Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಸಕ್ಕರೆ ಖಾಯಿಲೆಯವರು ಕಾಫಿ ಕುಡಿಯಬಹುದಾ?

ಡ್ಯೂಕ್ ಮೆಡಿಕಲ್ ಸೆಂಟರ್ ನಡೆಸಿದ ಈ ಸಂಶೋಧನೆ, ಕಾಫಿ ಸೇವನೆ ತ್ಯಜಿಸಿದರೆ ಸಕ್ಕರೆ ಖಾಯಿಲೆಯನ್ನು ಸುಲಭವಾಗಿ ನಿಯಂತ್ರಿಸಬಹುದು ಎಂದಿದೆ.
ದಿನನಿತ್ಯ ಸೇವಿಸುವ ಕಾಫಿ, ಟೀ ಮತ್ತು ಇನ್ನಿತರ ತಂಪು ಪಾನೀಯದಲ್ಲಿನ ಕೆಫೆನ್ ಅಂಶ ಮಧುಮೇಹಿಗಳಿಗೆ, ಅದರಲ್ಲೂ ಟೈಪ್ 2 ಡಯಾಬಿಟಿಸ್ ಇದ್ದವರ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಿಸುತ್ತದೆ ಮತ್ತು ಈ ಖಾಯಿಲೆ ನಿಯಂತ್ರಣ ಕಷ್ಟವಾಗುತ್ತದೆ ಎಂದು ತಿಳಿಸಿದೆ.
ವ್ಯಾಯಾಮ, ಆಹಾರ ಕ್ರಮವನ್ನು ಸರಿಯಾಗಿ ಅನುಸರಿಸಿದರೂ, ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ಹೊಂದಲು ಕಾಫಿ ಸೇವನೆ ಅಡ್ಡ ಬರುತ್ತದೆ ಎನ್ನಲಾಗಿದೆ.
ದಿನಕ್ಕೆ 2 ಬಾರಿ ಕಾಫಿ ಕುಡಿಯುತ್ತಿದ್ದ 10 ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿ, ಅವರಿಗೆ 72 ಗಂಟೆಗಳ ಕಾಲ ಗ್ಲೂಕೋಸ್ ಮಾನಿಟರ್ ಅಳವಡಿಸಿದಾಗ, ಕಾಫಿ ಸೇವನೆಯಿಂದ 8% ಸಕ್ಕರೆ ಅಂಶ ಹೆಚ್ಚಾಗಿರುವುದು ಕಂಡುಬಂದಿದೆ.
ಕಾಫಿ ಸೇವನೆ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಿಸುವ ಹಾರ್ಮೋನಾದ ಅಡ್ರೆನಲೈನ್ ಅನ್ನು ಹೆಚ್ಚು ಬಿಡುಗಡೆ ಮಾಡುವುದು ಸಕ್ಕರೆ ಅಂಶ ಹೆಚ್ಚಲು ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಕಾಫಿ ಮತ್ತು ಕೆಫೆನ್ ಅಂಶ ಹೊಂದಿರುವ ಇನ್ನಿತರ ಪಾನೀಯಗಳನ್ನು ತ್ಯಜಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು ಎಂದಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
