Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾಲು ಮೇಲೆ ಕಾಲು ಹಾಕಿ ಕುಳಿತರೆ ತಪ್ಪಿದ್ದಲ್ಲ ಅಪಾಯ..! ಏನು ಸಮಸ್ಯೆ ಗೊತ್ತಾ?
ನೀವು ಮನೆಯಲ್ಲಾಗಲಿ, ಕಚೇರಿಯಲ್ಲಾಗಲಿ, ಜನರು ಆರಾಮವಾಗಿ ಕುಳಿತುಕೊಳ್ಳುತ್ತಾರೆ. ಕೆಲವರು ಮತ್ತಷ್ಟು ಆರಾಮವಾಗಿ ವಿಶ್ರಾಂತಿ ಪಡೆಯಲು ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳುತ್ತಾರೆ. ಆದರೆ ನಿಮಗೆ ಗೊತ್ತಾ ನೀವು ಕಾಲಿನ ಮೇಲೆ ಕಾಲು ಜಾಕಿ ಕುಳಿತುಕೊಳ್ಳುವುದು ಅಪಾಯಕಾರಿಯಂತೆ.
ನೀವು ಒಂದು ಕಾಲಿನ ಮೇಲೆ ಇನ್ನೊಂದು ಕಾಲನ್ನು ದಾಟಿ ಕುಳಿತಾಗ, ಇದು ಮೂಳೆ ಜೋಡಣೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಬೆನ್ನಿನ ಕೆಳಬಾಗದಲ್ಲಿ ನೋವು ಕಾಣಿಸಿಕೊಳ್ಳಲು ಕಾರಣವಾಗುತ್ತದೆ. ಮತ್ತು ಕಾಲಾನಂತರದಲ್ಲಿ ನಿಮ್ಮ ಬೆನ್ನುಮೂಳೆಯ ತಪ್ಪು ಜೋಡಣೆಗೆ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಈ ರೀತಿ ಅಡ್ಡಗಾಲಿನಲ್ಲಿ ಕುಳಿತುಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಅಭ್ಯಾಸವನ್ನು ತಪ್ಪಿಸಲು ಶಿಫಾರಸು ಮಾಡಲಾಗಿದೆ. ಹೀಗೆ ಕಾಲು ಒಂದರ ಮೇಲೆ ಮತ್ತೊಂದು ಹಾಕಿ ಕುಳಿತರೆ ಎಂತಹ ಸಮಸ್ಯೆಗಳು ಎದುರಾಗುತ್ತವೆ ಎಂಬುದನ್ನು ಇಲ್ಲಿ ತಿಳಿಯೋಣ.
ಈ ರೀತಿ ಅಡ್ಡಗಾಲು ಹಾಕಿ ಕುಳಿತುಕೊಳ್ಳುವುದು ಮಹಿಳೆಯರು ಹಾಗೂ ಪುರುಷರಲ್ಲೂ ಸಮಸ್ಯೆ ತಂದೊಡ್ಡಲಿದೆ, ಮುಖ್ಯವಾಗಿ ಮಹಿಳೆಯರಲ್ಲಿ ಗರ್ಭಾವಸ್ಥೆಯ ಸಮಸ್ಯೆ ಎದುರಾಗುತ್ತದೆ.
ಗರ್ಭಾವಸ್ಥೆಯಲ್ಲಿ ಮಹಿಳೆಯರು ಅಡ್ಡ ಕಾಲಿನ ಭಂಗಿಯಲ್ಲಿ ಕುಳಿತರೆ, ಅದು ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ವಾಸ್ತವವಾಗಿ, ಈ ಸಮಯದಲ್ಲಿ, ಮಹಿಳೆಯರ ದೇಹವು ತ್ವರಿತ ಬದಲಾವಣೆಗಳಿಗೆ ಒಳಗಾಗುತ್ತದೆ. ಅಂತಹ ಸಂದರ್ಭಗಳಲ್ಲಿ, ಸ್ನಾಯು ಸೆಳೆತ, ಬೆನ್ನು ನೋವಿನಂತಹ ಸಮಸ್ಯೆಗೆ ಅವರು ಒಳಗಾಗುತ್ತದೆ. ಇಷ್ಟೇ ಅಲ್ಲ ಗರ್ಭಿಣಿ ಈ ರೀತಿ ಅಡ್ಡಗಾಲು ಹಾಕಿ ಕುಳಿತುಕೊಳ್ಳುವುದರಿಂದ ಮಗುವಿಗೆ ಹಾನಿಯಾಗುತ್ತದೆ. ಕಾಲು ಸೆಳೆತ ಕೀಲು ನೋವಿನ ಸಮಸ್ಯೆ ಎದುರಾಗಲಿದೆ ಎಂದು ತಿಳಿದುಬಂದಿದೆ.
ಅಧಿಕ ರಕ್ತದೊತ್ತಡ
ಬಿಪಿ ಪರೀಕ್ಷೆಗೆಂದು ನೀವು ವೈದ್ಯರ ಬಳಿ ಹೋದಾಗ ಅವು ಎರಡೂ ಪಾದಗಳು ನೇರವಾಗಿರಲು ಹೇಳುತ್ತಾರೆ. ಉತ್ತಮ ರಕ್ತದ ಹರಿವಿಗಾಗಿ, ಎರಡೂ ಪಾದಗಳನ್ನು ನೆಲದ ಮೇಲೆ ಸಮಾನವಾಗಿ ಇಡುವುದು ಪ್ರಯೋಜನಕಾರಿಯಾಗಿದೆ. ಆದರೆ ನೀವು ಅಡ್ಡಗಾಲಿನಲ್ಲಿ ಕುಳಿತಿರುವಾಗ ಬಿಪಿ ಏರುಪೇರಾಗುತ್ತದೆ ಎಂಬುದು ದೃಢಪಟ್ಟಿದೆ.
ಬೆನ್ನು ನೋವು
ಈ ರೀರಿ ಅಡ್ಡಗಾಲು ಹಾಕಿ ಕುಳಿತುಕೊಳ್ಳುವುದರಿಂದ ಬೆನ್ನುಮೂಳೆಯ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇದು ನೋವು, ಅಸ್ವಸ್ಥತೆಯನ್ನು ಉಂಟುಮಾಡುತ್ತದೆ ಮತ್ತು ಕಾಲಾನಂತರದಲ್ಲಿ ಇದು ಡಿಸ್ಕ್ ಹರ್ನಿಯೇಷನ್ ಸೇರಿದಂತೆ ಇತರ ಬೆನ್ನುನೋವಿಗೆ ಕಾರಣವಾಗಬಹುದು ಎನ್ನಲಾಗಿದೆ. 2014 ರಲ್ಲಿ ಜರ್ನಲ್ ಆಫ್ ಆರ್ಥೋಪೆಡಿಕ್ ರಿಸರ್ಚ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಅಡ್ಡ-ಕಾಲು ಬೆನ್ನುಮೂಳೆಯ ಮೇಲೆ ಶೇ. 32ರಷ್ಟು ಹೆಚ್ಚುವರಿ ಒತ್ತಡವನ್ನು ನೀಡುತ್ತದೆ ಎಂದು ಹೇಳಲಾಗಿದೆ.
ಜೀರ್ಣಕಾರಿ ಸಮಸ್ಯೆಗಳು
ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ಅಜೀರ್ಣ, ಗ್ಯಾಸ್, ಉಬ್ಬುವುದು ಮುಂತಾದ ಸಮಸ್ಯೆಗಳನ್ನು ಉಂಟುಮಾಡಬಹುದು. ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಅಜೀರ್ಣ, ಉಬ್ಬುವುದು ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ತಿಳಿದುಬಂದಿದೆ.
ವೀರ್ಯಾಣು ಉತ್ಪಾದನೆಯ ಮೇಲೆ ಪರಿಣಾಮ
ಅಡ್ಡಗಾಲು ಹಾಕಿ ಕುಳಿತುಕೊಳ್ಳುವುದು ವೀರ್ಯ ಕೋಶಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ವೃಷಣದ ಉಷ್ಣತೆಯು ಸಾಮಾನ್ಯ ದೇಹದ ಉಷ್ಣತೆಗಿಂತ 2 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಬೇಕು. ಆದರೆ ಅಡ್ಡಗಾಲು ಹಾಕಿ ಕುಳಿತುಕೊಳ್ಳುವುದು
ತಾಪಮಾನ ಏರಿಕೆಗೆ ಕಾರಣವಾಗುತ್ತದೆ, ಇದು ವೀರ್ಯಾಣು ನಾಶ ಹಾಗೂ ಉತ್ಪಾದನೆಯ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications