Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪಾನಿಪೂರಿಯಲ್ಲು ಕ್ಯಾನ್ಸರ್ ಕಾರಕ ಅಂಶ ಪತ್ತೆ..! ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಪಾನಿಪೂರಿ.?
ಇತ್ತೀಚಿಗೆ ರಾಜ್ಯದಲ್ಲಿ ಗೋಬಿ ಮಂಚೂರಿ ಮಾಡಲು ಹಾಗೂ ಅಡುಗೆಯಲ್ಲಿ ಕೆಂಪು ಬಣ್ಣಕ್ಕೆ ಕಾರಣವಾಗುತ್ತಿದ್ದ ಕೃತಕ ಬಣ್ಣವನ್ನು ನಿಷೇಧಿಸಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈ ನಡುವೆ ಈಗ ರಾಜ್ಯದ ಪಾನಿ ಪೂರಿಯೂ ಕ್ಯಾನ್ಸರ್‌ಗೆ ಕಾರಣವಾಗುವ ಅಂಶಗಳ ತನ್ನಲ್ಲಿಟ್ಟುಕೊಂಡಿದೆ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಇತ್ತೀಚಿನ ಪರಿಶೀಲನೆಯು ರಾಜ್ಯದಾದ್ಯಂತ ಸಂಗ್ರಹಿಸಲಾದ ಸುಮಾರು ಶೇ. 22 ರಷ್ಟು ಪಾನಿ ಪುರಿ ಮಾದರಿಗಳು ಸುರಕ್ಷತಾ ಮಾನದಂಡಗಳನ್ನು ಯಶಸ್ವಿಯಾಗಿ ಪೂರೈಸಿಲ್ಲ ಎಂದು ತಿಳಿದುಬಂದಿದೆ.

ರಾಜ್ಯದ ಸುಮಾರು 79 ಸ್ಥಳಗಳಿಂದ ಈ ಪಾನಿ ಪೂರಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವುಗಳಲ್ಲಿ 41 ಕೃತಕ ಬಣ್ಣಗಳು ಮತ್ತು ಕ್ಯಾನ್ಸರ್-ಉಂಟುಮಾಡುವ ರಾಸಾಯನಿಕಗಳು ಸಹ ಬೆರೆತಿರುವುದು ಹಾಗು ಅಸುರಕ್ಷಿತ ಆಹಾರ ಇದಾಗಿದೆ ಎಂದು ಕಂಡುಬಂದಿದೆ.
ಇನ್ನೂ 18 ಮಾದರಿಗಳು ಅತ್ಯಂತ ಕಳಪೆ ಗುಣಮಟ್ಟಾಗಿದ್ದು, ಅವುಗಳು ಬಳಕೆಗೆ ಸುರಕ್ಷಿತವಲ್ಲ ಎಂದ ಇಲಾಖೆ ಪರಿಗಣಿಸಿದೆ. ಈ ಮಾದರಿಗಳಲ್ಲಿ ಬ್ರಿಲಿಯಂಟ್ ಬ್ಲೂ, ಸನ್‌ಸೆಟ್ ಯೆಲ್ಲೋ ಮತ್ತು ಟಾರ್ಟ್ರಾಜಿನ್‌ನಂತಹ ಕ್ಯಾನ್ಸರ್ ಕಾರಕ ರಾಸಾಯನಿಕಗಳು ಕಂಡುಬಂದಿವೆ ಎಂದು ಹೇಳಲಾಗಿದೆ.
ಪಾನಿ ಪುರಿ ಜನಪ್ರಿಯ ಸ್ನ್ಯಾಕ್ಸ್ ಆಗಿದ್ದು ಈ ಫುಡ್ ಕುರಿತಂತೆ ಬಹಳಷ್ಟು ದೂರುಗಳು ಕೇಳಿಬಂದಿದ್ದವಂತೆ. ರಸ್ತೆ ಬದಿ ಅಂಗಡಿಗಳು, ಹೋಟೆಲ್‌ಗಳಿಂದಲೂ ಮಾದರಿಗಳ ಪರೀಕ್ಷೆಗೊಳಪಡಿಸಲಾಗಿದೆ. ಆದರೆ ಇದರಲ್ಲಿ ಬಹುಪಾಲು ಸೇವನೆ ಯೋಗ್ಯ ಎಂಬ ವರದಿಯೇ ಬಂದಿದೆ. ಆದರೆ ಶೇ.22 ರಷ್ಟು ಮಾದರಿಯೂ ಸೇಔನೆ ಯೋಗ್ಯವಲ್ಲ ಎಂಬುದು ತಿಳಿದುಬಂದಿದೆ.
ಈ ಸೇವನೆ ಯೋಗ್ಯವಲ್ಲದ ಮಾದರಿಯಲ್ಲಿ ಹಲವು ರೀತಿಯ ರಾಸಾಯನಿಕಗಳು ಪತ್ತೆಯಾಗಿದ್ದು, ಸರಳ ಹೊಟ್ಟೆಯ ಅಸ್ವಸ್ಥತೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ, ಈ ಕೃತಕ ಬಣ್ಣಗಳು ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಕೆಲವು ಸ್ವಯಂ ನಿರೋಧಕ ಕಾಯಿಲೆಗಳು ಅಥವಾ ಮೂತ್ರಪಿಂಡದ ಹಾನಿಯನ್ನು ಸಹ ಉಂಟುಮಾಡಬಹುದು ಎಂದು ಎಚ್‌ಸಿಜಿ ಕ್ಯಾನ್ಸರ್ ಸೆಂಟರ್‌ನ ಶೈಕ್ಷಣಿಕ ಸಂಶೋಧನಾ ಕೇಂದ್ರದ ಡೀನ್-ಡಾ.ವಿಶಾಲ್ ರಾವ್ ಹೇಳಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಸುಮಾರು 200ಕ್ಕೂ ಅಧಿಕ ಸ್ಥಳಗಳಲ್ಲಿ 700ಕ್ಕೂ ಹೆಚ್ಚು ಅಂಗಡಿಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಕೆಲವು ಅಂಗಡಿಗಳಲ್ಲಿ ಅವಧಿ ಮೀರಿದ ಉತ್ಪನ್ನ ಮಾರಾಟ ಮಾಡುವುದು ಸಹ ಕಂಡುಬಂದಿತ್ತು.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪ್ರಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಂತ್ರಣ, 2011 ರಲ್ಲಿ ಅನುಮತಿಸದ ಹೊರತು ಆಹಾರಕ್ಕೆ ಯಾವುದೇ ಬಣ್ಣವನ್ನು ಸೇರಿಸಬಾರದು ಎಂಬ ನಿಯಮವಿದೆ. ಈ ನಿಯಮದಡಿ ರೋಡಮೈನ್ ಬಿಯನ್ನು ಹೊರಗಿಡಲಾಗಿದೆ. ಇದರ ರಾಸಾಯನಿಕವು ಕ್ಯಾನ್ಸರ್ ಕಾರಕ ಎಂದು ವರದಿಯಾಗಿರುವುದರಿಂದ ಇದರ ಬಳಕೆ ನಿಷೇಧಿಸಲಾಗಿತ್ತು.
ಗೋಬಿ ಹಾಗೂ ಕಾಟನ್ ಕ್ಯಾಂಡಿಯ ತಯಾರಿಕೆಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸಲಾಗುತ್ತಿದ್ದ ರಾಸಾಯನಿಕವು ಕ್ಯಾನ್ಸರ್ ಸೇರಿದಂತೆ ಹಲವು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ ಎಂದು ವರದಿಯಾಗಿತ್ತು. ಇದಕ್ಕಾಗಿ ರೋಡಮೈನ್ ಬಿ ಎಂಬ ರಾಸಾಯನಿಕ ಬಳಸಬಾರದು ಎಂದು ಸೂಚಿಸಲಾಗಿತ್ತು, ಈಗ ಪಾನಿ ಪೂರಿಯಲ್ಲಿಯೂ ಇಂತಹ ಹಲವು ರಾಸಾಯನಿಕಗಳು ಪತ್ತೆಯಾಗಿರುವುದು ವರದಿಯಾಗಿದೆ. ಸದ್ಯ ಈ ವರದಿ ಕೈ ಸೇರಿದ ಬಳಿಕ ಉನ್ನತ ಸಭೆಗಳು ನಡೆಯುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವರ ಸಮ್ಮುಖದಲ್ಲಿ ಪಾನಿಪೂರಿ ಕುರಿತಂತೆ ಬಹುದೊಡ್ಡ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications