Latest Updates
-
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ 72 ಗಂಟೆಗಳ ಪ್ಲಾನ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: AQI ಏರಿಕೆ, ಹೊರಗೆ ಹೋಗುವ ಮುನ್ನ ಈ ಮಾಸ್ಕ್ ಧರಿಸುವುದು ಕಡ್ಡಾಯ! -
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ? -
ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಭಾರತದ ಗೆಲುವಿನ ಸಂಭ್ರಮಕ್ಕೆ ಇಲ್ಲಿದೆ ವೈರಲ್ ಮೀಮ್ಸ್ ಮತ್ತು ಸೇಫ್ ಸೆಲೆಬ್ರೇಷನ್ ಗೈಡ್! -
ಕೋಲ್ಕತ್ತಾದಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಸುರಕ್ಷಿತ ಸಮಯ ಮತ್ತು ಮಾರ್ಗಗಳನ್ನು ತಪ್ಪದೇ ತಿಳಿಯಿರಿ
ಕಾಯಿಲೆಗಳಿಗೆ ಆಹ್ವಾನ ನೀಡುವ ಒಬೆಸಿಟಿ

ಒಬೆಸಿಟಿ ಬರುತ್ತಿರುವಾಗ ನಿಯಂತ್ರಣ ಮಾಡುವುದು ಸುಲಭ. ಬೊಜ್ಜು ಬರುತ್ತಿದ್ದಾಗ ಆಲಸ್ಯ ತೋರಿಸಿ ನಂತರ ಇದರಿಂದಾಗಿ ಇತರ ಕಾಯಿಲೆಗಳು ಪ್ರಾರಂಭವಾದ ಮೇಲೆ ವಾಕಿಂಗ್, ಡಯಟ್ ಮಾಡುವವರೇ ಹೆಚ್ಚು. ಈ ರೀತಿ ಒಬೆಸಿಟಿ ಬಂದರೆ ಈ ಕೆಳಗಿನ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತದೆ.
ಕಿಡ್ನಿ ಕ್ಯಾನ್ಸರ್: ಇಂಗ್ಲೆಂಡ್‌ನಲ್ಲಿ ನಡೆಸಿದ ಸಂಸೋಧನೆಯಲ್ಲಿ ಒಬೆಸಿಟಿ ಕಿಡ್ನಿ ಕ್ಯಾನ್ಸರ್ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದು ತಿಳಿದು ಬಂದಿದೆ. ಒಬೆಸಿಟಿ ಇರುವವರಿಗೆ 70% ಕಿಡ್ನಿ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಈ ಸಂಶೋಧನೆಯಲ್ಲಿ ಹೇಳಲಾಗಿದೆ. ಒಬೆಸಿಟಿಗೆ ಕಾರಣವಾಗುವ ಹಾರ್ಮೋನ್ ಗಳ ಉತ್ಪತ್ತಿ ಹೆಚ್ಚಾಗಿ ಕಿಡ್ನಿ ಕ್ಯಾನ್ಸರ್ ಉಂಟಾಗುವುದು. ಶೇ. 25 ರಷ್ಟು ಪುರುಷರಲ್ಲಿ ಮತ್ತು ಶೇ. 22ರಷ್ಟು ಮಹಿಳೆಯರಲ್ಲಿ ಕಿಡ್ನಿ ಕ್ಯಾನ್ಸರ್ ಉಂಟಾಗಲು ಒಬೆಸಿಟಿ ಒಂದು ಪ್ರಮುಖ ಕಾರಣವಾಗಿದೆ.
ಲೈಂಗಿಕ ನಿಶ್ಯಕ್ತಿ: ಒಬೆಸಿಟಿ ಇರುವವರಿಗೆ ಕ್ರಮೇಣ ಲೈಂಗಿಕ ನಿಶ್ಯಕ್ತಿ ಸಮಸ್ಯೆ ಕಂಡು ಬರುವುದು. ಸ್ವಲ್ಪ ಕೆಲಸ ಮಾಡಿದರೆ ಸುಸ್ತು, ನಡೆದಾಡಲು ಕಷ್ಟ ಮುಂತಾದ ತೊಂದರೆಗಳು ಕಂಡುಬರುತ್ತದೆ.
ರೋಗ ನಿರೋಧಕ ಸಾಮರ್ಥ್ಯ ಕುಗ್ಗುವುದು: ಒಬೆಸಿಟಿ ಹೆಚ್ಚಾದಂತೆ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಕುಗ್ಗುತ್ತಾ ಹೋಗುತ್ತದೆ.
ಜೀರ್ಣಕ್ರಿಯೆ: ದೇಹದ ತೂಕ ಹೆಚ್ಚಾದಂತೆ ಜೀರ್ಣಕ್ರಿಯೆಯಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕಂಡು ಬರುವುದು. ಮಂಡಿ ನೋವು ಕಾಣಿಸಿಕೊಳ್ಳುವುದು.
ಹೃದಯ ಸಂಬಂಧಿ ಕಾಯಿಲೆಗಳು: ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ನಡೆಯದೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುವುದು. ದೇಹದ ತೂಕ ಹೆಚ್ಚಾದಂತೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು.
ಸಲಹೆ: ದೇಹದ ತೂಕ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದ ತಕ್ಷಣ ಅದನ್ನು ನಿಯಂತ್ರಿಸಲು ಕಠಿಣ ವ್ಯಾಯಾಮ ಮತ್ತು ಕಟ್ಟುನಿಟ್ಟಿನ ಆಹಾರಕ್ರಮ ಪಾಲಿಸಿ, ಇದರಿಂದ ಒಬೆಸಿಟಿ ಸಮಸ್ಯೆ ಬರದಂತೆ ತಡೆಯಬಹುದು, ಒಬೆಸಿಟಿ ನಿಯಂತ್ರಣಕ್ಕೆ ಬಂದರೆ ಉಳಿದ ಕಾಯಿಲೆಗಳು ಬರುವ ಸಾಧ್ಯತೆ 90% ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
