For Quick Alerts
ALLOW NOTIFICATIONS  
For Daily Alerts

ಮುಳ್ಳುಮುಳ್ಳಾದ ಹಾಗಲಕಾಯಿ ಜ್ಯೂಸ್‌ನ ಜಬರ್ದಸ್ತ್ ಪವರ್

By Manu
|

ಸಾಮಾನ್ಯವಾಗಿ ತರಕಾರಿ ಅಂಗಡಿಗಳಲ್ಲಿ ಹಾಗಲಕಾಯಿ ಇರುವುದೇ ಇಲ್ಲ. ಒಂದು ವೇಳೆ ಇದ್ದರೆ ಅದಕ್ಕೆ ಗಿರಾಕಿಗಳು ಕೇರಳೀಯರಿದ್ದರೆ ಮಾತ್ರ. ಏಕೆಂದರೆ ನಮ್ಮ ಪೂರ್ವಾಗ್ರಹ ನಂಬಿಕೆಯ ಪ್ರಕಾರ ಇದು ಮಲಯಾಳಿಗಳ ಆಹಾರ, ಇದರ ಕಹಿ ಅವರಿಗೇ ಸರಿ! ಆದರೆ ಹಾಗಲಕಾಯಿಯ ವೈಜ್ಞಾನಿಕ ವಿವರಗಳು ಬೇರೆಯೇ ಕಥೆಯನ್ನು ಹೇಳುತ್ತವೆ.

ಟೈಪ್ 2 ನಂತಹ ಮಾರಕ ಮಧುಮೇಹವನ್ನು ಗುಣಪಡಿಸಲು ಸಮರ್ಥವಿರುವ ಸಿದ್ಧ ಆಹಾರವೆಂದರೆ ಅದು ಪ್ರಥಮವಾಗಿ ಹಾಗಲಕಾಯಿ, ಆದರೆ ಇದರ ಕಹಿರುಚಿಯನ್ನು ಸಹಿಸುವ ಮನಸ್ಸಾಗಬೇಕು ಅಷ್ಟೇ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಸೇವಿಸುವುದಕ್ಕಿಂತ ಹೆಚ್ಚು ಪರಿಣಾಮವನ್ನು ಅದರ ಜ್ಯೂಸ್ ಮಾಡಿಕೊಂಡು ಕುಡಿಯುವ ಮೂಲಕ ಪಡೆಯಬಹುದು. ಹಾಗಲಕಾಯಿ ಜ್ಯೂಸ್‌ನಲ್ಲಿದೆ 15 ಆರೋಗ್ಯಕರ ಪ್ರಯೋಜನಗಳು

Ayurvedic tips: Bitter Gourd Juice For Diabetes

ಆಯುರ್ವೇದದಲ್ಲೂ ಹಾಗಲಕಾಯಿಗೆ ತನ್ನದೇ ಆದ ವೈಶಿಷ್ಟ್ಯವಿದೆ. ಇಂದಿನ ವೈಜ್ಞಾನಿಕ ವಿಶ್ಲೇಷಣೆಗಳು ಸಹಾ ಇದನ್ನು ಖಾತರಿಪಡಿಸುತ್ತವೆ. ತನ್ನ ಕಹಿರುಚಿಯಿಂದಾಗಿ ಹೆಚ್ಚಿನವರ ಮೆಚ್ಚುಗೆಗೆ ಪಾತ್ರನಾಗದ ಈ ಮುಳ್ಳುಮುಳ್ಳಾದ ತರಕಾರಿ ನಿಜಕ್ಕೂ ಆರೋಗ್ಯವನ್ನು ವೃದ್ಧಿಸುವ ಅದ್ಭುತ ಪೋಷಕಾಂಶಗಳ ಆಗರವಾಗಿದೆ. ಅದರಲ್ಲೂ ಹಸಿಯಾಗಿ ಅಥವಾ ಜ್ಯೂಸ್ ಮಾಡಿಕೊಂಡು ಪ್ರತಿದಿನ ಬೆಳಿಗ್ಗೆ ಒಂದು ಲೋಟ ಕುಡಿದರೆ ಲಭ್ಯವಾಗುವ ಅಪಾರ ಪ್ರಯೋಜನಗಳಲ್ಲಿ ಪ್ರಮುಖವಾದ ಐದು ಪ್ರಯೋಜನಗಳನ್ನು ಇಲ್ಲಿ ವಿವರಿಸಲಾಗಿದೆ, ಮುಂದೆ ಓದಿ....

ಖಾಲಿಹೊಟ್ಟೆಗೆ ಒಂದು ಲೋಟ ಹಾಗಲಕಾಯಿಯ ಜ್ಯೂಸ್!

ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ momorcidin ಮತ್ತು charatin ಎಂಬ ವಿಶೇಷ ನಿವಾರಕಗಳು (anti-hyperglycemic compounds) ಕಾರಣವಾಗಿವೆ.

Ayurvedic tips: Bitter Gourd Juice For Diabetes

ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಹಾಗಲಕಾಯಿ ಜ್ಯೂಸ್ ಮಾಡುವ ವಿಧಾನ

ತಾಜಾ ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಅದರ ಮೇಲ್ಭಾಗದ ಸಿಪ್ಪೆಯನ್ನು ತೆಗೆಯಿರಿ ಹಾಗೂ ಇದನ್ನು ಮಧ್ಯಭಾಗದಲ್ಲಿ ಕತ್ತರಿಸಿ ಬೀಜವನ್ನು ಚಮಚದ ಮೂಲಕ ತೆಗೆಯಿರಿ. ಸಿಪ್ಪೆಯ ಕಹಿಯನ್ನು ನೀವು ಸಹಿಸಿಕೊಳ್ಳಬಲ್ಲಿರೆ೦ದಾದಲ್ಲಿ ಅದನ್ನು ತೆಗೆಯುವ ಅಗತ್ಯವಿಲ್ಲ. *ಅನೇಕರು ಹಾಗಲಕಾಯಿಯ ಮೇಲ್ಭಾಗದ ಸಿಪ್ಪೆಯನ್ನು ತೆಗೆಯುವ ಗೋಜಿಗೇ ಹೋಗುವುದಿಲ್ಲ. ಇನ್ನು ಹರಿತವಾದ ಚಾಕುವನ್ನು ಬಳಸಿ ಹಾಗಲಕಾಯಿಯನ್ನು ಸಣ್ಣದಾಗಿ ತುಂಡರಿಸಿಕೊಳ್ಳಿ.

Ayurvedic tips: Bitter Gourd Juice For Diabetes

*ನಂತರ ಇದನ್ನು ಒಂದು ಪಾತ್ರೆಗೆ ಹಾಕಿ ಮತ್ತು ನೀರಿನಲ್ಲಿ 30 ನಿಮಿಷಗಳ ಕಾಲ ಹಾಗಲಕಾಯಿಯನ್ನು ಮುಳುಗಿಸಿಡಿ.

*ಬೇಕಾದಲ್ಲಿ ಸ್ವಲ್ಪ ಉಪ್ಪು ಅಥವಾ ಲಿಂಬೆ ರಸವನ್ನು ಸೇರಿಸಿ ಇದರಿಂದ ಇದರ ಕಹಿ ನಿವಾರಣೆಯಾಗುತ್ತದೆ. ಅನ೦ತರ ಇವುಗಳನ್ನು ಮಿಕ್ಸರ್ ನಲ್ಲಿ ಹಾಕಿರಿ ಜೊತೆಗೆ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿರಿ. ಬಳಿಕ ಮಿಕ್ಸಿಯನ್ನು ಮಧ್ಯಮ ವೇಗದಲ್ಲಿ ತಿರುಗಿಸುವುದರ ಮೂಲಕ ಕಹಿ ಜ್ಯೂಸ್ ಅನ್ನು ಪಡೆದುಕೊಳ್ಳಿರಿ. ಚೋಟುದ್ದ ಹಾಗಲಕಾಯಿ-ಬಾಯಿಗೆ ಕಹಿ, ಆರೋಗ್ಯಕ್ಕೆ ಸಿಹಿ

ದಯವಿಟ್ಟು ಗಮನಿಸಿ:

Ayurvedic tips: Bitter Gourd Juice For Diabetes

*ಒಂದು ದಿನಕ್ಕೆ ಎರಡು ಹಾಗಲಕಾಯಿಗಳಿಗಿಂತ ಹೆಚ್ಚು ಸೇವಿಸಬಾರದು, ಏಕೆಂದರೆ ಇದರಿಂದ ಅತಿಸಾರ ಉಂಟಾಗಬಹುದು.

*ಖಾಲಿಹೊಟ್ಟೆಯಲ್ಲಿ ಸೇವಿಸುವ ಮುನ್ನ ಒಮ್ಮೆ ನಿಮ್ಮ ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ

*ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಇರುವ ಮಧುಮೇಹಿಗಳು ಒಂದು ವೇಳೆ ಇದಕ್ಕಾಗಿ ಔಷಧಿಗಳನ್ನು (hypoglycemic drugs) ಸೇವಿಸುತ್ತಿದ್ದರೆ ಹಾಗಲಕಾಯಿಯ ನಿಯಮಿತ ಸೇವನೆಯ ಮೂಲಕ ಈ ಔಷಧಿಯ ಪ್ರಮಾಣವನ್ನು ಕಡಿಮೆಗೊಳಿಸಬಹುದು. ಯಾವುದಕ್ಕೂ ಮೊದಲು ವೈದ್ಯರ ಸಲಹೆ ಪಡೆಯಿರಿ. ಟೈಪ್‌-2 ಮಧುಮೇಹಕ್ಕೆ, ಇಲ್ಲಿದೆ ನೋಡಿ ಆಯುರ್ವೇದ ಚಿಕಿತ್ಸೆ

English summary

Ayurvedic tips: Bitter Gourd Juice For Diabetes

If you are suffering from diabetes, you should take bitter gourd juice early every morning on an empty stomach for best results. Though most people appreciate its effectiveness, most are unable to look past its bitter taste. However, a little time with a bad aftertaste is better than bad health, right? have a look
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Boldsky sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Boldsky website. However, you can change your cookie settings at any time. Learn more