Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅಧ್ಯಯನ ವರದಿ: ಕೃತಕ ಸಿಹಿಯಿಂದ ಟೈಪ್-2 ಮಧುಮೇಹದ ಅಪಾಯ ಹೆಚ್ಚು!
ಸಕ್ಕರೆ ಸೇವನೆ ಕಡಿಮೆ ಮಾಡುವ ಉದ್ದೇಶದಿಂದ ನೀವು ಕೃತಕ ಸಿಹಿ ಬಳಸುತ್ತಾ ಇದ್ದರೆ ಅದು ಖಂಡಿತವಾಗಿಯೂ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಯಾಕೆಂದರೆ ಕೃತಕ ಸಿಹಿಯಿಂದ ಟೈಪ್ 2 ಮಧುಮೇಹ ಬರುವುದು ಎಂದು ಅಧ್ಯಯನಗಳು ಹೇಳಿವೆ. ಕೃತಕ ಸಿಹಿಯು ಎರಡನೇ ಹಂತದ ಮಧುಮೇಹದ ಅಪಾಯ ಹೆಚ್ಚಿಸುವುದು ಎಂದು ಆಸ್ಟ್ರೇಲಿಯಾದ ಅಡಿಲೇಟ್ ವಿಶ್ವವಿದ್ಯಾನಿಲಯವು ನಡೆಸಿರುವ ಅಧ್ಯಯನವು ಹೇಳಿದೆ.

ಕೇವಲ ಎರಡು ವಾರಗಳ ಕಾಲ ಕೃತಕ ಸಿಹಿ ಸೇವನೆ ಮಾಡಿದರೆ ಗ್ಲೂಕೋಸ್‌ಗೆ ದೇಹವು ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ತಿಳಿದುಬಂದಿದೆ ಎಂದು ಅಧ್ಯಯನಗಳು ತಿಳಿಸಿವೆ. ಈ ಅಧ್ಯಯನಕ್ಕಾಗಿ ಸುಮಾರು 27 ಮಂದಿ ಆರೋಗ್ಯವಂತ ಜನರನ್ನು ಆಯ್ಕೆ ಮಾಡಿಕೊಳ್ಳಲಾಯಿತು.
ಇವರಿಗೆ ಪ್ರತೀ ದಿನ 1.5 ಲೀ.ನಷ್ಟು ಎರಡು ಬಗೆಯ ಕೃತಕ ಸಿಹಿ ನೀಡಲಾಯಿತು. ಕೃತಕ ಸಿಹಿಯನ್ನು ಮಾತ್ರೆಗಳ ಮೂಲಕ ದಿನಕ್ಕೆ ಮೂರು ಸಲ ಎರಡು ವಾರ ತನಕ ನೀಡಲಾಯಿತು. ಎರಡು ವಾರ ಬಳಿಕ ಗ್ಲೂಕೋಸ್‌ಗೆ ದೇಹವು ಹೇಗೆ ಪ್ರತಿಕ್ರಿಯಿಸಿದೆ ಎಂದು ಪರೀಕ್ಷಿಸಲಾಯಿತು.
ಕೃತಕ ಸಿಹಿಯಿಂದಾಗಿ ಗ್ಲೂಕೋಸ್ ಹೀರಿಕೆಯ ಮಟ್ಟವು ಹೆಚ್ಚಾಗಿದೆ. ಊಟದ ಬಳಿಕ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಹೆಚ್ಚಾಗುವುದನ್ನು ನಿಯಂತ್ರಿಸುವ ಶಕ್ತಿಯು ಕಡಿಮೆಯಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಅಧ್ಯಯನದ ವರದಿಯನ್ನು ಇತ್ತೀಚೆಗೆ ಪೂರ್ಚುಗಲ್‌ನ ಲಿಸ್ಬೇನ್ ನಲ್ಲಿರುವ ಯುರೋಪಿಯನ್ ಅಸೋಸಿಯೇಷನ್ ಫಾರ್‌ದ ಸ್ಟಡಿ ಆಫ್ ಡಯಾಬಿಟಿಸ್‌ನ ವಾರ್ಷಿಕ ಸಭೆಯಲ್ಲಿ ಮಂಡಿಸಲಾಯಿತು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

