Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಡಯಾಬಿಟಿಸ್ ನ 10 ಪ್ರಮುಖ ಲಕ್ಷಣಗಳು

ಡಯಾಬಿಟಿಸ್ ಮೊದಲ ಹಂತದಲ್ಲಿ ಕಂಡು ಹಿಡಿದರೆ ಸುಲಭದಲ್ಲಿ ನಿಯಂತ್ರಣದಲ್ಲಿಡಬಹುದು. ಆದರೆ ಸಾಕಷ್ಟು ಜನರು ಅದರ ಮೇಲೆ ಅಷ್ಟು ಗಮನ ಹರಿಸದೆ ನಂತರ ಕಷ್ಟಪಡುತ್ತಾರೆ. ಆದರ ಬದಲು ಮೊದಲ ಹಂತದಲ್ಲಿಯೆ ಡಯಾಬಿಟಿಸ್ ಕಾಣಿಸಿ ಕೊಂಡಾಗ ಪತ್ತೆ ಹಚ್ಚುವುದು ಹೇಗೆ ಎಂಬ ವಿವರಗಳನ್ನು ಇಲ್ಲಿ ನೀಡಲಾಗಿದೆ ನೋಡಿ.
ಮಧುಮೇಹದ ಲಕ್ಷಣಗಳು:
1. ಪದೇ-ಪದೇ ಮೂತ್ರವಿಸರ್ಜನೆ: ಪದೇ-ಪದೇ ಮೂತ್ರ ವಿಸರ್ಜನೆ ಉಂಟಾಗುವುದು. ದೇಹದಲ್ಲಿ ನೀರಿನಲ್ಲಿ ಕಡಿಮೆಯಾಗುವುದರಿಂದ ಆಗಾಗ ಬಾಯಾರಿಕೆಯಾಗುತ್ತದೆ.
2. ತುಂಬಾ ಹಸಿವು: ದೇಹದಲ್ಲಿ ಇನ್ಸುಲಿನ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗುವುದರಿಂದ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಶಕ್ತಿ ಸಾಕಾಗುವುದಿಲ್ಲ. ದೇಹದಲ್ಲಿ ಶಕ್ತಿ ಕಡಿಮೆಯಾದಾಗ ಹೊಟ್ಟೆ ಹಸಿವು ಜಾಸ್ತಿಯಾಗುತ್ತದೆ.
3. ತೂಕ ಕಡಿಮೆಯಾಗುವುದು: ಇದ್ದಕ್ಕಿದ್ದ ಹಾಗೇ ತೂಕ ಕಡಿಮೆಯಾಗುತ್ತದೆ. ದೇಹದಲ್ಲಿ ಗ್ಲೂಕೋಸ್ ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿ ಮೂತ್ರ ವಿಸರ್ಜನೆ ಜಾಸ್ತಿಯಾಗುವುದರಿಂದ ದೇಹದಲ್ಲಿರುವ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ತೂಕ ಇಳಿಮುಖವಾಗುವುದು.
4.ತಲೆಸುತ್ತು: ದೇಹದಲ್ಲಿ ಶಕ್ತಿಯು ಕಡಿಮೆಯಾಗುವುದರಿಂದ ತಲೆಸುತ್ತು ಕಾಣಿಸಿಕೊಳ್ಳುತ್ತದೆ.
5. ಕಣ್ಣು ಮಬ್ಬಾಗುವುದು: ಗ್ಲೂಕೋಸ್ ಪ್ರಮಾಣ ಹೆಚ್ಚಾದಾಗ ರಕ್ತಕಣದಲ್ಲಿ ಹಾನಿ ಉಂಟಾಗುತ್ತದೆ. ಇದರಿಂದಾಗಿ ಕಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಕಣ್ಣು ಮಬ್ಬಾಗುವುದು. ಸರಿಯಾದ ಚಿಕಿತ್ಸೆ ಇಲ್ಲದಿದ್ದರೆ ಕುರುಡುತನ ಬರುತ್ತದೆ.
6. ಗಾಯ ಒಣಗದಿರುವುದು: ಮಧುಮೇಹ ಕಾಯಿಲೆ ಇದ್ದರೆ ಸಣ್ಣ ಗಾಯವಾದರೆ ಒಣಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ.
7. ಒಣ ತ್ವಚೆ: ಒಣ ತ್ವಚೆ ಮತ್ತು ತ್ವಚೆಯಲ್ಲಿ ತುರಿಕೆ ಉಂಟಾಗುತ್ತದೆ.
8. ಕೈಕಾಲಿನಲ್ಲಿ ಉರಿ: ಸಕ್ಕರೆ ಅಂಶ ಹೆಚ್ಚಾದರೆ ರಕ್ತಕಣಗಳಲ್ಲಿ ಹಾನಿ ಉಂಟಾಗುತ್ತದೆ. ಇದರಿಂದ ಕೈಕಾಲುಗಳಲ್ಲಿ ಸ್ಪರ್ಶ ಜ್ಞಾನ ಕಡಿಮೆಯಾಗಿ ಉರಿ, ನೋವು ಕಾಣಿಸಿಕೊಳ್ಳುತ್ತದೆ.
9. ಸೋಂಕು: ಮಧುಮೇಹಿಗಳಿಗೆ ಬ್ಲೇಡ್ ತಾಗಿದರೆ, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಉಂಟಾದರೆ ಬೇಗನೆ ಗುಣಮುಖವಾಗುವುದಿಲ್ಲ.
10. ತಲೆನೋವು: ವಿಪರೀತ ತಲೆನೋವು ಕಾಣಿಸಿಕೊಳ್ಳುತ್ತದೆ.
ಏಡ್ಸ್, ಕ್ಯಾನ್ಸರ್ ಗಿಂತ ಮಧುಮೇಹದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚು. ಆದ್ದರಿಂದ ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಚಿಕಿತ್ಸೆ ಮಾಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
