Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಬೊಜ್ಜು ಹೊಟ್ಟೆ ತರುವುದು ನಾನಾ ಕಾಯಿಲೆ

1. ವ್ಯಾಯಾಮ ಮಾಡದಿರುವುದು: ಬೊಜ್ಜಿನ ಹೊಟ್ಟೆ ಬರಲು ಪ್ರಮುಖ ಕಾರಣ ಪ್ರತಿದಿನ ವ್ಯಾಯಾಮ ಮಾಡದಿರುವುದು. ಸರಿಯಾದ ದೈಹಿಕ ಶ್ರಮವಿಲ್ಲದಿದ್ದರೆ ಬೊಜ್ಜಿನ ಹೊಟ್ಟೆ ಬರುವುದು.
2. ಅಧಿಕ ಕೊಲೆಸ್ಟ್ರಾಲ್: ದೇಹ ಸಣ್ಣಗೆ ಇದ್ದು ಹೊಟ್ಟೆ ಮಾತ್ರ ದಪ್ಪವಿದ್ದರೆ ಇದರಿಂದಾಗಿ ಕೊಲೆಸ್ಟ್ರಾಲ್ ತೊಂದರೆ ಉಂಟಾಗುತ್ತದೆ. ಈ ರೀತಿ ಹೊಟ್ಟೆ ಬರುತ್ತಿದ್ದರೆ ಕೊಲೆಸ್ಟ್ರಾಲ್ ಇದೆಯೇ ಎಂದು ಪರೀಕ್ಷಿಸಿ , ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಔಷಧಿ ಮತ್ತು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಬೇಕು.
3. ಬೀರ್: ಬೀರ್ ಅನ್ನು ಮಿತಿಯಲ್ಲಿ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದೇ ಮಿತಿ ಮಿರಿ ಕುಡಿದರೆ ಬೊಜ್ಜು ಹೊಟ್ಟೆ ಬರಲಾರಂಭಿಸುತ್ತದೆ.
ಈ ರೀತಿಯ ಬೊಜ್ಜಿನಿಂದ ಈ ಕೆಳಗಿನ ಸಮಸ್ಯೆಗಳು ಕಂಡು ಬರುತ್ತದೆ.
1. ಅಧಿಕ ರಕ್ತದೊತ್ತಡ: ಬೊಜ್ಜು ಹೆಚ್ಚಾದಂತೆ ಒಬೆಸಿಟಿ ತೊಂದರೆ ಕಾಣಿಸಿಕೊಳ್ಳುತ್ತದೆ. ಒಬೆಸಿಟಿ ಹೆಚ್ಚಾದಂತೆ ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ ಕಾಣಿಸಿಕೊಳ್ಳುವುದು.
2. ಮಕ್ಕಳಾಗದಿರುವುದು: ಅಧಿಕ ಬೊಜ್ಜಿದ್ದರೆ ಮಹಿಳೆಯರಲ್ಲಿ ಮಕ್ಕಳಾಗುವ ಸಾಧ್ಯತೆ ಕಡಿಮೆ. ಪುರುಷರಲ್ಲೂ ಕೂಡ ಅಧಿಕ ಬೊಜ್ಜಿನಿಂದ ದೇಹದ ಉಷ್ಣತೆ ಹೆಚ್ಚಾಗಿ ವೀರ್ಯಾಣುಗಳು ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿಯಾಗುವುದರಿಂದ ಮಕ್ಕಳಾಗುವ ಸಾಧ್ಯತೆ ಕಡಿಮೆಯಾಗುವುದು.
3. ಮರೆವು: ಒಬೆಸಿಟಿ ಇರುವವರಿಗೆ ಅಲ್ಜೈಮರ್ಸ್ ಅಥವಾ ಮರೆವು ಕಂಡು ಬರುತ್ತದೆ.
ಈ ಎಲ್ಲಾ ಸಮಸ್ಯೆಗಳು ಬರದಂತೆ ತಡೆಯಲು ವ್ಯಾಯಾಮ ಮತ್ತು ಆಹಾರಕ್ರಮ ಉತ್ತಮ ವಿಧಾನವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
