Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೆಂಗಳೂರಲ್ಲಿ ಕೋವಿಡ್ ಜೊತೆ ಡೆಂಗ್ಯೂ ಆತಂಕ: ಬೆಳಗಾವಿಯಲ್ಲೂ ಸೋಂಕು ದೃಢ!!
ಏಷ್ಯಾದಲ್ಲಿ ಹರಡುತ್ತಿರುವ ಹೊಸ ಕೋವಿಡ್ ರೂಪಾಂತರವು ಈಗ ಭಾರತದಲ್ಲೂ ಕಾಡುವ ಭೀತಿ ಎದುರಾಗಿದೆ. ಅದರಲ್ಲೂ ಈಗ ಸಕ್ರಿಯ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿರುವುದು ಸರ್ಕಾರಗಳು ಮತ್ತೆ ಕೋವಿಡ್ ಕುರಿತಾಗಿ ಕಾರ್ಯ ಪ್ರವೃತ್ತರಾಗುವಂತೆ ಮಾಡಿದೆ. ಈ ಕರ್ನಾಟಕದಲ್ಲೂ ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆ ಕಂಡಿದೆ.
ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಪ್ರಕರಣಗಳಿವೆ ಆರೋಗ್ಯ ಇಲಾಖೆ ತಿಳಿಸಿದೆ. ಈ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಸಿಂಹಪಾಲು ಇದೆ. ಅಲ್ಲಿ 32 ಪ್ರಕರಣ ದಾಖಲಾಗಿದ್ದರೆ ಇನ್ನುಳಿದಂತೆ ಬೇರೆ ಜಿಲ್ಲೆಯಲ್ಲಿ ವರದಿಯಾಗಿದೆ. ಹಾಗೆ ರಾಜ್ಯದಲ್ಲಿ ಕೋವಿಡ್ ಕುರಿತಾಗಿ ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಸಂಪೂರ್ಣ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್ ಏರಿಕೆಯಾದ ಬೆನ್ನಲ್ಲೆ ನಿನ್ನೆ ಆರೋಗ್ಯ ಇಲಾಖೆ ಹಲವು ಸೂಚನೆಗಳನ್ನು ಹೊರಡಿಸಿದೆ. ಗರ್ಭಿಣಿಯರು, ಮಕ್ಕಳು, ಸಹ-ಅಸ್ವಸ್ಥತೆ ಹೊಂದಿರುವ ಜನರು, ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು ಜನದಟ್ಟಣೆಯ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಹಾಗೆ ನಾಗರಿಕರು ಕೋವಿಡ್ ಸೂಕ್ತ ನಡವಳಿಯನ್ನು (CAB- Covid-appropriate behaviour) ಅನುಸರಿಸಲು ಸೂಚಿಸಲಾಗಿದೆ.
ಕಳೆದ 20 ದಿನಗಳಲ್ಲಿ ಕೋವಿಡ್ ಸಂಖ್ಯೆಯಲ್ಲಿ ಏರಿಕೆಯನ್ನು ಸರ್ಕಾರವು ಗಮನಿಸಿದೆ. 2025ರಲ್ಲಿ ಕೋವಿಡ್ ಸಂಬಂಧಿ ಸಾವು ಸಂಭವಿಸಿಲ್ಲ. ಆದರೂ ಈ ಕೋವಿಡ್ ವೈರಸ್ ಮತ್ತಷ್ಟು ಹರಡದಂತೆ ಕ್ರಮ ವಹಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ಎಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯ ಎಂದು ಇಲಾಖೆ ತಿಳಿಸಿದೆ.
ಹೀಗಾಗಿ ತೀವ್ರ ಉಸಿರಾಟದ ಸಮಸ್ಯೆಯಂತಹ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳು ಸಕಾಲಿಕ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಕಲು ಮತ್ತು ಸಂಭಾವ್ಯ ಕೋವಿಡ್ ಹರಡುವಿಕೆಯನ್ನು ತಡೆಯಲು ಪರೀಕ್ಷೆಗೆ ಒಳಗಾಗುವಂತೆ ಸೂಚಿಸಲಾಗಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆಯ 9 ತಿಂಗಳ ಮಗುವಿಗೆ ಕೋವಿಡ್ -19 ದೃಢಪಟ್ಟಿದೆ. ಮೇ 22ರಂದು ನಡೆಸಲಾದ ಪರೀಕ್ಷೆಯಲ್ಲಿ ಮಗುವಿಗೆ ಕೋವಿಡ್ ಇರುವುದು ದೃಢವಾಗಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಗು ಈಗ ಚೇತರಿಸಿಕೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ್ ಗುಪ್ತಾ ದೃಢಪಡಿಸಿದ್ದಾರೆ.
ಬೆಳಗಾವಿಯಲ್ಲಿ ಗರ್ಭಿಣಿಯಲ್ಲಿ ಸೋಂಕು ದೃಢ
ಬೆಳಗಾವಿಯಲ್ಲಿ 25 ವರ್ಷದ ಗರ್ಭಿಣಿಯಲ್ಲಿ ಕೋವಿಡ್ ದೃಢಪಟ್ಟಿದೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಲ್ಲಿ ಕೋವಿಡ್ ದೃಢವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಏರಿಕಯಾಗಿದ್ದು, ಇದು ಬೆಳಗಾವಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ 56ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ.
ಬೆಂಗಳೂರಲ್ಲಿ ಡಂಗ್ಯೂ ಆತಂಕ
ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಮಹಾನಗರಿಯಲ್ಲಿ ಡೆಂಗ್ಯೂ ಆತಂಕ ಎದುರಾಗಲಿದೆ. ಬೆಂಗಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆಯ ನಡುವೆಯೂ ಡೆಂಗ್ಯೂ ಪ್ರಕರಣಗಳು ಈ ಸಮಯದಲ್ಲಿ ಏರಿಯಾಗುವುದು ನೋಡಬಹುದು. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಟ್ಟು ಮರಿ ಮಾಡಲು ಮುಂದಾಗುತ್ತವೆ. ಈ ಸಮಯ ಅವುಗಳ ಸಂತಾನೋತ್ಪತ್ತಿಗೆ ಸೂಕ್ತ ಕಾಲವಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಲ್ಲಾ ಆಸ್ಪತ್ರೆಗಳಲ್ಲು ಶಿತ, ಜ್ವರ, ನ್ಯುಮೋನಿಯಾದಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈಗ ಕೋವಿಡ್ ಜೊತೆಗೆ ಡೆಂಗ್ಯೂ ಕೂಡ ಕಾಡುವ ಭೀತಿ ಎದುರಾಗಿದೆ.
ಸದ್ಯ ಬೆಂಗಳೂರು ಒಂದರಲ್ಲೇ ಈಗ ಸಕ್ರಿಯ ಡೆಂಗ್ಯೂ ಪ್ರಕರಣಗಳು 500ಕ್ಕೂ ಹೆಚ್ಚಿವೆ ಎಂದು ಅಂದಾಜಿದಲಾಗಿದೆ. ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟಿ ಏರಿಕೆಯಾಗಬಹುದು.



Click it and Unblock the Notifications