Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಜೋಳದ ರೊಟ್ಟಿ ತಿಂದ್ರೆ ಮಧುಮೇಹ ನಿಯಂತ್ರಣದ ಜೊತೆಗೆ ದೊರೆಯುತ್ತೆಈ 8 ಪ್ರಯೋಜನಗಳು
ಎಲ್ಲಕ್ಕಿಂತ ದೊಡ್ಡ ಸಂಪತ್ತು ಯಾವುದೆಂದರೆ ಅದು ಆರೋಗ್ಯ, ಸಂಪತ್ತು ಹುಡುಕುವುದು ಹೇಗೆಂದರೆ ಆಹಾರದಲ್ಲಿ. ನಮ್ಮ ಆಹಾರಕ್ರಮ ಆರೋಗ್ಯಕರವಾಗಿದ್ದರೆ ನಮ್ಮನ್ನು ಕಾಡುತ್ತಿರುವ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು. ಇಲ್ಲಿ ಜೋಳದ ರೊಟ್ಟಿ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿಯಾಗಿದೆ ಎಂಬುವುದರ ಬಗ್ಗೆ ಹೇಳಿದ್ದೇವೆ.
ಸಕ್ಕರೆ ಕಾಯಿಲೆ ತಡೆಗಟ್ಟುತ್ತದೆ: ಈಗ ಸಕ್ಕರೆ ಕಾಯಿಲೆ ಮನೆಯಲ್ಲಿ ಒಬ್ಬರಿಗಾದರೂ ಇರುತ್ತದೆ. ಕಳೆದ 2 ದಶಕಗಳಿಂದ ಮಧುಮೇಹದ ಸಮಸ್ಯೆ ತುಂಬಾನೇ ಹೆಚ್ಚಾಗಿದೆ. ಈ ಜೋಳದ ರೊಟ್ಟಿ ರುಚಿಕರವಾದ ಆಹಾರವೂ ಆಗಿದೆ. ಇದರಲ್ಲು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ಮಧುಮೇಹಿಗಳು ಜೋಳ ತಿನ್ನುವುದರಿಂದ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿ.

ಜೋಳ ತಿಂದರೆ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು: ಜೋಳ ತಿಂದವ ತೋಳ ಎಂದು ಹೇಳುವದನ್ನು ಕೇಳಿರಬಹುದು. ಜೋಳದ ರೊಟ್ಟಿಯಲ್ಲಿ ರಂಜಕ ಹಾಗೂ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು, ಅಲ್ಲದೆ ಜೋಳದ ರೊಟ್ಟಿ ಸೇವಿಸುವವರ ಹಲ್ಲಿನ ಆರೋಗ್ಯ ಕೂಡ ತುಂಬಾ ಚೆನ್ನಾಗಿರುತ್ತದೆ.
ಕಿಡ್ನಿಯ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಿದೆ
ಜೋಳ ಚಯಪಚಯ ಕ್ರಿಯೆಗೆ ತುಂಬಾನೇ ಒಳ್ಳೆಯದು, ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿ ನಡೆಯಲು ಸಹಕಾರಿ ಅಲ್ಲದೆ ಕಿಡ್ನಿಯ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.
ಮಲಬದ್ಧತೆ ಸಮಸ್ಯೆ ಇದ್ದವರಿಗಂತೂ ಜೋಳದ ರೊಟ್ಟಿ ತುಂಬಾನೇ ಒಳ್ಳೆಯದು
ಜೋಳದ ರೊಟ್ಟಿಯಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ತುಂಬಾ ಚೆನ್ನಾಗಿ ನಡೆಯುತ್ತದೆ, ಹೀಗಾಗಿ ಗ್ಯಾಸ್ಟ್ರಿಕ್, ಮಲಬದ್ಧತೆ ಸಮಸ್ಯೆ ತಡೆಗಟ್ಟಲು ತುಂಬಾನೇ ಸಹಕಾರಿಯಾಗಿದೆ. ಇನ್ನು ಅಸಿಡಿಟಿ ಸಮಸ್ಯೆ ಇರುವವರಿಗೂ ಕೂಡ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕರುಳಿನಲ್ಲಿ ಆರೋಗ್ಯಕರ ಬ್ಯಾಕ್ಟಿರಿಯಾ ಹೆಚ್ಚಾಗುವಂತೆ ಮಾಡುತ್ತದೆ ಹಾಗಾಗಿ ಹೊಟ್ಟೆಯ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಮೈ ತೂಕ ನಿಯಂತ್ರಣದಲ್ಲಿರುತ್ತದೆ
ಜೋಳದ ರೊಟ್ಟಿ ದಿನಾ ತಿನ್ನುವವರು ಒಬೆಸಿಟಿ ಮೈ ಹೊಂದಿರುವುದಿಲ್ಲ, ಜೋಳದ ರೊಟ್ಟಿ ಮೈ ತೂಕ ನಿಯಂತ್ರಣದಲ್ಲಿಡಲು ತುಂಬಾನೇ ಸಹಕಾರಿಯಾಗಿದೆ. ಜೋಳದ ರೊಟ್ಟಿ ಮೈ ಫಿಟ್ನಸ್ ಕಾಪಾಡುತ್ತದೆ, ಮೈಗೆ ಶಕ್ತಿಯನ್ನು ತುಂಬುತ್ತದೆ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಜೋಳವು ಹೃದಯ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು, ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಸಹಕಾರಿ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ದೇಹವು ಪೌಷ್ಠಿಕಾಂಶ
ಜೋಳ ತಿನ್ನುವುದರಿಂದ ದೇಹವು ಪೌಷ್ಠಿಕಾಂಶ ಹೀರಿಕೊಳ್ಳಲು ಸಹಕಾರಿ. ಅಲ್ಲದೆ ಕಬ್ಬಿಣದ ಕೊರತೆ ಇದ್ದರೆ ಅದನ್ನು ಹೋಗಲಾಡಿಸಲು ಸಹಕಾರಿ. ರಕ್ತ ಹೀನತೆ ಸಮಸ್ಯೆ ಇರುವವರು ಸೊಪ್ಪು, ಜೋಳದ ರೊಟ್ಟಿ ಈ ಬಗೆಯ ಆಹಾರ ಸೇವನೆ ಒಳ್ಳೆಯದು.
ರೋಗ ನಿರೋಧಕ ಶಕ್ತಿ ವೃದ್ಧಿಸುವುದು
ಜೋಳ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸಲು ತುಂಬಾನೇ ಸಹಕಾರಿ. ಅಲ್ಲದೆ ಇದು ಗ್ಲುಟೀನ್ ಮುಕ್ತ ಆಹಾರವಾಗಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

