Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಮಧುಮೇಹ ನಿಯಂತ್ರಿಸುವಲ್ಲಿ ಸತು ಹೇಗೆ ಸಹಕಾರಿ?
ಸತು ದೇಹಕ್ಕೆ ಅಗತ್ಯವಾದ ಖನಿಜಾಂಶವಾಗಿದೆ. ಸತುವಿನಂಶ ಸರಿಯಾದ ಪ್ರಮಾಣದಲ್ಲಿ ಇಲ್ಲದಿದ್ದರೆ ದೇಹದ ಅಂಗಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸಿಲು ಸಾಧ್ಯವಿಲ್ಲ. ಸತುವಿನಂಶ ಕಡಿಮೆಯಿರುವ ಸಮಸ್ಯೆ ಸಸ್ಯಾಹಾರಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಏಕೆಂದರೆ ಸಾಕಷ್ಟು ತರಕಾರಿಗಳಲ್ಲಿ ಸತುವಿನಂಶವಿರುವುದಿಲ್ಲ. ಸತುವಿನಂಶ ಕಡಿಮೆಯಾದರೆ ಕೂದಲು ಬೇಗನೆ ಬೆಳ್ಳಗಾಗುವುದು, ಕೂದಲು ಉದುರುವುದು, ಬಕ್ಕ ತಲೆ ಈ ರೀತಿಯ ತೊಂದರೆಗಳು ಕಂಡು ಬರುತ್ತವೆ.
ಇತ್ತೀಚಿಕೆ ಮಧುಮೇಹ ಹಾಗೂ ದೇಹದಲ್ಲಿರುವ ಸತುವಿನಂಶದ ಪ್ರಮಾಣಕ್ಕೂ ಒಂದಕ್ಕೊಂದು ಸಂಬಂಧ ಇದೆ ಎಂಬ ಅಂಶ ಬೆಳಕಿಗೆ ಬಂದಿದೆ. ಮಧುಮೇಹ ವಂಶಪಾರಂಪರ್ಯವಾಗಿ ಬರಬಹುದು ಅಥವಾ ಅನಾರೋಗ್ಯಕರ ಜೀವಶೈಲಿಯಿಂದಾಗಿ ಬರಬಹುದು. ಈ ಮಧುಮೇಹ ಕಾಯಿಲೆ ಬಂದರೆ ಅದನ್ನು ನಿಯಂತ್ರಣದಲ್ಲಿಡಬಹುದು, ಅದರಲ್ಲೂ ದೇಹದಲ್ಲಿರುವ ಸತುವಿನಂಶ ಮಧುಮೇಹವನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ.

ಸತು ಮಧುಮೇಹವನ್ನು ನಿಯಂತ್ರಿಸುವಲ್ಲಿ ಹೇಗೆ ಸಹಕಾರಿಯಾಗಿದೆ ಎಂದು ಈ ಕೆಳಗ್ಗೆ ವಿವರಿಸಲಾಗಿದೆ:
* ಮಧುಮೇಹ ಹಾರ್ಮೋನ್ ಗಳ ತೊಂದರೆಯಿಂದ ಉಂಟಾಗುವ ಕಾಯಿಲೆಯಾಗಿದೆ. ದೇಹದಲ್ಲಿ ಹಾರ್ಮೋನ್ ಗಳನ್ನು ನಿಯಂತ್ರಣದಲ್ಲಿಡುವಲ್ಲಿ ಸತು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಸತು ಕಡಿಮೆಯೆಂದರೂ 300 ಹಾರ್ಮೋನ್ ಗಳ ಚಟುವಟಿಕೆಯನ್ನು ನಿಯಂತ್ರಣದಲ್ಲಿಡುವ ಕಾರ್ಯವನ್ನು ಮಾಡುತ್ತದೆ.
* ಇದು ದೇಹದಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ (glycemic index) ಅಂಶವನ್ನು ಅಭಿವೃದ್ಧಿ ಪಡಿಸುತ್ತದೆ. ಮಧುಮೇಹಿಗಳಲ್ಲಿ ಈ ಅಂಶ ಅಧಿಕವಾದರೂ ಕಷ್ಟ, ತುಂಬಾ ಕಡಿಮೆಯಾದರೂ ಕಷ್ಟ. ಸತು ಇದು ಸರಿ ಪ್ರಮಾಣದಲ್ಲಿರುವಂತೆ ಮಾಡಿ ದೇಹದಲ್ಲಿ ಗ್ಲೂಕೋಸ್ ಅಂಶವನ್ನು ಕಾಪಾಡಲು ಸಹಕಾರಿಯಾಗಿದೆ.
* ಮಧುಮೇಹ ಬಂದರೆ ರೋಗ ನಿರೋಧಕ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದರೆ ಸತುವಿನಂಶ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸಿ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.
* ಪುರುಷರಲ್ಲಿ ಮಧುಮೇಹ ತುಂಬಾ ಅಧಿಕವಾದರೆ ಲೈಂಗಿಕ ಶಕ್ತಿ ಕುಂದುತ್ತದೆ. ಸತುವಿನಂಶ ದೇಹದಲ್ಲಿ ಸಮಪ್ರಮಾಣದಲ್ಲಿದ್ದರೆ ಹೀಗಾಗದಂತೆ ತಡೆಯುತ್ತದೆ.
* ಮಧುಮೇಹ ತ್ವಚೆ ಮೇಲೆ ಕೂಡ ಚಿಕ್ಕದಾಗಿ ಪರಿಣಾಮ ಬೀರುತ್ತದೆ. ಸತುವಿನಂಶ ತ್ವಚೆ ಆರೋಗ್ಯ ಹಾಗೂ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications