆಯರು ಮನೆ ಜವಾಬ್ದಾರಿ , ಕೆಲಸ ಅಂತೆಲ್ಲಾ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದನ್ನು ಮರೆತು ಬಿಡುತ್ತಾರೆ, ಇನ್ನು ಕೆಲ ಮಹಿಳೆಯರು ತಿಳುವಳಿಕೆಯ ಕೊರತೆಯಿಂದಾಗಿ ಕೂಡ ಆರೋಗ್ಯದ ಸಮಸ್ಯೆ ಉಂಟಾಗುವುದು, ಮಹಿಳೆಯರು ತಮ್ಮ ಆರೋಗ್ಯಕ್ಕಾಗಿ ಯಾವೆಲ್ಲಾ ಅಂಶಗಳ ಕಡೆ ಗಮನಹರಿಸಬೇಕೆಂದು ಎಂದು ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಅಪರ್ಣ ಪಾಟೀಲ್ ವಿವರಿಸಿದ್ದಾರೆ ನೋಡಿ:

ಆರೋಗ್ಯ ಸಮಸ್ಯೆ ಸಂತಾನೋತ್ಪತ್ತಿ ಸಾಮರ್ಥ್ಯ ಕುಗ್ಗಿಸುತ್ತಿದೆ
ಮಹಿಳೆಯರಲ್ಲಿ ಎದುರಾಗುವ ಅನಾರೋಗ್ಯ ಅನೇಕ ರೀತಿಯ ಸಮಸ್ಯೆಗಳಿಗೆ ದಾರಿಮಾಡಿಕೊಡುತ್ತವೆ. ಈ ರೀತಿಯ ಆರೋಗ್ಯದ ತೊಂದರೆಗಳಿಂದಾಗಿ ಕಡಿಮೆ ತೂಕದ ಶಿಶುಗಳ ಜನನಕ್ಕೆ ಕಾರಣವಾಗುತ್ತದೆ.ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಆರೋಗ್ಯದ ಬಗೆಗೆ ಹೆಚ್ಚಿನ ನಿಗಾವಹಿಸುವ ಅಗತ್ಯತೆಯಿದ್ದು, ಸಂತಾನೋತ್ಪತ್ತಿ, ಪೌಷ್ಟಿಕಾಂಶದ ಸ್ಥಿತಿ, ಹೆಚ್‌ಐವಿ ಮತ್ತು ಲೈಂಗಿಕವಾಗಿ ಹರಡುವ ಸೋಂಕುಗಳು, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಾನಸಿಕ ಆರೋಗ್ಯದ ಬಗೆಗೆ ಆದ್ಯತೆ ನೀಡುವುದು ಮುಖ್ಯವಾಗಿದೆ.
ಸ್ತನ, ಗರ್ಭಕೋಶ ಮತ್ತು ಅಂಡಾಶಯದ ಕ್ಯಾನ್ಸರ್‌ಗಳು ಜಾಗತಿಕವಾಗಿ ಮಹಿಳೆಯರ ಸಾವಿಗೆ ಕಾರಣವಾಗಿವೆ. ಹಾಗಾಗಿ 40 ವರ್ಷ ಮೇಲ್ಪಟ್ಟ ಮಹಿಳೆಯರು ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು, ಇದರಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಪ್ರಾರಂಭದಲ್ಲಿಯೇ ಗುರುತಿಸಿ ಆರೋಗ್ಯ ರಕ್ಷಣೆ ಮಾಡಲು ಸಾಧ್ಯವಾಗುವುದು.
ಅತಿ ಹೆಚ್ಚು ಸ್ತ್ರೀಯರಲ್ಲಿ ಕಂಡು ಬರುತ್ತಿರುವ ಲಕ್ಷಣಗಳಿವು
ಸ್ತೀರೋಗ ಸಮಸ್ಯೆಗಳಾದ ಅನಿಯಮಿತ ಋತುಸ್ರಾವ, ಭಾರೀ ರಕ್ತಸ್ರಾವ, ಸೆಳೆತ ಮತ್ತು ಆಯಾಸ, ಗರ್ಭಾಶಯದ ಫೈಬ್ರಾಯ್ಡ್‌ಗಳು, ಪಿಸಿಒಡಿ ಮತ್ತು ಎಂಡೊಮೆಟ್ರಿಯೊಸಿಸ್‌ನಂತಹ ಸಮಸ್ಯೆಗಳು ಕಂಡು ಬರುತ್ತಿದೆ. ಈ ರೋಗಗಳ ಬಗ್ಗೆ ಮಹಿಳೆಯರಿಗೆ ಅರಿವು ಇದ್ದರೆ ಪ್ರಾರಂಭದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬಹುದು.
ಪ್ರಸವ ನಂತರ ಮಹಿಳೆಯರ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು
ಪ್ರಸವದ ನಂತರ ಮಹಿಳೆಯರಲ್ಲಿ ಖಿನ್ನತೆ, ಮುಂತಾದ ಆರೋಗ್ಯ ಸಮಸ್ಯೆ ಕಂಡು ಬರುವುದು, ಆದ್ದರಿಂದ ಮಹಿಳೆಯರು ಹೆರಿಗೆಯ ಬಳಿಕ ತಮ್ಮ ಆಹಾರಕ್ರಮದ ಕಡೆಗೆ ತುಂಬಾನೇ ಗಮನಹರಿಸಬೇಕು. ಪ್ರಸವದ ನಂತರದ ರಕ್ತಸ್ರಾವ, ಸೋಂಕುಗಳು ಈ ರೀತಿಯ ಸಮಸ್ಯೆ ಕಂಡು ಬರುವುದು. ಈ ಗೆಯ ಸಮಸ್ಯೆ ನಿರ್ಲಕ್ಷ್ಯ ಮಾಡಲು ಹೋಗಬಾರದು.
ಭಾರತೀಯ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು
ಪೌಷ್ಟಿಕಾಂಶ ಸಮಸ್ಯೆಗಳು, ರಕ್ತಹೀನತೆ ಮತ್ತು ಕಡಿಮೆ ಹಿಮೋಗ್ಲೋಬಿನ್ ಈ ಬಗೆಯ ಸಮಸ್ಯೆಗಳು ಬಾರತೀಯ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುವುದು. ಕಬ್ಬಿಣ, ಬಿ 12 ಮತ್ತು ಫೋಲಿಕ್ ಆಮ್ಲದ ಸಾಕಷ್ಟು ಪೂರೈಕೆಯಿಂದ ಈ ಬಗೆಯ ಸಮಸ್ಯೆಗಳನ್ನು ನಿಯಂತ್ರಿಸಬಹುದು. ಗರ್ಭಾವಸ್ಥೆಯಲ್ಲಿ ಮತ್ತು ಪ್ರಸವದ ನಂತರದ ಅವಧಿಯಲ್ಲಿ ಮಹಿಳೆಯರು ಹೆಚ್ಚು ಮಾನಸಿಕ ಅಸ್ವಸ್ಥತೆಗಳಿಗೆ ಒಳಗಾಗುತ್ತಾರೆ, ಖಿನ್ನತೆಯು ಅವರನ್ನು ಹೆಚ್ಚು ಬಾಧಿಸುತ್ತದೆ. ಬೈಪೋಲಾರ್ ಡಿಸಾರ್ಡರ್ ಮತ್ತು ಸ್ಕಿಜೋಫ್ರೇನಿಯಾವು ಪುರುಷರಿಗಿಂತ ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆದ್ದರಿಂದೀ ಬಗೆಯೆಲ್ಲಾ ಜಾಗ್ರತೆವಹಿಸಬೇಕು.
ಲೈಂಗಿಕ ಸೋಂಕುಗಳ ಬಗ್ಗೆ ಜಾಗ್ರತೆವಹಿಸಬೇಕು
ಕ್ಲಮೈಡಿಯ, ಗೊನೊರಿಯಾ, ಸಿಫಿಲಿಸ್, ಎಚ್ಐವಿ ಮತ್ತು ಹೆಚ್‌ಪಿವಿ ಈ ಬಗೆಯ ಸೋಂಕುಗಳು ಹರಡದಂತೆ ಮಹಿಳೆಯರು ಜಾಗ್ರತೆವಹಿಸಿ.
ಮಹಿಳೆ ಮೇಲಿನ ದೌರ್ಜನ್ಯ ಕೂಡ ಅವಳ ಆರೋಗ್ಯದ ಮೇಲೆ ಪರಿಣಾಮ ಬೀರುವುದು
ಮಹಿಳೆಯರ ವಿರುದ್ಧದ ಹಿಂಸಾಚಾರವು ಸಾರ್ವಜನಿಕ ಆರೋಗ್ಯದ ಪ್ರಮುಖ ಕಾಳಜಿಯಾಗಿದೆ. ಮಹಿಳೆಯರು ದೌರ್ಜನ್ಯಕ್ಕೊಳಗಾಗುವ ಸಾಧ್ಯತೆ ಆರು ಪಟ್ಟು ಹೆಚ್ಚು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುವ ಸಾಧ್ಯತೆ ಹತ್ತು ಪಟ್ಟು ಹೆಚ್ಚಿರುತ್ತದೆ. ಹಿಂಸಾಚಾರವು ಅಲ್ಪಾವಧಿಯ ಹಾಗೂ ದೀರ್ಘಾವಧಿ ಆಗಿರಬಹುದು, ಆದರೆ ಈ ದೌರ್ಜನ್ಯ ಅವಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅವಳನ್ನು ಆ ದೌರ್ಜನ್ಯದಿಂದ ಹೊರತಂದುಮಾನಸಿಕ ಸ್ಥೈರ್ಯ ತುಂಬಬೇಕು ಎಂದು ಡಾ. ಅಪರ್ಣ ಪಾಟೀಲ್ ಸಲಹೆ ನೀಡಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications