Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬದನೆಕಾಯಿ ಸೇವಿಸಿದ್ರೆ ಹೃದಯಾಘಾತ ಸೇರಿದಂತೆ 4 ರೋಗಗಳು ದೂರ!
ಬದನೆಕಾಯಿ ಎಂದರೆ ಸಾಕು ಅನೇಕರು ಮೂಗು ಮುರಿಯುತ್ತಾರೆ. ಮನೆಯಲ್ಲಿ ಬದನೆಕಾಯಿ ಸಾರು, ಪಲ್ಯ ಮಾಡಿದ್ರೆ ಹೆಚ್ಚಿನವರಿಗೆ ಇಷ್ಟಾನೇ ಆಗೋದಿಲ್ಲ. ಆದ್ರೆ ನಿಮಗೊತ್ತಾ ಆರೋಗ್ಯದ ದೃಷ್ಟಿಯಿಂದ ಬದನೆಕಾಯಿ ತುಂಬಾನೇ ಒಳ್ಳೆಯದು. ಇದು ದೇಹಕ್ಕೆ ಜೀವರಕ್ಷಕವಾಗಬಹುದು. ಈ ತರಕಾರಿ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುತ್ತದೆ.

ಇದು ಉತ್ತಮ ಪ್ರಮಾಣದ ವಿಟಮಿನ್ ಕೆ, ವಿಟಮಿನ್ ಸಿ, ಪ್ರೋಟೀನ್, ಫೈಬರ್, ಫೋಲೇಟ್, ಮ್ಯಾಂಗನೀಸ್, ಪೊಟ್ಯಾಸಿಯಮ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿದೆ. ದೇಹಕ್ಕೆ ಪ್ರತಿದಿನ ಈ ಎಲ್ಲಾ ಪೋಷಕಾಂಶಗಳು ಅಗತ್ಯವಾಗಿ ಬೇಕಾಗುತ್ತವೆ.
ಇನ್ನೂ ಬದನೆಕಾಯಿಯು ನಾಲ್ಕು ಪ್ರಮುಖ ಕಾಯಿಲೆಗಳಿಂದಾನು ನಿಮ್ಮನ್ನು ಬಚಾವ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಷ್ಟಕ್ಕೂ ಬದನೆಕಾಯಿ ಆರೋಗ್ಯಕ್ಕೆ ಯಾಕೆ ಒಳ್ಳೆಯದು? ಇದನ್ನು ತಿನ್ನೋದ್ರಿಂದ ಯಾವೆಲ್ಲಾ ಕಾಯಿಲೆಗಳು ಗುಣವಾಗುತ್ತೆ ಅನ್ನೋದನ್ನು ತಿಳಿಯೋಣ.
ಹೃದ್ರೋಗದ ಸಮಸ್ಯೆ ನಿವಾರಿಸುತ್ತಾ?
ನೀವು ಹೃದ್ರೋಗಿಗಳಾಗಿದ್ದರೆ ಖಂಡಿತವಾಗಿಯೂ ಬದನೆಕಾಯಿಯನ್ನು ಸೇವಿಸಿ. ಇದು ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಅನ್ನು ಕಡಿಮೆ ಮಾಡುತ್ತದೆ. ಇದು ಹೃದ್ರೋಗಕ್ಕೆ ಮುಖ್ಯ ಕಾರಣವಾಗಿದೆ. ಈ ತರಕಾರಿಯನ್ನು ಸೇವಿಸೋದ್ರಿಂದ ಹೃದ್ರೋಗದ ಅಪಾಯ ಕಡಿಮೆಯಾಗುತ್ತೆ ಅಂತ ಸಂಶೋಧನೆಗಳಿಂದ ಸಾಭೀತಾಗಿದೆ.
ಸಕ್ಕರೆ ರೋಗಕ್ಕೆ ಪರಿಣಾಮಕಾರಿ!
ಬದನೆಯಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಮೂಲಕ ಸುಲಭವಾಗಿ ಹಾದುಹೋಗುತ್ತದೆ. ಇದರಿಂದಾಗಿ ಗ್ಲೂಕೋಸ್ ಹೀರಿಕೊಳ್ಳುವಿಕೆಯು ನಿಧಾನಗೊಳ್ಳುತ್ತದೆ. ಮತ್ತು ರಕ್ತದಲ್ಲಿನ ಸಕ್ಕರೆಯು ಇದ್ದಕ್ಕಿದ್ದಂತೆ ಹೆಚ್ಚಾಗೋದಿಲ್ಲ. ಮಧುಮೇಹಿಗಳು ಬದನೆಯನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು.
ಕೊಬ್ಬಿನಾಂಶವನ್ನು ಕರಗಿಸುತ್ತದೆ!
ತೂಕ ನಷ್ಟಕ್ಕೆ ಮುಖ್ಯವಾಗಿ ಕ್ಯಾಲೊರಿಗಳನ್ನು ಕಡಿಮೆ ಮಾಡಬೇಕು. ಮತ್ತು ಆಹಾರದಲ್ಲಿ ಫೈಬರ್ ಅನ್ನು ಹೆಚ್ಚಿಸಬೇಕು. ಬದನೆಕಾಯಿ ಮಾತ್ರ ಈ ಎರಡೂ ಕೆಲಸಗಳನ್ನು ಮಾಡಬಲ್ಲದು. ಬದನೆಕಾಯಿಯ ಸೇವನೆ ತೂಕ ನಷ್ಟಕ್ಕೆ ತುಂಬಾನೇ ಒಳ್ಳೆಯದು. ಇದು ಕೊಬ್ಬನ್ನು ಸುಡುವ ವೇಗವನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಕ್ಯಾನ್ಸರ್ ನ ಅಪಾಯ ಕಡಿಮೆ!
ಮನೆಯಲ್ಲಿ ಯಾರಿಗಾದರೂ ಕ್ಯಾನ್ಸರ್ ಇದ್ದರೆ ಕೆಲವೊಂದು ಸಲ ವಂಶಪಾರಂಪರ್ಯವಾಗಿ ಅದು ಹರಡುವ ಅಪಾಯ ಹೆಚ್ಚಾಗಿ ಇರುತ್ತದೆ. ನೀವು ಕ್ಯಾನ್ಸರ್ ನ ಅಪಾಯದಿಂದ ತಪ್ಪಿಸಿಕೊಳ್ಳಬೇಕಂದ್ರೆ ಆದಷ್ಟು ಬದನೆಕಾಯಿಯನ್ನು ತಿನ್ನಬೇಕು. ಅನೇಕ ಸಂಶೋಧನೆಗಳ ಪ್ರಕಾರ ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
