Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಬಜೆಟ್ 2025: ಪ್ರತಿ ಜಿಲ್ಲೆಗೂ ಬರಲಿದೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ, ರೋಗಿಗಳು, ಮನೆಯವರ ಪಾಲಿಗೆ ವರವಾದ ಬಜೆಟ್
ಈ ಕ್ಯಾನ್ಸರ್ ಎಂಬ ಮಾರಕ ರೋಗ ಮನುಷ್ಯನ ಆರೋಗ್ಯ ಸ್ಥಿತಿ ಹದಗೆಡಿಸುವುದು ಮಾತ್ರ ಆ ಮನೆಯ ಆರ್ಥಿಕ ಸ್ಥಿತಿಯನ್ನೂ ಹದಗೆಡಿಸುತ್ತೆ. ಅಲ್ಲದೆ ಕ್ಯಾನ್ಸರ್ ಆಸ್ಪತ್ರೆಗಳು ಹತ್ತಿರದ ಜಿಲ್ಲೆಗಳಲ್ಲಿ ಇರುವುದು ಕಡಿಮೆ ದೂರದ ನಗರ ಪ್ರದೇಶಗಳಲ್ಲಿ ಹೋಗಿ ಚಿಕಿತ್ಸೆ ಪಡೆಯಬೇಕು, ಇವೆಲ್ಲಾ ಜನ ಸಾಮಾನ್ಯರ ಜೀವನದ ಮೇಲೆ ತುಂಬಾನೇ ಹೊಡೆತ ಬೀಳುವುದು. 2025ರ ಬಜೆಟ್ ಜನರ ಈ ಸಂಕಷ್ಟಕ್ಕೆ ಪರಿಹಾರ ನೀಡಿದೆ.

ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್ ಸೆಂಟರ್‌ಗಳು
2025-26ರ ಬಜೆಟ್‌ನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್ ಸೆಂಟರ್‌ಗಳನ್ನು ಸ್ಥಾಪಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೇಶದೆಲ್ಲಡೆ ಈ ಸೌಲಭ್ಯವಿರಲಿದೆ, ಇದರಿಂದಾಗಿ ಲಕ್ಷಾಂತರ ಕ್ಯಾನ್ಸರ್ ರೋಗಿಗಳಿಗೆ ಹಾಗೂ ಅವರ ಮನೆಯವರಿಗೆ ತುಂಬಾನೇ ಅನುಕೂಲಕರವಾಗಲಿದೆ.
ಪ್ರತಿವರ್ಷ ಶೇ. 5.6ರಷ್ಟು ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ
ಕ್ಯಾನ್ಸರ್ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು ಸ್ಥಾಪನೆಯಾದರೆ ಕ್ಯಾನ್ಸರ್ ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ದೊರೆಯುತ್ತದೆ, ಆರೋಗ್ಯ ಸ್ಥಿತಿ ಸರಿಯಿಲ್ಲದಿರುವಾಗ ದೂರದ ನಗರ ಪ್ರದೇಶಕ್ಕೆ ಪ್ರಯಾಣಿಸುವ ಅವಶ್ಯಕತೆ ಇರುವುದಿಲ್ಲ, ಕೇಂದ್ರದ ಈ ಯೋಜನೆ ಕ್ಯಾನ್ಸರ್ ರೋಗಿಗಳಿಗೆ ಹಾಗೂ ಅವರ ಮನೆಯವರಿಗೆ ಬಹುದೊಡ್ಡ ಸಹಾಯವಾಗಲಿದೆ ಎಂಬುವುದರಲ್ಲಿ ಯಾವುದೇ ಸಂದೇಹವಿಲ್ಲ.200 ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಯಾಗಲಿದೆ
3 ವರ್ಷದೊಳಗೆ 200 ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುವುದು ಅಲ್ಲದೆ gig workers (ಟೆಂಪೋರರಿ ಕೆಲಸ ಮಾಡುವವರನ್ನು) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಲ್ಲಿ ಸೌಲಭ್ಯ ನೀಡಲಾಗುವುದು. ಕ್ಯಾನ್ಸರ್ ಕೇರ್ ಹಾಗೂ ಮೆಡಿಕಲ್ ಟೂರಿಸಂಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಲ್ಲದೆ ನರ್ಸಿಂಗ್ ಹಾಗೂ ಎಮರ್ಜೆನ್ಸಿ ಪರ್ಸನಲ್‌ಗೆ ಹೆಚ್ಚು ಒತ್ತು ನೀಡಲಾಗಿದೆ.
ICMR ಪ್ರಕಾರ ಭಾರತದಲ್ಲಿ ತುಟಿ ಹಾಗೂ ಬಾಯಿಗೆ ಸಂಬಂಧಿಸಿದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ.
ಕ್ಯಾನ್ಸರ್ ರೋಗಿಗಳಿಗೆ ತೆರಿಗೆ ವಿನಾಯಿತಿ ಕೂಡ ಸಿಕ್ಕಿದೆ
ಕೆಲವೊಂದು ಔಷಧಿಗಳಿಗೆ ತೆರಿಗೆ ವಿನಾಯಿತಿ ಸಿಕ್ಕಿದೆ
37 ಹೊಸ ಔಷಧಿ ಹಾಗೂ ರೋಗಿಗಳಿಗೆ 30 ಸಹಾಯಕ ಕಾರ್ಯಕ್ರಮಗಳು ಬರಲಿದೆ, ಅಅಲ್ಲದೆ 36 ಲೈಫ್ ಸೇವಿಂಗ್ ಔಷಧಿಗಳಿಗೆ ಸಂಪೂರ್ಣ ತೆರಿಗೆ ರಿಯಾಯಿತಿ ನೀಡಲಾಗಿದೆ. ಅಲ್ಲದೆ ಅಪರೂಪದ ಕಾಯಿಲೆಗಳ ಹಾಗೂ ಮಾರಕ ಕಾಯಿಲೆಗಳ ಔಷಧಿಗಳಿಗೆ ತೆರಿಗೆ ರಿಯಾಯಿತಿ ನೀಡಲಾಗಿದೆ.
ಮೆಡಿಕಲ್ ಎಜುಕೇಷನ್ ಕಡೆಗೂ ಹೆಚ್ಚು ಒತ್ತು ನೀಡಲಾಗುತ್ತಿದೆ
10,000 ಹೆಚ್ಚು ಮೆಡಿಕಲ್ ಸೀಟ್‌ಗಳನ್ನು ಮುಂದಿನ ವರ್ಷದಲ್ಲಿ ಸೇರಿಸಲಾಗುವುದು, ಮುಂಬರುವ ಐದು ವರ್ಷದಲ್ಲಿ 75,000 ಸೀಟುಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮೆಡಿಕಲ್ ಸೀಟುಗಳು ಶೇ. 130ರಷ್ಟು ಹೆಚ್ಚಳವಾಗಲಿದೆ, ಇದರಿಂದ ದೇಶದಲ್ಲಿ ಡಾಕ್ಟರ್‌ಗಳ ಸಂಖ್ಯೆ ಹೆಚ್ಚಾಗಲಿದೆ, ಜನರಿಗೆ ವೈದ್ಯಕೀಯ ಸೇವೆ ಸೂಕ್ತ ಸಮಯದಲ್ಲಿ ದೊರೆಯುವಂತಾಗುವುದು.
ಆರೋಗ್ಯವೇ ಭಾಗ್ಯ
ಈ ಬಜೆಟ್‌ನಲ್ಲಿ ಆರೋಗ್ಯದ ಕಡೆಗೆ ತುಂಬಾನೇ ಒತ್ತು ನೀಡಲಾಗಿದೆ. ಔಷಧಿಗಳಿಗೆ ತೆರಿಗೆ ರಿಯಾಯಿತಿ, ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು, ಹೆಚ್ಚುವರಿ ಮೆಡಿಕಲ್ ಸೀಟುಗಳು, ನರ್ಸಿಂಗ್ ಕಡೆಗೆ ಉತ್ತೇಜನ ಇವೆಲ್ಲಾ ಆರೋಗ್ಯದ ಕಡೆಗೆ ನೀಡುತ್ತಿರುವ ಪ್ರಮುಖ ಪ್ರಾಮುಖ್ಯತೆಯಾಗಿದೆ. ಈ ಯೋಜನೆಗಳು ಜನರಿಗೆ ತುಂಬಾನೇ ನೆರವಾಗಲಿದೆ, ಇದರಿಂದ ಜನರಿಗೆ ಆರ್ಥಿಕ ಹೊರೆ ಕೂಡ ಕಡಿಮೆಯಾಗಲಿದೆ. ಮೆಡಿಕಲ್ ಸಿಟುಗಳ ಹೆಚ್ಚಳದಿಂದ ಆಸ್ಪತ್ರೆಗಳನ್ನು ವೈದ್ಯರುಗಳ ಕೊರತೆ ಉಂಟಾಗುವುದಿಲ್ಲ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ಬಜೆಟ್ ಉತ್ತಮವಾಗಿದೆ, ಜನರಿಗೆ ವರವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











