Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಪುರುಷರ ಆಕರ್ಷಕ ಮೈಕಟ್ಟಿಗೆ ಬೇಕು ಕಟ್ಟುನಿಟ್ಟಿನ ಡಯಟ್

1.ಬಾಳೆಹಣ್ಣು: ದಿನವೂ ಬೆಳಗ್ಗೆ 2 ಬಾಳೆಹಣ್ಣನ್ನು ಸೇವಿಸಬೇಕು. ಬಾಳೆಹಣ್ಣಿನಲ್ಲಿರುವ ಪೊಟಾಷ್ಯಯಂ ಮತ್ತು ಮ್ಯಾಗ್ನಿಷಿಯಂ ದೇಹದಲ್ಲಿ ರಕ್ತಸಂಚಲನ ಸಮರ್ಪಕವಾಗಿ ಆಗುವಂತೆ ಮಾಡಿ ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಹೊಸ ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ. ಬಾಳೆಹಣ್ಣು ಸೇವಿಸಿದರೆ ಚಟುವಟಿಕೆಯಿಂದ ಕಾರ್ಯನಿರ್ವಹಿಸುವಂತೆ ಮಾಡುವುದು.
2.ಮೃದ್ವಂಗಿಗಳು(Oysters): ಮೃದ್ವಂಗಿಗಳಲ್ಲಿ ಅಧಿಕ ತವರ ಅಥವಾ ಸತು, ಖನಿಜಾಂಶಗಳು ಇವೆ. ಈ ಪೋಷಕಾಂಶ ಸೇವನೆಯಿಂದ ವೀರ್ಯಾಣುಗಳ ಉತ್ಪತ್ತಿ ಜಾಸ್ತಿಯಾಗುತ್ತದೆ ಮತ್ತು ಇದು ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ತಡೆಗಟ್ಟಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ.
3. ಎಲೆಕೋಸು: ಎಲೆಕೋಸಿನಲ್ಲಿ ಕ್ಯಾಲೋರಿ ಅಂಶ ಕಡಿಮೆ ಇದ್ದು ವಿಟಮಿನ್, ಖನಿಜಾಂಶ ಮತ್ತು ಪ್ರೊಟೀನ್ ಅಧಿಕವಾಗಿರುತ್ತದೆ. ಇದನ್ನು ಸೇವಿಸಿರುವುದರಿಂದ ಕ್ಯಾನ್ಸರ್ ತಡೆಗಟ್ಟುವುದರ ಜೊತೆಗೆ ಜೀರ್ಣಕ್ರಿಯೆ ಮತ್ತು ಕೂದಲಿನ ಬೆಳವಣಿಗೆಗೆ ಸಹಾಯಮಾಡುತ್ತದೆ.
4. ಬಸಳೆ ಮತ್ತು ಪಾಲಾಕ್ ಸೊಪ್ಪು: ಬಸಳೆ ಮತ್ತು ಪಾಲಾಕ್ ಸೊಪ್ಪಿನ ಸೇವನೆಯಿಂದ ದೇಹದಲ್ಲಿ ರಕ್ತದ ಉತ್ಪತ್ತಿ ಹೆಚ್ಚಾಗುತ್ತದೆ. ಅಲ್ಲದೆ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟುವಲ್ಲಿ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಪರಿಣಾಮಕಾರಿಯಾಗಿದೆ.
5. ದವಸ ಧಾನ್ಯಗಳು: ದವಸ ಧಾನ್ಯಗಳಲ್ಲಿ ವಿಟಮಿನ್, ಖನಿಜಾಂಶ ಮತ್ತು ನಾರಿನಂಶಗಳು ಅಧಿಕವಾಗಿರುವುದರಿಂದ ದೇಹದಲ್ಲಿರುವ ಅಧಿಕ ಬೊಜ್ಜನ್ನು ಕರಗಿಸಿ ತೂಕವನ್ನು ಸಮತೋಲನದಲ್ಲಿಡುತ್ತದೆ.
ಸದೃಢವಾದ ಮೈಕಟ್ಟು ಹೊಂದಬೇಕೆಂದರೆ ಈ ಮೇಲಿನ 5 ಆಹಾರಗಳನ್ನು ಡಯಟ್ ನಲ್ಲಿ ಕಡ್ಡಾಯವಾಗಿ ಸೇರಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
