Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ಮಾವಿನ ಎಲೆ: ಮಧುಮೇಹ, ಅಸ್ತಮಾ ರೋಗಕ್ಕೆ ರಾಮಬಾಣ
ಹಣ್ಣುಗಳ ರಾಜನಾದ ಮಾವಿನ ಹಣ್ಣು ಒಂದು ಅತ್ಯುತ್ತಮವಾದ ಫಲವಾಗಿದ್ದು ಇದರ ರುಚಿಯನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇವಲ ರುಚಿ ಮಾತ್ರವಲ್ಲ, ಇದರಲ್ಲಿ ಹಲವು ಆರೋಗ್ಯಕರ ಗುಣಗಳೂ ಇವೆ. ಒಂದೇ ತಿಂಗಳಿನಲ್ಲಿ ಮಧುಮೇಹ ನಿಯಂತ್ರಣ-ಚಾಲೆಂಜ್‌ಗೆ ರೆಡಿನಾ?
ಅಂತೆಯೇ ಮಾವಿನ ಎಲೆಗಳನ್ನು ಸಹಾ ತಳಿರು ತೋರಣದ ಹೊರತಾಗಿ ಕೆಲವು ಕಾಯಿಲೆಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಬಹುದು. ಇದರಲ್ಲಿರುವ ಹಲವು ಪೋಷಕಾಂಶಗಳಲ್ಲಿ ಚಿಕಿತ್ಸಕ ಮತ್ತು ಔಷಧೀಯ ಗುಣಗಳಿವೆ. ಬನ್ನಿ ಈ ಗುಣಗಳು ಯಾವ ರೀತಿಯಲ್ಲಿ ನಮಗೆ ಉಪಯುಕ್ತವಾಗಿವೆ ಎಂಬುದನ್ನು ನೋಡೋಣ... ಇಂತಹ ಸರಳ ಟಿಪ್ಸ್ ಅನುಸರಿಸಿ, ಅಸ್ತಮಾದಿಂದ ದೂರವಿರಿ!

ಮಧುಮೇಹವನ್ನು ನಿಯಂತ್ರಿಸುತ್ತದೆ
ಮಾವಿನ ಎಲೆಗಳಲ್ಲಿರುವ ಪೋಷಕಾಂಶಗಳು ರಕ್ತದಲ್ಲಿ ಸಕ್ಕರೆಯ ಅಂಶವನ್ನು ನಿಯಂತ್ರಣದಲ್ಲಿರಿಸುವ ಕ್ಷಮತೆ ಹೊಂದಿರುವ ಕಾರಣ ಇದು ಮಧುಮೇಹಿಗಳಿಗೆ ಉತ್ತಮವಾದ ಔಷಧಿಯಾಗಿದೆ. ಮಧುಮೇಹವಿರುವ ಇಲಿಗಳ ಮೇಲೆ ಪ್ರಯೋಗಿಸಿ ನೋಡಿದಾಗ ಇದು ರಕ್ತದಲ್ಲಿ ಅಧಿಕ ಪ್ರಮಾಣದ ಸಕ್ಕರೆಯನ್ನು ಕಡಿಮೆಗೊಳಿಸಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ.

ಅಸ್ತಮಾ ರೋಗಕ್ಕೆ ಚಿಕಿತ್ಸೆ ನೀಡುತ್ತದೆ
ಮಧುಮೇಹದಂತೆಯೇ ಅಸ್ತಮಾ ರೋಗಕ್ಕೂ ಮಾವಿನ ಎಲೆಗಳ ಪೋಷಕಾಂಶಳು ಉತ್ತಮವಾದ ಔಷಧಿಯಾಗಿದೆ. ಇದು ಬರೆಯ ಭಾರತದಲ್ಲಿ ಮಾತ್ರವಲ್ಲ, ಚೀನಾದಲ್ಲೂ ನೂರಾರು ವರ್ಷಗಳಿಂದ ಚಿಕಿತ್ಸಾರೂಪದಲ್ಲಿ ಮಾವಿನ ಎಲೆಗಳನ್ನು ಬಳಸಲಾಗುತ್ತಾ ಬರಲಾಗಿದೆ.

ಸೋಂಕಿನಿಂದ ರಕ್ಷಿಸುತ್ತದೆ
ಮಾವಿನ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಮತ್ತು ಔಷಧೀಯ ಗುಣಗಳು ಹಲವು ರೀತಿಯ ಬ್ಯಾಕ್ಟೀರಿಯಾಗಳ ಸೋಂಕಿನಿಂದ ರಕ್ಷಿಸುತ್ತದೆ. ವಿಶೇಷವಾಗಿ ಜೀರ್ಣಕ್ರಿಯೆಯಲ್ಲಿ ತೊಂದರೆ ಮತ್ತು ಗಡ್ಡೆಗಳಾಗದಂತೆ ರಕ್ಷಿಸುತ್ತದೆ.

ವೈರಸ್ಸುಗಳ ಸೋಂಕಿನಿಂದಲೂ ರಕ್ಷಣೆ ನೀಡುತ್ತದೆ
ಮಾವಿನ ಎಲೆಗಳನ್ನು ಕೊಳೆಸಿದಾಗ ಇದರಲ್ಲಿ ಆಂಟಿಆಕ್ಸಿಡೆಂಟುಗಳು ಬಹಳಷ್ಟು ಹೆಚ್ಚುತ್ತವೆ. ಈ ದ್ರವ ಒಂದು ಉತ್ತಮ ಸೌಂದರ್ಯವರ್ಧಕವೂ ಹೌದು. ವೈರಸ್ಸಿನ ಸೋಂಕು ಇರುವಲ್ಲಿ ಈ ದ್ರವವನ್ನು ಬಳಸಿದಾಗ ದೇಹದ ರೋಗ ನಿರೋಧಕ ಶಕ್ತಿ ಈ ಸೋಂಕನ್ನು ಎದುರಿಸಲು ಹೆಚ್ಚು ಸಬಲಗೊಂಡಿರುವುದು ಸಂಶೋಧನೆಗಳಲ್ಲಿ ಕಂಡುಬಂದಿದೆ.

ಇದರ ಬಳಕೆ ಹೇಗೆ?
ಕೆಲವು ಎಳೆಯ ಮಾವಿನ ಎಲೆಗಳನ್ನು ಕೊಂಚ ಜಜ್ಜಿ ಮುಳುಗುವಷ್ಟು ನೀರಿನಲ್ಲಿ ಕುದಿಸಿ. ಬಳಿಕ ಈ ನೀರನ್ನು ಸೋಸಿ ತಣಿಸಿ ಸಂಗ್ರಹಿಸಿ. ಈ ನೀರನ್ನು ಸೋಂಕಿರುವ ಸಮಯದಲ್ಲಿ ಸೇವಿಸುತ್ತಾ ಬನ್ನಿ. ಇನ್ನೊಂದು ವಿಧಾನದಲ್ಲಿ ಎಳೆಯ ಮಾವಿನ ಎಲೆಗಳನ್ನು ಚೆನ್ನಾಗಿ ಒಣಗಿಸಿ ಕುಟ್ಟಿ ಪುಡಿಮಾಡಿ ಬಾಟಲಿಯಲ್ಲಿ ಸಂಗ್ರಹಿಸಿ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ

ಇದರ ಬಳಕೆ ಹೇಗೆ?
ಅನಾರೋಗ್ಯದ ಸಮಯದಲ್ಲಿ ಈ ಪುಡಿಯನ್ನು ಒಂದು ಲೋಟ ನೀರಿಗೆ ಒಂದು ಚಮಚದಷ್ಟು ಸೇರಿಸಿ ಕಲಕಿ ಕುಡಿಯಿರಿ. ಇನ್ನೂ ಉತ್ತಮ ವಿಧಾನವೆಂದರೆ ಎಳೆಯ ಎಲೆಗಳನ್ನು ಹಸಿಯಾಗಿ ಜಗಿದು, ಕೊಂಚ ಒಗರಾಗಿದ್ದರೂ ಸಹಿಸಿ ನುಂಗಿಬಿಡಿ.



Click it and Unblock the Notifications