Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಯುಎಸ್‌ನಲ್ಲಿ ಏಕಾಏಕಿ ಹಕ್ಕಿಜ್ವರ ಏರಿಕೆ..! ತುರ್ತು ಪರಿಸ್ಥಿತಿ ಘೋಷಣೆ!
ಕೆಲವು ವರ್ಷಗಳಿಂದ ಹಕ್ಕಿ ಜ್ವರ ಎಷ್ಟೊಂದು ಸಮಸ್ಯೆ ತಂದಿಟ್ಟಿತ್ತು ಎಂಬುದು ನಮಗೆಲ್ಲಾ ತಿಳಿದಿರಬಹುದು. ಹಕ್ಕಿ ಜ್ವರ ಬೇರೆಲ್ಲಾ ವೈರಸ್‌ಗಳಿಗಿಂತ ಅತ್ಯಂತ ಅಪಾಯಕಾರಿಯಾಗಿ ಹರಡುವ ಜೊತೆಗೆ ಸಾವು ನೋವಿಗೆ ಕಾರಣವಾಗುತ್ತಿತ್ತು. ಹಾಗೆ ಈಗಲೂ ಕೂಡ ಹಕ್ಕಿ ಜ್ವರ ಹರಡುತ್ತಲೇ ಇದೆ. ಭಾರತದಲ್ಲೂ ಕೂಡ ಈ ಹಕ್ಕಿ ಜ್ವರ ಎಷ್ಟೊಂದು ಅಪಾಯಕಾರಿಯಾಗಿ ಹರಡಿತ್ತು ಎಂಬುದನ್ನು ನೀವು ನೋಡಿದ್ದೀರಿ.
ಕೇರಳ, ಕರ್ನಾಟಕ, ತಮಿಳುನಾಡು ಸೇರಿ ಹಲವು ಭಾಗದಲ್ಲಿ ಅಪಾಯಕಾರಿ ಮಟ್ಟದಲ್ಲಿ ಹರಡಿತ್ತು. ಹಾಗೆ ಯುಎಸ್‌ನಲ್ಲಿ ಇದರ ಹರಡುವಿಕೆ ಹಾಗೂ ಅಪಾಯ ಮತ್ತಷ್ಟು ಹೆಚ್ಚಾಗಿತ್ತು. ಕೋವಿಡ್ ಸಮಯದಲ್ಲಿ ಹರಡುವಿಕೆ ಬಹಳಷ್ಟು ಏರಿಕೆಯಾಗಿತ್ತು. ಆದ್ರೆ ಈಗ ಕ್ಯಾಲಿಫೋರ್ನಿಯಾದಲ್ಲಿ ಈ ಪ್ರಮಾಣ ಮತ್ತೆ ಏರಿಕೆಯಾಗಿದ್ದು, ಅಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆಗೆ ಕಾರಣವಾಗಿದೆ.

ಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಅವರು ರಾಜ್ಯದಲ್ಲಿ 34 ಜನರಲ್ಲಿ ಹಕ್ಕಿ ಜ್ವರ ದೃಢ ಪಟ್ಟ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ 34 ಜನರಲ್ಲಿ ಏವಿಯನ್ ಇನ್ಫ್ಲುಯೆನ್ಸ A (H5N1) ಸೋಂಕು ಕಂಡುಬಂದಿದೆ ಎಂದು ವರದಿಯಾಗಿದೆ.
ದಕ್ಷಿಣ ಕ್ಯಾಲಿಫೋರ್ನಿಯಾದ ಫಾರ್ಮ್‌ಗಳಲ್ಲಿ ಡೈರಿ ಹಸುಗಳಲ್ಲಿ ಸೋಂಕು ವರದಿಯಾದ ಬಳಿಕ ಈ ರೀತಿಯ ಘೋಷಣೆ ಹೊರಬಿದ್ದಿದೆ. ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾಜ್ಯದಾದ್ಯಂತ ಕಠಿಣ ನಿಯಮ ಜಾರಿಗೆ ಮುಂದಾಗಲಾಗಿದೆ.
ಕ್ಯಾಲಿಫೋರ್ನಿಯಾದಲ್ಲಿ ಯಾವುದೇ ವ್ಯಕ್ತಿಯಿಂದ ವ್ಯಕ್ತಿಗೆ ಈ ಹಕ್ಕಿ ಜ್ವರ ಹರಡುವಿಕೆಯನ್ನು ದೃಢಪಡಿಸಿಲ್ಲ. ಮೂಲತಃ ಈ ವೈರಸ್ ಡೈರಿ ಪ್ರಾಣಿಗಳ ಮೂಲಕ ಹರಡಿರಬಹುದು ಎಂದು ಅಂದಾಜಿಸಲಾಗಿದೆ. ಬಹುತೇಕ ಎಲ್ಲಾ ಸೋಂಕಿತ ವ್ಯಕ್ತಿಗಳು ಸೋಂಕಿತ ಜಾನುವಾರುಗಳೊಂದಿಗೆ ನೇರ ಸಂಪರ್ಕವನ್ನು ಹೊಂದಿದ್ದರು. ಏಕಾಏಕಿ ಈ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದಿರುವ ಹಿನ್ನೆಲೆ ಈ ವೈರಸ್ ಹರಡದಂತೆ ತಡೆಯುವ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ.
ಮಾರ್ಚ್ 2024 ರಲ್ಲಿ ಟೆಕ್ಸಾಸ್ ಮತ್ತು ಕಾನ್ಸಾಸ್‌ನಲ್ಲಿ ಕಾಣಿಸಿಕೊಂಡ ಬಳಿಕ ಡೈರಿ ಜಾನುವಾರುಗಳಲ್ಲಿ ಈ ವೈರಸ್ ಪತ್ತೆಯಾಗಿತ್ತು. ಹಾಗೆ ಮಾನವರಲ್ಲು ಈ ಪ್ರಕರಣ ವರದಿಯಾಗಿ ಆಘಾತಕ್ಕೆ ಕಾರಣವಾಗಿತ್ತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ವರದಿಯಲ್ಲಿ ತಿಳಿಸಿದೆ. ನಂತರ ಯುಸ್‌ನ ಬರೋಬ್ಬರಿ 16 ರಾಜ್ಯಗಳಿಗೆ ಹರಡಿತ್ತು. ಏಪ್ರಿಲ್‌ನಿಂದ ಈಚೆಗೆ ಈ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.
ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುವಿಕೆಯ ಯಾವ ಪ್ರಕರಣಗಳು ವರದಿಯಾಗಿಲ್ಲ. ಈ ಎಲ್ಲಾ ಪ್ರಕರಣಗಳು ಜಾನುವಾರಗಳ ಸಂಪರ್ಕದಲ್ಲಿದ್ದವರಿಂದ ಹರಡಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಲ್ಲಿ ಸುಮಾರು 33 ಹಸುಗಳಲ್ಲಿ ಈ ಹಕ್ಕಿಜ್ವರಕ್ಕೆ ಕಾರಣವಾಗು ವೈರಸ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹರಡುವಿಕೆಯ ಅಪಾಯವನ್ನು ತಗ್ಗಿಸುವ ಸಲುವಾಗಿ ಡೈರಿ ಫಾರ್ಮ್‌ಗಳಿಗೆ ರಕ್ಷಣಾ ಸಾಧನಗಳ ವಿತರಿಸಲಾಗಿದೆ. ಹಾಗೆ ಕೆಲಸ ಮಾಡುವವರು ಮಾಲೀಕರಿಗೆ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೆ ಹಸಿ ಹಾಲನ್ನು ಬಳಸುವ ಮುನ್ನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ಹಕ್ಕಿ ಜ್ವರ ಅಮೆರಿಕದಲ್ಲಿ ಮೊದಲ ಬಾರಿಗೆ 2022ರಲ್ಲಿ ಪತ್ತೆ ಮಾಡಲಾಗಿತ್ತು. ಕಾಡು ಹಕ್ಕಿಯೊಂದರಲ್ಲಿ ಈ ವೈರಸ್ ಪತ್ತೆಯಾಗಿತ್ತು. ಅನಂತರ ಎಲ್ಲಾ ರಾಜ್ಯಗಳಲ್ಲೂ ವರದಿಯಾಗಿತ್ತು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











