Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
Budget 2025: ಕ್ಯಾನ್ಸರ್ ಸೇರಿ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ..!
ಸಂಸತ್‌ನಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆಗಳ ನೀಡಿದ್ದಾರೆ. ವಿಶ್ವದಾದ್ಯಂತ ಅತೀ ಹೆಚ್ಚು ಅಪಾಯ ತಂದೊಡ್ಡುವ ಕ್ಯಾನ್ಸರ್ ಕಾಯಿಲೆ ಸಂಬಂಧ ಬಜೆಟ್‌ನಲ್ಲಿ ಬಹುದೊಡ್ಡ ಘೋಷಣೆಯಾಗಿದೆ. ಹಾಗೆ ಕ್ಯಾನ್ಸರ್ ಔಷಧಿಗಳ ಹಾಗೂ ಇತರ ಅಪರೂಪದ ಕಾಯಿಲೆಗಳಿಗೆ ನೀಡಲಾಗುತ್ತಿದ್ದ ಔಷಧಿಗಳ ಮೇಲಿನ ಆಮದು ತೆರಿಗೆ ವಿನಾಯಿತಿ ನೀಡಲಾಗಿದೆ.
ಸಂಸತ್‌ನಲ್ಲಿ ಸತತ 8ನೇ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್, 36 ಜೀವರಕ್ಷಕ ಔಷಧಿಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದರು. ಅದರೆ ಈ ಔಷಧಿಗಳ ಬೆಲೆಯಲ್ಲಿ ಇಳಿಕೆಯಾಗುವುದನ್ನು ನಾವು ಮಂದಿನ ದಿನಗಳಲ್ಲಿ ನೋಡಬಹುದು. ಇದು ಈ ಕಾಯಿಲೆಗಳಿಗೆ ಒಳಗಾದ ರೋಗಿಗಳಿಗೆ ನೆರವಾಗಲಿದೆ.

ಈ ಔಷಧಿಗಳಲ್ಲಿ ಕ್ಯಾನ್ಸರ್ ಮತ್ತು ಇತರ ಅಪರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ ಅಗತ್ಯ ಔಷಧಿಗಳು ಕೂಡ ಸೇರಿವೆ ಎಂದು ಅವರು ಹೇಳಿದರು. ನಿರ್ಣಾಯಕ ಔಷಧಿಗಳ ಹೊರತಾಗಿಯೂ ಹಲವು ರೀತಿಯ ಕೊಡುಗೆಯನ್ನು ಆರೋಗ್ಯ ವಲಯಕ್ಕೆ ಈ ಸಮಯದಲ್ಲಿ ಅವರು ಘೋಷಿಸಿದ್ದಾರೆ.
ರೋಗಿಗಳಿಗೆ ವಿಶೇಷವಾಗಿ ಕ್ಯಾನ್ಸರ್ ಹಾಗೂ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು ಆಮದು ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಹಾಗೆ ಈ ಪಟ್ಟಿಗೆ ಹೊಸದಾಗಿ 6 ಜೀವ ರಕ್ಷಕ ಔಷಧಿಗಳ ಸೇರಿಸಲಾಗಿದ್ದು, ಇವುಗಳ ಮೇಲೆ ಶೇ.5ರಷ್ಟು ಆಮದು ಸುಂಕ ವಿಧಿಸಲು ಪ್ರಸ್ತಾಪಿಸಲಾಗಿದೆ.
ಔಷಧಿ ತಯಾರಿಕಾ ಕಂಪನಿಗಳು ನಡೆಸುವ ರೋಗಿಯ ಸಹಾಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಔಷಧಿಗಳನ್ನು ರೋಗಿಗಳಿಗೆ ಉಚಿತವಾಗಿ ಪೂರೈಸಿದರೆ ಈ ಆಮದು ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್
2025-26ರ ಬಜೆಟ್‌ನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಆರೋಗ್ಯ ಸಚಿವಾಲಯಕ್ಕೆ 90958.63 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಯಿತ್ತು. ಕ್ಯಾನ್ಸರ್ ರೋಗಿಗಳಿಗೆ ದೀರ್ಘಕಾಲ ಆಸ್ಪತ್ರೆಯಲ್ಲೇ ಉಳಿಯುವಂತೆ ಮಾಡದೆ ಅನುಕೂಲಕರ ಮತ್ತು ಕೈಗೆಟುಕುವ ರೀತಿಯಲ್ಲಿ ಚಿಕಿತ್ಸೆಯನ್ನು ಒದಗಿಸಲು ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಗೆ ಮುಂದಾಗಿದೆ.
ಇದು ಕ್ಯಾನ್ಸರ್ ಚಿಕಿತ್ಸೆಗಾಗಿ ರೋಗಿಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗವುದು ಹಾಗೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದು ನಿಲ್ಲಲಿದೆ. ಹಾಗೆ ಎಲ್ಲಾ ವರ್ಗದ ಜನರಿಗೂ ಕ್ಯಾನ್ಸರ್ ಚಿಕಿತ್ಸೆ ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆಯಂತೆ. ಇದಕ್ಕಾಗಿ ದೇಶದಾದ್ಯಂತ 2000ಕೂ ಹೆಚ್ಚು ಕೇಂದ್ರಗಳ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಯಾಗಲಿದೆಯಂತೆ.
ದೇಶಾದ್ಯಂತ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 10 ಸಾವಿರ ಸೀಟುಗಳ ಸೇರಿಸಲು ಕ್ರಮ ಹಾಗೂ ಮುಂದಿನ 5 ವರ್ಷದಲ್ಲಿ 75 ಸಾವಿರ ಹೊಸ ಸೀಟುಗಳ ಸೇರಿಸಲು ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಮುಂದಾಗಲಾಗುವುದು ಎಂದರು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications