Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ವಯಸ್ಸು 30 ದಾಟಿದರೆ ಮಧುಮೇಹ ಪರೀಕ್ಷೆ ಮಾಡಿಸಿ!

ನಮ್ಮ ಬದಲಾಗಿರುವ ಜೀವನ ಶೈಲಿಗಳು, ಮಾನಸಿಕ ಒತ್ತಡ, ಪರಿಸರ ಮಾಲಿನ್ಯ, ಆರೋಗ್ಯಕರವಲ್ಲದ ಆಹಾರ ಪದ್ಧತಿಗಳು ಚಿಕ್ಕ ಪ್ರಾಯದಲ್ಲಿಯೇ ನಮ್ಮನ್ನು ರೋಗಿಗಳನ್ನಾಗಿ ಮಾಡುತ್ತಿದೆ. ಈ ರೀತಿ ಉಂಟಾಗಲು ಮುಖ್ಯ ಕಾರಣ ನಮ್ಮ ಜೀವನ ಶೈಲಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ಜೀವನ ಶೈಲಿ ಮಧುಮೇಹ ತರುವಲ್ಲಿ ಹೇಗೆ ಕಾರಣವಾಗುತ್ತದೆ ಎಂದು ನೋಡೋಣ ಬನ್ನಿ.
ಕೂತಲ್ಲೇ ಕೆಲಸ: ಈಗ ಪ್ರತಿಯೊಂದು ಕೆಲಸ ಕಾರ್ಯಗಳು ಕಂಪ್ಯೂಟರ್ ಮುಖಾಂತರವೇ ನಡೆಯುತ್ತಿವೆ. ಬೆಳಿಗ್ಗೆ ಕಂಪ್ಯೂಟರ್ ಎದುರು ಕುಳಿತರೆ ಏಳೋದು ರಾತ್ರಿನೇ. ಇದರಿಂದ ದೇಹಕ್ಕೆ ಯಾವುದೇ ವ್ಯಾಯಾಮವಿರುವುದಿಲ್ಲ. ಕುಳಿತುಕೊಂಡೇ ಮಾಡುವ ಕೆಲಸ ಇರುವವರಿಗೆ ವಾಕಿಂಗ್ ಅಥವಾ ಮೆಟ್ಟಿಲೇರುವುದು... ಇಂಥವೆಲ್ಲ ಬೇಕೇ ಬೇಕು. ಕುಳಿತೇ ಕೆಲಸ ಮಾಡುವವರು ಒಂದು ಗಂಟೆಗೊಮ್ಮೆಯಾದರೂ ಎದ್ದು ಅತ್ತಿತ್ತ ಹೋಗಿ, ನೀರು ಕುಡಿದು ಬಂದರೆ ಒಳಿತು. ಕೂತಲ್ಲೇ ಕೆಲಸ ಮಾಡುವುದರಿಂದ ಬೊಜ್ಜು ಹೆಚ್ಚುವುದು. ಈ ರೀತಿ ಮಾಡಿದರೆ ಮಧುಮೇಹ ಕಾಯಿಲೆಯನ್ನೂ ಕೂಡ ತಡೆಯಬಹುದು.
ಒತ್ತಡ: ಟಾರ್ಗೆಟ್, ಸ್ಪರ್ಧೆ ಅಂತ ನಮ್ಮ ಜೀವನನದ ಸಾಕಷ್ಟು ಭಾಗವನ್ನು ಒತ್ತಡದಲ್ಲಿಯೇ ಕಳಿಯುತ್ತೇವೆ. ಹೊರಗಿನಿಂದಲೂ ಬೆಲೆ ಏರಿಕೆ, ಸಂಸಾರ ತಾಪ್ರತಯಗಳು, ಕಚೇರಿಯಲ್ಲೂ ಮಿತಿ ಮೀರಿದ ಕೆಲಸ ಇದರಿಂದ ಮಾನಸಿಕ ಒತ್ತಡ ಹೆಚ್ಚಾಗಿ, ನೇರವಾಗಿ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ ಮಾತ್ರವಲ್ಲದೆ, ಮಧುಮೇಹ ಹೆಚ್ಚಳಕ್ಕೂ ಕಾರಣವಾಗಿದೆ.
ಕುರುಕಲು ತಿಂಡಿ: ಟ್ರೆಂಡ್ ನ ಹೆಸರಿನಲ್ಲಿ ಪಿಜ್ಜಾ, ಪಾಸ್ತಾ, ನೂಡಲ್ಸ್, ಹೀಗೆ ಅಧಿಕ ಪೋಷಕಾಂಶಗಳಿಲ್ಲದ ಆಹಾರಕ್ಕೆ ಬಲಿಯಾಗುತ್ತಿದ್ದೇವೆ. ಬಾಯಿಗೆ ರುಚಿ ಬೇಕೆಂದು ಕುರುಕಲು ತಿಂಡಿ ತಿಂದರೆ ದೇಹದ ಆರೋಗ್ಯ ಬೇಗನೆ ಹಾಳಾಗುತ್ತದೆ. ಆದ್ದರಿಂದ ಆದಷ್ಟು ಆರೋಗ್ಯಕರ ಆಹಾರಕ್ರಮ ಪಾಲಿಸುವುದು ಒಳ್ಳೆಯದು.
ಅಲ್ಲದೆ ಮಧುಮೇಹ ಬರದಂತೆ ತಡೆಯಲು ಈ ಕೆಳಗಿನ ಮುನ್ನಚ್ಚರಿಕೆ ಕ್ರಮ ಅನುಸರಿಸುವುದು ಒಳ್ಳೆಯದು.
* ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಂಡು, ಡಯಾಬಿಟಿಸ್ ಇದೆಯೇ ಎಂದು ತಿಳಿದುಕೊಳ್ಳಬೇಕು. ಡಯಾಬಿಟಿಸ್ ಆರಂಭವಾದಾಗಲೇ ಇದು ಪತ್ತೆಯಾದರೆ, ಅದನ್ನು ಗುಣಪಡಿಸುವುದು ಸುಲಭ. ಇಲ್ಲದಿದ್ದರೆ ಡಯಾಬಿಟಿಸ್ ಅನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಿಲ್ಲ.
* ತುಂಬಾ ತೂಕ ಇರುವವರು ತೂಕ ಇಳಿಸಿಕೊಳ್ಳಬೇಕು. ಬೊಜ್ಜು ಕಡಿಮೆಯಾದರೆ ಡಯಾಬಿಟಿಸ್ ಬರುವ ಸಾಧ್ಯೆತೆ ಕೂಡ ಕಡಿಮೆಯಾಗುತ್ತದೆ. ಜೀವನಶೈಲಿ - ಆಹಾರ ಸೇವನೆಯಲ್ಲಿ ಬದಲಾವಣೆ ಮತ್ತು ನಿಯಮಿತ ವ್ಯಾಯಾಮ, ಸೊಪ್ಪು-ತರಕಾರಿ, ದವಸ ಧಾನ್ಯದ ಆಹಾರಗಳನ್ನು ಧಾರಾಳವಾಗಿ ಸೇವಿಸಬೇಕು.
* ಕುರುಕಲು ತಿಂಡಿಯಿಂದ ದೂರ ಇರಬೇಕು.
* ದಿನಕ್ಕೆ ಕನಿಷ್ಠ ಅರ್ಧಗಂಟೆಯಂತೆ ಪ್ರತಿ ದಿನ ಅಥವಾ ವಾರದಲ್ಲಿ 5 ದಿನವಾದರೂ ವ್ಯಾಯಾಮ ಮಾಡಬೇಕು.
* ಸಾಧ್ಯವಿರುವಾಗಲೆಲ್ಲಾ ನಡೆಯಬೇಕು. ಲಿಫ್ಟ್ ಬಳಕೆಗೆ ಹೋಗಬಾರದು.
* ಮಾನಸಿಕ ಒತ್ತಡ ನಿವಾರಣೆಗಾಗಿ ಯೋಗ, ಪ್ರಾಣಯಾಮ ಅಥವಾ ಧ್ಯಾನ ಮಾಡಬೇಕು.
* ಕೆಟ್ಟ ಚಟಗಳಿಂದ ದೂರವಿರಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
