Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
2 ದಿನದಲ್ಲಿ ಕೊರೊನಾ ಪ್ರಕರಣ ದುಪ್ಪಟ್ಟು..! ಆಂಧ್ರದಲ್ಲಿ ಮಾರ್ಗಸೂಚಿ ಪ್ರಕಟ..!
ಏಷ್ಯಾದಲ್ಲಿ ಮತ್ತೆ ಕೋವಿಡ್ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಿಂಗಾಪುರ್, ಹಾಂಗ್‌ಕಾಂಗ್‌ನಲ್ಲಿ ಈ ಕೇಸ್‌ಗಳು ಹೆಚ್ಚಾಗುತ್ತಿದೆ. ಹೀಗಾಗಿ ಭಾರತದಲ್ಲೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕದ ಜೊತೆಗೆ ಎಚ್ಚರಿಕೆಯಿಂದ ಇರಬೇಕಾಗಿದೆ. ಕೊರೊನಾ ಹೊಸ ರೂಪಾಂತರವಾಗಿರುವ JN.1 ಏಷ್ಯಾದಲ್ಲಿ ಕಳವಳಕ್ಕೆ ಕಾರಣವಾಗುತ್ತಿದೆ.
ಭಾರತದಲ್ಲಿಯೂ ಕೊರೊನಾ ಪ್ರಕಗಳ ಸಂಖ್ಯೆ ನಿಧಾನಗತಿಯಿಂದ ಏರಿಕೆಯಾಗುತ್ತಿದೆ. ಏಪ್ರಿಲ್‌ಗೆ ಹೋಲಿಸಿದರೆ ಮೇನಲ್ಲಿ ಈ ಪ್ರಮಾಣ ದುಪ್ಪಟ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲೂ ಈ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಬಂದಿದೆ. ಆರೋಗ್ಯ ಇಲಾಖೆಯ ಪ್ರಕಾರ ಜನವರಿಯಲ್ಲಿ 3 ಪ್ರಕರಣಗಳು ವರದಿಯಾಗಿವೆ, ನಂತರ ಫೆಬ್ರವರಿಯಲ್ಲಿ ಒಂದು ಪ್ರಕರಣ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ತಲಾ 3 ಪ್ರಕರಣಗಳು ಸಹ ಕಂಡುಬಂದಿವೆ. ಆದರೆ ಮೇ ಮೇ ತಿಂಗಳಲ್ಲಿ 33 ಪ್ರಕರಣಗಳು ವರದಿಯಾಗಿದ್ದು, ಮೇ ತಿಂಗಳು ಇನ್ನು ಮುಗಿಯುವ ಹಂತ ತಲುಪಬೇಕಿದೆ.

ಈ ಪ್ರಕರಣಗಳಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 9 ತಿಂಗಳ ಮಗುವಿನಲ್ಲಿ ಕೊರೊನಾ ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದ ವೇಳೆ ಕೊರೊನಾ ವೈರಸ್ ದೃಢವಾಗಿದೆ. ಈಗ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಇನ್ನೊಂದು ಕಡೆ ಆಂಧ್ರ ಪ್ರದೇಶದಲ್ಲು ಈ ಪ್ರಕರಣಗಳ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ ಅಲ್ಲಿನ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ಸಮಗ್ರ ಸಲಹೆಯಲ್ಲಿ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಸಂಭಾವ್ಯ ವೈರಸ್ ಹರಡುವಿಕೆ ತಡೆಯಲು ನಾಗರಿಕರು ಅಗತ್ಯ ಆರೋಗ್ಯ ಮುನ್ನಚ್ಚರಿಕೆ ತೆಗೆದುಕೊಳ್ಳಲು ಮನವಿ ಮಾಡಲಾಗಿದೆ.
ಹಾಗೆ ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಂತಹ ಜನದಟ್ಟಣೆಯ ಪ್ರದೇಶದಲ್ಲಿ ಕೋವಿಡ್-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆ 60 ವರ್ಷ ಮೇಲ್ಪಟ್ಟವರು ಹಾಗೆ ಗರ್ಭಿಣಿಯರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು ಮತ್ತು ಆದಷ್ಟು ಮನೆಯಲ್ಲೇ ಇರಲು ಸೂಚಿಸಲಾಗಿದೆ.
ಸಾರ್ವಜನಿಕರಿಗೆ ನಿಯಮಿತವಾಗಿ ಕೈ ತೊಳೆಯುವುದು, ಕೆಮ್ಮು ಮತ್ತು ಸೀನುವಾಗ ಮೂಗು, ಬಾಯಿ ಮುಚ್ಚಿಕೊಳ್ಳುವುದು, ಜನದಟ್ಟಣೆಯಾಗುವಂತೆ ಒಂದೆಡೆ ಸೇರಿಕೊಳ್ಳದೆ ಇರುವುದು, ಮಾಸ್ಕ್ ಧರಿಸಲು ಕೂಡ ಸೂಚಿಸಲಾಗಿದೆ. ಹಾಗೆ ಕೋವಿಡ್ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಆಯಾಸ, ಗಂಟಲು ನೋವು, ರುಚಿ ಅಥವಾ ವಾಸನೆಯ ನಷ್ಟ, ತಲೆನೋವು, ಸ್ನಾಯು ನೋವು, ಸ್ರವಿಸುವ ಮೂಗು ಮತ್ತು ವಾಕರಿಕೆ, ವಾಂತಿ ಅಥವಾ ಅತಿಸಾರದಂತಹ ಲಕ್ಷಣಗಳು ಕಂಡುಬಂದರೆ ಪರೀಕ್ಷೆಗೆ ಒಳಗಾಗಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಇನ್ನು ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮೇ ತಿಂಗಳಲ್ಲಿ 2 ಸಾವು ಕೂಡ ಸಂಭವಿಸಿದೆ. ಹಲವು ತಿಂಗಳ ಬಳಿಕ ವರದಿಯಾಗುತ್ತಿರುವ ಮೊದಲ ಸಾವಿನ ಸಂಖ್ಯೆ ಇದಾಗಿದೆ. ಸಕ್ರಿಯ ಪ್ರಕರಣಗಳು ಕೇವಲ ಎರಡು ದಿನಗಳಲ್ಲಿ ದ್ವಿಗುಣಗೊಂಡಿದ್ದು, ಮೇ 21 ರ ವೇಳೆಗೆ 182ಕ್ಕೆ ತಲುಪಿದೆ. ಹಾಗೆ 59 ವರ್ಷ ಓರ್ವ ಹಾಗೂ 64 ವರ್ಷದ ವ್ಯಕ್ತಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. ಹಲವು ದಿನಗಳಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದ 59 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಗೆ ಮತ್ತೋರ್ವ ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಅವರು ಮೃತಪಟ್ಟ ಬಳಿಕ ಕೋವಿಡ್ ಇರುವುದು ದೃಢಪಟ್ಟಿದೆ.
ಇನ್ನು ಕೇರಳದ ಕೊಟ್ಟಾಯಂನಲ್ಲಿ 57, ಎರ್ನಾಕುಲಂನಲ್ಲಿ 34, ತಿರುವನಂತಪುರಂನಲ್ಲಿ 30 ಸಕ್ರೀಯ ಪ್ರಕರಣಗಳಿವೆ ಎಂದು ವರದಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications