Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮಧುಮೇಹಿಗಳ ಆರೋಗ್ಯ ಹೆಚ್ಚಿಸುವ 8 ಆಹಾರಗಳು
ಮಧುಮೇಹಿಗಳಿಗೆ ಎಲ್ಲಾ ಬಗೆಯ ತರಕಾರಿ ಮತ್ತು ಹಣ್ಣುಗಳನ್ನು ತಿನ್ನಲು ಸಾಧ್ಯವಿಲ್ಲ. ಸಿಹಿ ಇರುವ ಹಣ್ಣುಗಳು, ಕ್ಯಾರೆಟ್, ಬೀಟ್ ರೂಟ್ ನಂತಹ ಹಣ್ಣುಗಳನ್ನು ತಿಂದರೆ ಮಧುಮೇಹ ಹೆಚ್ಚಾಗುವುದು. ಹಾಗಂತ ಮಧುಮೇಹಿಗಳು ಬರೀ ಪಥ್ಯದ ಊಟವನ್ನು ಮಾಡಬೇಕಾಗಿಲ್ಲ. ಏಕೆಂದರೆ ಕೆಲವು ಆಹಾರಗಳಿವೆ ಅವುಗಳನ್ನು ತಿಂದರೆ ದೇಹದಲ್ಲಿ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿವೆ.
ಈ ಆಹಾರಗಳನ್ನು ತಿನ್ನಲು ಎಲ್ಲರೂ ಇಷ್ಟಪಡುವುದಿಲ್ಲ, ಆದರೆ ಈ ಆಹಾರಗಳು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಮಧುಮೇಹಿಗಳು ಈ ಆಹಾರಗಳನ್ನು ತಿಂದರೆ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

1.ಹಾಗಲಕಾಯಿ
ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ತಯರಿಸಿದ ಪಾದಾರ್ಥವನ್ನು ಸೇವಿಸಿ. ಬೆಳಗ್ಗೆ ಒಂದು ಲೋಟ ಹಾಗಲಕಾಯ ಜ್ಯೂಸ್ ಕುಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

2. ಮೆಂತೆ
ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಮೆಂತೆ ತುಂಬಾ ಸಹಕಾರಿಯಾಗಿದೆ. ಇದು ದೇಹದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಡಿಮೆ ಮಾಡಿ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

3. ಬೆಂಡೆಕಾಯಿ
ಇದರಲ್ಲಿರುವ ದ್ರವ ಮಧುಮೇಹವನ್ನು ನಿಯಂತ್ರಣ ಮಾಡುವಲ್ಲಿ ತುಂಬಾ ಸಹಕಾರಿಯಾಗಿದೆ. ಬೆಂಡೆಕಾಯಿಯ ತುದಿ ಮುರಿದು ಅದರ ದ್ರವವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಬೆಳಗ್ಗೆ ಎದ್ದು ಆ ನೀರನ್ನು ಕುಡಿಯಬೇಕು. ಈ ರೀತಿ ಮಾಡಿದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ಯಾವುದೇ ಇನ್ಸುಲಿನ್ ಚುಚ್ಚು ಮದ್ದಿನ ಅಗತ್ಯ ಕೂಡ ಕಂಡು ಬರುವುದಿಲ್ಲ.

4. ಸೋರೆಕಾಯಿ
ಇದರ ಜ್ಯೂಸ್ ಬೆಳಗ್ಗೆ ಕುಡಿದರೆ ಮಧುಮೇಹವನ್ನು ನಿಂತ್ರಣದಲ್ಲಿಡುತ್ತದೆ ಹಾಗೂ ದೇಹದಲ್ಲಿರುವ ಅಧಿಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಲೆಟ್ಯೂಸೆ(lettuce)
ಇದರಲ್ಲಿ ಅಧಿಕ ನಾರಿನಂಶವಿದ್ದು ದೇಹದಲ್ಲಿ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರದಲ್ಲಿಡುತ್ತದೆ. ಆದ್ದರಿಂದ ಇದರಿಂದ ಖಾದ್ಯವನ್ನು ತಯಾರಿಸಿ ತಿನ್ನಿ.

6. ಹೂಕೋಸು
ಇದರಲ್ಲಿ ಸಿಹಿ ಅಂಶವಿರುವುದಿಲ್ಲ. ಆದ್ದರಿಂದ ಹೂಕೋಸಿನ ಅಡುಗೆಯನ್ನು ಮಧುಮೇಹಿಗಳು ತಿನ್ನಬಹುದು.

7. ಕುಂಬಳಕಾಯಿ
ಕುಂಬಳಕಾಯಿ ಸಿಹಿ ಇರವುದರಿಂದ ಇದನ್ನು ಮಧುಮೇಹಿಗಳು ತಿನ್ನಬಾರದೆಂದು ಯೋಚಿಸುತ್ತೇವೆ. ಆದರೆ ಕುಂಬಳಕಾಯಿ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ ಹಾಗೂ ಆರೋಗ್ಯಕ್ಕೂ ಒಳ್ಳೆಯದು.

8. ಬೀನ್ಸ್
ಬೀನ್ಸ್ ಮಧುಮೇಹಿಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹದಲ್ಲಿ ಇನ್ಸುಲಿನ್ ನ ಉತ್ಪತ್ತಿಯನ್ನು ನಿಯಂತ್ರಣದಲ್ಲಿಡುತ್ತದೆ.



Click it and Unblock the Notifications
