Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಈ ವಿಧಾನದಿಂದ ಮಧುಮೇಹ ತಡೆಯಬಹುದು

ಡಯಾಬಿಟಿಸ್ ಬಂದರೆ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗುವುದು. ಡಯಾಬಿಟಿಸ್‌ನಲ್ಲಿ ಎರಡು ರೀತಿಯ ಡಯಾಬಿಟಿಸ್ ಇದೆ. ಒಂದು ಮಕ್ಕಳಲ್ಲಿ ಕಂಡುಬರುವ ಡಯಬಿಟಿಸ್. ಇದು ಬಂದರೆ ಮಕ್ಕಳ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯಾಗುವುದಿಲ್ಲ. ಇದು ಬಂದರೆ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳಬೇಕೆ ಹೊರತು ಗುಣಪಡಿಸಲು ಸಾಧ್ಯವಿಲ್ಲ.
ಟೈಪ್ 2 ಅನ್ನುವುದು ಮತ್ತೊಂದು ವಿಧದ ಡಯಾಬಿಟಿಸ್ ಆಗಿದ್ದು ಇದು ಮಧ್ಯವಯಸ್ಕರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ಜೀವನ ಶೈಲಿ ಮತ್ತು ಹಾರ್ಮೋನ್‌ಗಳ ವ್ಯತ್ಯಾಸದಿಂದ ಉಂಟಾಗುತ್ತದೆ. ದೇಹದಲ್ಲಿ ಕೊಬ್ಬಿನಂಶ ಹೆಚ್ಚಾದಾಗ ದೇಹ ಗ್ಲೂಕೋಸ್ ಅನ್ನು ಹೀರಿಕೊಳ್ಳುವ ಪ್ರಮಾಣ ಕಡಿಮೆಯಾಗುತ್ತದೆ. ಆಗ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗುತ್ತದೆ. ಈ ರೀತಿಯ ಮಧುಮೇಹವನ್ನು ಮೊದಲನೆ ಹಂತದಲ್ಲಿಯೆ ಗುರುತಿಸಿದರೆ ಸಂಪೂರ್ಣವಾಗಿ ಹತೋಟಿಯಲ್ಲಿಡಬಹುದು.
ಟೈಪ್ 2 ಡಯಾಬಿಟಿಸ್ ಬಗ್ಗೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
1. ರಕ್ತದಲ್ಲಿ ಸಕ್ಕರೆ ಅಂಶ 120 ದಾಟಿದ ಕೂಡಲೆ ಮಧುಮೇಹವಿದೆ ಎಂದು ಹೇಳಲು ಸಾಧ್ಯವಿಲ್ಲ. ಈ ಸಮಯದಲ್ಲಿ ವೈದ್ಯರ ಹತ್ತಿರ ತಪಾಸಣೆ ಮಾಡಿ ಮಧುಮೇಹ ಇದೆಯೇ ಎಂದು ಖಚಿತ ಪಡಿಸಿಕೊಳ್ಳಬೇಕು.
2. ಮೊದಲ ಹಂತದಲ್ಲಿಯೆ ಪತ್ತೆ ಡಯಟ್ ಮತ್ತು ವ್ಯಾಯಾಮ ಮಾಡಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು. ಕ್ಯಾಲೋರಿ ಹೆಚ್ಚಿರುವ ಆಹಾರವನ್ನು ತಿನ್ನಬಾರದು. ನಾರಿನಂಶ ಅಧಿಕವಿರುವ ಆಹಾರವನ್ನು ಹೆಚ್ಚಾಗಿ ತಿನ್ನಬೇಕು. ರೀತಿ ಮಾಡಿದರೆ ದೇಹದಲ್ಲಿ ಸಕ್ಕರೆ ಅಂಶ ಸಾಮಾನ್ಯವಾದ ಪ್ರಮಾಣದಲ್ಲಿರುತ್ತದೆ.
3. ಮಧುಮೇಹ ಕಾಯಿಲೆ ಬಂದರೆ ಕಡ್ಡಾಯವಾಗಿ ವ್ಯಾಯಾಮ ಮಾಡಬೇಕು. ಪ್ರತಿನಿತ್ಯ ನಡೆಯುವ ಅಥವಾ ಓಡುವ ವ್ಯಾಯಾಮ ಮಾಡಬೇಕು. ಮಧುಮೇಹ ವಂಶಪಾರಂಪರ್ಯವಾಗಿ ಕೂಡ ಬರಬಹುದು, ಆದ್ದರಿಂದ 30 ವಯಸ್ಸು ದಾಟಿದವರು ಪ್ರತಿನಿತ್ಯ ವ್ಯಾಯಾಮ ಮಾಡಿದರೆ ಮಧುಮೇಹ ಬರುವುದನ್ನು ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
